Homeಮುಖಪುಟಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

ಬಿಹಾರ: ಬಡತನದಲ್ಲಿರುವ 94 ಲಕ್ಷಕ್ಕೂ ಹೆಚ್ಚು ಕುಟುಂಬಗಳು: ಜಾತಿಗಣತಿಯಲ್ಲಿ ಬಹಿರಂಗ

- Advertisement -
- Advertisement -

ಬಿಹಾರದಲ್ಲಿ ಮೂರನೇ ಒಂದು ಭಾಗಕ್ಕಿಂತಲೂ ಹೆಚ್ಚು ಕುಟುಂಬಗಳು ಬಡತನದಲ್ಲಿ ವಾಸಿಸುತ್ತಿದ್ದು, ಮಾಸಿಕ 6,000 ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿದೆ ಎಂದು ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಜಾತಿಗಣತಿಯ ವಿವರವಾದ ವರದಿಯಲ್ಲಿ ತಿಳಿಸಲಾಗಿದೆ.

ವರದಿಯು ಮೇಲ್ಜಾತಿಗಳಲ್ಲಿ ಬಡತನ ಇರುವುದು ಒಪ್ಪಿಕೊಂಡಿದೆ. ಆದರೆ ಶೇಕಡಾವಾರು ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಲ್ಲಿ ಬಡತನ ಹೆಚ್ಚಾಗಿದೆ ಎನ್ನುವುದು ಬಯಲಾಗಿದೆ.

ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಮಂಡಿಸಿದ ವರದಿಯ ಪ್ರಕಾರ, ರಾಜ್ಯದಲ್ಲಿ ಸುಮಾರು 2.97 ಕೋಟಿ ಕುಟುಂಬಗಳು ನೆಲೆಸಿದೆ. ಅದರಲ್ಲಿ 94 ಲಕ್ಷಕ್ಕೂ ಹೆಚ್ಚು ಕುಟುಂಬ (ಶೇ 34.13) ಬಡತನದಲ್ಲಿದೆ.

ಜಾತಿಗಣತಿಯಲ್ಲಿ ಪತ್ತೆಯಾದ ಮತ್ತೊಂದು ಪ್ರಮುಖ ಸಂಶೋಧನೆಯೆಂದರೆ 50 ಲಕ್ಷಕ್ಕೂ ಹೆಚ್ಚು ಬಿಹಾರದ ಜನರು ಜೀವನೋಪಾಯಕ್ಕಾಗಿ ಅಥವಾ ಉತ್ತಮ ಶಿಕ್ಷಣಕ್ಕಾಗಿ ರಾಜ್ಯದ ಹೊರಗೆ ವಾಸಿಸುತ್ತಿದ್ದಾರೆ. ಇತರ ರಾಜ್ಯಗಳಲ್ಲಿ ಜೀವನ ಸಾಗಿಸುತ್ತಿರುವವರು ಸುಮಾರು 46 ಲಕ್ಷದಷ್ಟಿದ್ದರೆ. 2.17 ಲಕ್ಷ ಜನರು ವಿದೇಶದಲ್ಲಿ ಇದ್ದಾರೆ.

ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಸುಮಾರು 5.52 ಲಕ್ಷದಷ್ಟಿದ್ದರೆ, ಸುಮಾರು 27,000 ಮಂದಿ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಮಂಡಿಸಲಾದ ವಿವರಗಳಲ್ಲಿ ಮೇಲ್ಜಾತಿಗಳಲ್ಲಿ ಬಡತನದ ಪ್ರಮಾಣವು ಶೇ.25ಕ್ಕಿಂತ ಹೆಚ್ಚು ಎಂದು ಹೇಳಲಾಗಿದೆ.

ಅ.2ರಂದು ಜಾತಿಗಣತಿಯ ಪ್ರಾಥಮಿಕ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಜಾತಿಗಣತಿ ನಡೆಸಲು ಕೇಂದ್ರವು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಸರ್ಕಾರವು ಈ ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯಲ್ಲಿ ಒಬಿಸಿಗಳು ಮತ್ತು ಅತ್ಯಂತ ಹಿಂದುಳಿದ ವರ್ಗಗಳು (ಇಬಿಸಿಗಳು) ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 60ಕ್ಕಿಂತ ಹೆಚ್ಚು ಇದ್ದಾರೆ ಎಂದು ತಿಳಿಸಿತ್ತು.

ಬಿಹಾರ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಿದ ಮೊದಲ ರಾಜ್ಯವಾಗಿದೆ. ವರದಿಯಲ್ಲಿ ಒಟ್ಟು ಜನಸಂಖ್ಯೆಯಲ್ಲಿ 6,41,31,992 ಪುರುಷರು, 6,11,38,460 ಮಹಿಳೆಯರು, 2,836 ತೃತಿಯ ಲಿಂಗಿಗಳಿದ್ದಾರೆ. ಇದರಲ್ಲಿ 19ರಷ್ಟು ಜನರನ್ನು ಪರಿಶಿಷ್ಟ ಜಾತಿ, 1.68% ಪರಿಶಿಷ್ಟ ಪಂಗಂಡ, 27.12% ಒಬಿಸಿ, 36.01% ಇಬಿಸಿ ಜನರಿದ್ದಾರೆ.

ಭೂಮಿಹಾರ್ ಜನಸಂಖ್ಯೆ ಶೇಕಡಾ 2.86ರಷ್ಟಿದ್ದರೆ, ಬ್ರಾಹ್ಮಣರು ಶೇಕಡಾ 3.66ರಷ್ಟಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸಮುದಾಯಕ್ಕೆ ಸೇರಿದ ಕುರ್ಮಿಗಳು ಜನಸಂಖ್ಯೆ ಶೇಕಡಾ 2.87ರಷ್ಟಿದ್ದಾರೆ. ಮುಸಾಹರ್‌ಗಳು ಶೇಕಡಾ 3ರಷ್ಟಿದ್ದಾರೆ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಮುದಾಯಕ್ಕೆ ಸೇರಿದ ಯಾದವರು ಜನಸಂಖ್ಯೆಯ ಶೇಕಡಾ 14ರಷ್ಟಿದ್ದಾರೆ ಎಂದು ವರದಿ ತಿಳಿಸಿತ್ತು.

ಇದನ್ನು ಓದಿ: ಪುತ್ತೂರು: ಪ್ರಖ್ಯಾತ ಹುಲಿ ವೇಷ ಕುಣಿತ ತಂಡದ ಸದಸ್ಯನ ಬರ್ಬರ ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...