Homeಮುಖಪುಟಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ

ಸಭೆಯಲ್ಲಿ ಸಚಿವ ತೋಮರ್‌, ಸುಪ್ರೀಂ ಕೋರ್ಟ್‌ ತಜ್ಞ ಸಮಿತಿ ರಚಿಸಿ ನೀಡಿದ ಆದೇಶವನ್ನು ಸ್ವಾಗತಿಸಿ, "ನಾವು ಸಮಿತಿ ಎದುರು ನಮ್ಮ ವಾದವನ್ನು ಮಂಡಿಸುತ್ತೇವೆ" ಎಂದು ತಿಳಿಸಿದರು.

- Advertisement -
- Advertisement -

ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ 9ನೇ ಸುತ್ತಿನ ಮಾತುಕತೆಯ ನಡೆಯುವುದೋ ಇಲ್ಲವೋ ಎಂಬ ಗೊಂದಲದ ನಡುವೆಯೇ ವಿಜ್ಞಾನ್‌ ಭವನದಲ್ಲಿ ಹೋರಾಟ ನಿರತ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಸಭೆ ನಡೆಯಿತು.

ಸರ್ಕಾರದ ಪ್ರತಿನಿಧಿಗಳಾಗಿ ರೈಲ್ವೆ ಹಾಗೂ ಆಹಾರ ಸಚಿವ ಪಿಯೂಷ್‌ ಗೋಯಲ್‌, ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ಮತ್ತು ವಾಣಿಜ್ಯ ರಾಜ್ಯ ಖಾತೆ ಸಚಿವ ಸೋಮ್‌ ಪ್ರಕಾಶ್‌ ಸಭೆಯಲ್ಲಿ ಪಾಲ್ಗೊಂಡಿದ್ದರು. ರೈತರ ಪ್ರತಿನಿಧಿಗಳಾಗಿ 40 ಸಂಘಟನೆಯ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ಕೃಷಿ ಸಚಿವ ತೋಮರ್‌ ಮಾತುಕತೆಗೆ ಚಾಲನೆ ನೀಡಿ, “ನೀವು ಸರ್ಕಾರ ಪಟ್ಟು ಹಿಡಿದಿದೆ, ಇದನ್ನು ಅಹಂಕಾರದ ವಿಷಯವನ್ನಾಗಿ ಮಾಡಿಕೊಂಡಿದೆ ಎಂದು ಹೇಳುತ್ತೀರಿ. ಆದರೆ ನಾವು ನಿಮ್ಮ ಹಲವು ಬೇಡಿಕೆಗಳನ್ನು ಒಪ್ಪಿಕೊಂಡಿದ್ದೇವೆ. ಕಾಯ್ದೆ ಹಿಂಪಡೆಯುವ ಒಂದು ಬೇಡಿಕೆಗೆ ಅಂಟಿಕೊಳ್ಳುವ ಬದಲು ಸ್ವಲ್ಪ ಮೃದು ಧೋರಣೆ ತಳೆಯಬಾರದೇಕೆ?” ಎಂದು ರೈತ ಮುಖಂಡರಿಗೆ ಕೇಳಿದ್ದಾಗಿ ಸಭೆಯಲ್ಲಿ ಪಾಲ್ಗೊಂಡ ನಾಯಕರು ಮಾಧ್ಯಮಗಳಿಗೆ ತಿಳಿಸಿದರು.

ಸಭೆಯಲ್ಲಿ ಸಚಿವ ತೋಮರ್‌, ಸುಪ್ರೀಂ ಕೋರ್ಟ್‌ ತಜ್ಞರ ಸಮಿತಿ ರಚಿಸಿ ಎಂದು ನೀಡಿದ ಆದೇಶವನ್ನು ಸ್ವಾಗತಿಸಿ, “ನಾವು ಸಮಿತಿ ಎದುರು ನಮ್ಮ ವಾದವನ್ನು ಮಂಡಿಸುತ್ತೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ಜ.19ರಂದು ಕರೆಯಲಾಗಿರುವ ಈ ತಜ್ಞರ ಸಮಿತಿ ಸಭೆಯಲ್ಲಿ ರೈತ ಮುಖಂಡರು ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ಸಮಿತಿಯ ಸದಸ್ಯರು ಈಗಾಗಲೇ ಕಾಯ್ದೆ ಪರವಾಗಿರುವುದಾಗಿ ತಮ್ಮ ಹೇಳಿಕೆಗಳಿಂದ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ನಾವು ಸಮಿತಿಯ ಬದಲು ಸರ್ಕಾರದೊಂದಿಗೇ ಮಾತುಕತೆ ಮುಂದುವರೆಸಲು ಸಿದ್ಧರಿದ್ದೇವೆ ಎಂದು ರೈತ ನಾಯಕರು ತಿಳಿಸಿದ್ದಾರೆ.

ರೈತ ಹೋರಾಟದ ಬಗ್ಗೆ ಕಾಳಜಿ ತೋರಿ, ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಯಿಂದ ಈಗಾಗಲೇ ಭೂಪಿಂದರ್‌ ಸಿಂಗ್‌ ಮಾನ್‌ ಹೊರಬಂದಿದ್ದು, ಇನ್ನೊಬ್ಬ ಸದಸ್ಯರು ಹೊರಬರುವ ನಿರೀಕ್ಷೆ ಇದೆ ಎಂದು ರೈತ ಸಂಘಟನೆಗಳ ನಾಯಕರು ಹೇಳಿದ್ದಾರೆ.

ಈ ಸಭೆಯಲ್ಲಿ ರೈತ ಮುಖಂಡರು ಯಾವುದೇ ರೀತಿಯಲ್ಲೂ ಸರ್ಕಾರದ ಮನವಿಗಳಿಗೆ ಸ್ಪಂದಿಸದೇ ಸಭೆ ಅಂತ್ಯಗೊಂಡಿತು.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...