Homeಮುಖಪುಟವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ ಸಿದ್ದಪಡಿಸುತ್ತಿರುವ 99 ವರ್ಷದ ಅಜ್ಜಿ!

- Advertisement -
- Advertisement -

ಮುಂಬೈನ ವಲಸೆ ಕಾರ್ಮಿಕರಿಗಾಗಿ 99 ವರ್ಷದ ಅಜ್ಜಿಯೊಬ್ಬರು ಆಹಾರ ಪ್ಯಾಕೆಟ್‌ಗಳನ್ನು ಸಿದ್ಧಪಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆ ಅಜ್ಜಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

“ಕೆಲವರು ಹುಟ್ಟುತ್ತಲೇ ಮುದುಕರು, ಕೆಲವು ಸಾಯುವವರೆಗೂ ಯುವಜನರು” ಎಂಬ ಮಾತನ್ನು ಈ ಅಜ್ಜಿ ನಿಜ ಮಾಡಿದ್ದಾರೆ. ಶಕ್ತಿವಂತರು, ಸಿರಿವಂತರು ತಾವಾಯಿತು, ತಮ್ಮ ಪಾಡಾಯಿತು ಎಂದಿರುವಾಗ ಹಸಿದವರಿಗಾಗಿ ಈ 99 ವರ್ಷದ ಅಜ್ಜಿಯ ಶ್ರಮವು ಮಹತ್ವವಾದುದು ಎಂಬುದನ್ನು ನೆಟ್ಟಿಗರು ಒತ್ತಿ ಹೇಳಿದ್ದಾರೆ.

ಈ ವಿಡಿಯೋವನ್ನು ಜಹೀದ್ ಎಫ್. ಇಬ್ರಾಹಿಂ ಅವರು ಟ್ವಿಟ್ಟರ್ “ನನ್ನ 99 ವರ್ಷದ ಫುಪ್ಪಿ (ಚಿಕ್ಕಮ್ಮ) ಮುಂಬೈನ ವಲಸೆ ಕಾರ್ಮಿಕರಿಗಾಗಿ ಆಹಾರ ಪ್ಯಾಕೆಟ್‌ಗಳನ್ನು ತಯಾರಿಸುತ್ತಿದ್ದಾಳೆ” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವೃದ್ಧ ಮಹಿಳೆ ವಲಸೆ ಕಾರ್ಮಿಕರಿಗೆ ಸಹಾಯ ಮಾಡಲು ತನ್ನ ಪಾತ್ರವನ್ನು ಹೇಗೆ ಶ್ರದ್ಧೆಯಿಂದ ಮಾಡುತ್ತಿದ್ದಾಳೆ ಎಂದು ವೀಡಿಯೊ ವಿವರಿಸುತ್ತದೆ.

ವೀಡಿಯೊದಲ್ಲಿ ಅಜ್ಜಿಯು ಸಾವಧಾನದಿಂದ ರೊಟ್ಟಿ ಮತ್ತು ಪಲ್ಯವನ್ನು ಅಲ್ಯೂಮಿನಿಯಂ ಪೇಪರ್‌ನಲ್ಲಿ ಕಟ್ಟಿ, ನಂತರ ಅದನ್ನು ಇತರ ಪ್ಯಾಕೆಟ್‌ಗಳೊಂದಿಗೆ ಇಡುವುದನ್ನು ಕಾಣಬಹುದಾಗಿದೆ.

ಮೇ 29ರಂದು ಹಂಚಿಕೊಂಡಿರುವ ಇದುವರೆಗೂ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.  22,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ ಮತ್ತು 3,000 ರಿಟ್ವೀಟ್‌ಗಳನ್ನು ಹೊಂದಿದೆ.

“ಅವರಿಗೆ ಹ್ಯಾಟ್ಸ್ ಆಫ್. ಅವರ ಉತ್ತಮ ಆರೋಗ್ಯ ಮತ್ತು ದೀರ್ಘ ಜೀವನವನ್ನು ಬಯಸುತ್ತೇನೆ” ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ. “ನಿಮ್ಮ ಫಪ್ಪಿ ಪ್ರೀತಿ,” ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ. “ಎಂತಹ ಅದ್ಭುತ ವ್ಯಕ್ತಿ!” ಎಂದು ಮೂರನೇ ವ್ಯಕ್ತಿ ತಿಳಿಸಿದರೆ “ಅತ್ಯಂತ ಸುಂದರ. ಅವಳ ಬಗ್ಗೆ ಪ್ರೀತಿ ಮತ್ತು ಗೌರವ” ಎಂದು ನಾಲ್ಕನೆಯವರು ಟ್ವೀಟ್ ಮಾಡಿದ್ದಾರೆ. “ಕ್ರಿಯೆಯಲ್ಲಿ ಪ್ರೀತಿ. ವಿಶ್ವದ ಪ್ರತಿಯೊಬ್ಬರೂ ಪ್ರೀತಿಯನ್ನು ತೋರಿಸಬೇಕೆಂದು ಹಾರೈಸುತ್ತೇನೆ” ಎಂದು ಐದನೆಯವರು ಟ್ವೀಟ್ ಮಾಡಿದ್ದಾರೆ.

ಇವುಗಳನ್ನು ಜಹೀದ್ ಎಫ್. ಇಬ್ರಾಹಿಂರವರು ತಮ್ಮ ಚಿಕ್ಕಮ್ಮನಿಗೆ ತೋರಿಸಿದ್ದು, ಟ್ವಿಟ್ಟರ್‌ನಲ್ಲಿ ವ್ಯಕ್ತಪಡಿಸಿದ ಅತಿಯಾದ ಪ್ರೀತಿಯಿಂದ ಅವಳು ವಿನಮ್ರಳಾಗಿದ್ದಾಳೆ ಮತ್ತು ಎಲ್ಲರಿಗೂ ಧನ್ಯವಾದಗಳು ಎಂದು ಮತ್ತೊಂದು ಪೋಸ್ಟ್‌ ಮಾಡಿದ್ದಾರೆ.

“ನಿಮ್ಮ ಫುಪ್ಪಿಗೆ ತುಂಬಾ ಪ್ರೀತಿ. ಅವರು ಸ್ಫೂರ್ತಿ ಎಂದು ದಯವಿಟ್ಟು ಅವರಿಗೆ ಹೇಳಿ ”ಎಂದು ಟ್ವಿಟರ್ ಬಳಕೆದಾರರು ಬರೆದಿದ್ದಾರೆ ಮತ್ತು ಇತರರು ಅದೇ ಕಲ್ಪನೆಯನ್ನು ವ್ಯಕ್ತಪಡಿಸಿದ್ದಾರೆ. ಈ ವಯಸ್ಸಾದ ಮಹಿಳೆ ನಿಜಕ್ಕೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಬರೆದಿದ್ದಾರೆ.

ಅವರ ಬಗ್ಗೆ ನಿಮಗೇನು ಅನಿಸುತ್ತದೆ?


ಇದನ್ನೂ ಓದಿ: ಸೋನು ಸೂದ್‌ ನಂತರ ಕಾರ್ಮಿಕರಿಗೆ ಸಹಾಯ ಮಾಡಲು ಪಣತೊಟ್ಟ ಸ್ವರ ಭಾಸ್ಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...