Homeಮುಖಪುಟರಾಹುಲ್ ಗಾಂಧಿಯೇ ಪಕ್ಷದ ಅಧ್ಯಕ್ಷರಾಗಲಿ ಎಂಬುದು 99.9% ನಾಯಕರ ಬಯಕೆ: ಸುರ್ಜೆವಾಲ

ರಾಹುಲ್ ಗಾಂಧಿಯೇ ಪಕ್ಷದ ಅಧ್ಯಕ್ಷರಾಗಲಿ ಎಂಬುದು 99.9% ನಾಯಕರ ಬಯಕೆ: ಸುರ್ಜೆವಾಲ

"ಪಕ್ಷದ ಅಧ್ಯಕ್ಷರನ್ನು ಆರಿಸಲು ನ್ಯಾಯಯುತವಾದ ಚುನಾವಣೆಯನ್ನು ಆಶ್ರಯಿಸಬೇಕು. ಇಲ್ಲದಿದ್ದರೆ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು"

- Advertisement -
- Advertisement -

ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷವು ನಾವಿಕನಿಲ್ಲದ ದೋಣಿಯಂತಾಗಿದೆ. ಇದಕ್ಕೆ ನಾವಿಕನನ್ನು ಹುಡುಕಲು ನ್ಯಾಯಯುತವಾದ ಚುನಾವಣೆಯನ್ನು ಆಶ್ರಯಿಸಬೇಕು, ಇಲ್ಲದಿದ್ದರೆ ಪಕ್ಷಕ್ಕೆ ಉಳಿಗಾಲವಿಲ್ಲ ಎಂದು ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಈ ಕುರಿತು ಸೋನಿಯಾ ಗಾಂಧಿ ಇವರೆಲ್ಲರನ್ನೂ ಕೂಡಿ ಚರ್ಚೆ ಮಾಡುವುದಾಗಿ ಇತ್ತೀಚೆಗೆ ತಿಳಿಸಿದ್ದರು.

ಈ ಕುರಿತು, ಇಂದಿನಿಂದ ಹತ್ತು ದಿನಗಳವರೆಗೆ ಪಕ್ಷದ ಹಿರಿಯ ನಾಯಕರುಗಳೊಂದಿಗೆ ಸಭೆ ನಡೆಯಲಿದೆ. ಆದರೆ ಕೆಲವು ನಾಯಕರು ರಾಹುಲ್ ಗಾಂಧಿಯೇ ಅಧ್ಯಕ್ಷರಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಮಯ ಬಂದಾಗಿದೆ ಎಂಬುದನ್ನು ಸೂಚ್ಯವಾಗಿ ಹೇಳಿದ ಪಕ್ಷದ ಮುಖಂಡ ರಣದೀಪ್ ಸುರ್ಜೆವಾಲ, “ನನ್ನನ್ನೂ ಸೇರಿದಂತೆ ಕಾಂಗ್ರೆಸ್ ನ 99.9% ನಾಯಕರು ರಾಹುಲ್ ಗಾಂಧಿಯೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಬೇಕು ಎಂದು ಬಯಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿದ್ದರೆ ಕುಮಾರಸ್ವಾಮಿಯನ್ನು ಸಿಎಂ ಆಗುವುದಕ್ಕೆ ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

“ಪಕ್ಷಕ್ಕೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕಾಂಗ್ರೆಸ್‌ನ ಚುನಾವಣಾ ಸಂಸ್ಥೆ, ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿ ಪಕ್ಷದ ಮುಂದಿನ ಅಧ್ಯಕ್ಷರ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ. ನನ್ನನ್ನೂ ಸೇರಿದಂತೆ 99.9% ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯೇ ರಾಷ್ಟ್ರಾಧ್ಯಕ್ಷರಾಗಲಿ ಎಂದು ಬಯಸುತ್ತಿದ್ದಾರೆ” ಎಂದು ಹೇಳಿದರು.

2017ರಲ್ಲಿ ಸೋನಿಯಾ ಗಾಂಧಿಯವರ ಬಳಿಕ ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಬಳಿಕ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದ ಸೋನಿಯಾ ಗಾಂಧಿ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯುತ್ತಿದ್ದಾರೆ.


ಇದನ್ನೂ ಓದಿ: ಸೈನಿಕರ ವೇತನ ಲೂಟಿ ಮಾಡಿ ಕೋಟ್ಯಾಂತರ ರೂ.ಗಳನ್ನು ಸಂಗ್ರಹಿಸಿದ PM-CARES?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...