Homeಮುಖಪುಟಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

- Advertisement -
- Advertisement -

ಕಳೆದ 50 ವರ್ಷಗಳಿಂದ ದೆಹಲಿಯ ಇಂಡಿಯಾ ಗೇಟ್ ಬಳಿ ಉರಿಯುತ್ತಿರುವ ಅಮರ್‌ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಮರ್ ಜವಾನ್ ಜ್ಯೋತಿಯನ್ನು ಕೇಂದ್ರ ಸರ್ಕಾರ ನಂದಿಸುತ್ತಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ‘ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗ ಅರ್ಥವಾಗುವುದಿಲ್ಲ’ ಎಂದು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.

ಅಮರ್‌ ಜವಾನ್ ಜ್ಯೋತಿಯನ್ನು ನಂದಿಸುವುದಿಲ್ಲ. ಇಂಡಿಯಾ ಗೇಟ್‌ನಿಂದ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಜ್ಯೋತಿಯೊಂದಿಗೆ ಇಂದು ನಡೆಯುವ ಸಮಾರಂಭದಲ್ಲಿ ವಿಲೀನಗೊಳಿಸಲಾಗುತ್ತದೆ. ಜ್ವಾಲೆಯ ಒಂದು ಭಾಗವನ್ನು ಇಂದು (ಜ.21) ಮಧ್ಯಾಹ್ನ ಯುದ್ಧ ಸ್ಮಾರಕಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ಒಕ್ಕೂಟ ಸರ್ಕಾರ ತಿಳಿಸಿದೆ.

ಸರ್ಕಾರದ ಈ ಕ್ರಮಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ತಪ್ಪು ಮಾಹಿತಿ ಪ್ರಸಾರವಾಗುತ್ತಿದೆ ಎಂದು ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ: ಹೊಸ ಸಂಸತ್ತು ‘ಸೆಂಟ್ರಲ್‌ ವಿಸ್ಟಾ’ ನಿರ್ಮಾಣ ವೆಚ್ಚ ಯೋಜನೆಗಿಂತ 282 ಕೋಟಿ ರೂ. ಹೆಚ್ಚಳ

“ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿಯನ್ನು ಇಂದು ನಂದಿಸಿರುವುದು ಅತೀವ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಪರವಾಗಿಲ್ಲ. ನಾವು ಮತ್ತೊಮ್ಮೆ ನಮ್ಮ ಸೈನಿಕರಿಗೆ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ” ಎಂದು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇಂದು ಮಧ್ಯಾಹ್ನ 3:30ಕ್ಕೆ ಇಂಡಿಯಾ ಗೇಟ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜ್ಯೋತಿಗಳ ವಿಲೀನ ಮಾಡಲಾಗುತ್ತದೆ. ಜ್ವಾಲೆಯನ್ನು ಗಾರ್ಡ್ ಕಾಂಟಿಜೆಂಟ್ ಜೊತೆಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಟಾರ್ಚ್‌ನಲ್ಲಿ ಸ್ಥಳಾಂತರಿಸಲಾಗುತ್ತದೆ. ಬಳಿಕ ಎರಡು ಜ್ವಾಲೆಗಳನ್ನು ವಿಲೀನಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲನೆಯ ಮಹಾಯುದ್ಧದಲ್ಲಿ ಮಡಿದ ಬ್ರಿಟಿಷ್ ಭಾರತೀಯ ಸೇನೆಯ ಸೈನಿಕರ ನೆನಪಿಗಾಗಿ ಇಂಡಿಯಾ ಗೇಟ್ ಸ್ಮಾರಕವನ್ನು ಬ್ರಿಟಿಷರು ನಿರ್ಮಿಸಿದರು. 1971 ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಪಾಕಿಸ್ತಾನದ ವಿರುದ್ಧ ಭಾರತದ ಬೃಹತ್ ವಿಜಯದ ನಂತರ ಅಮರ್ ಜವಾನ್ ಜ್ಯೋತಿಯನ್ನು ಇಂಡಿಯಾ ಗೇಟ್ ಅಡಿಯಲ್ಲಿ ಇರಿಸಲಾಗಿತ್ತು.

ಇನ್ನು ರಾಷ್ಟ್ರೀಯ ಯುದ್ಧ ಸ್ಮಾರಕವನ್ನು 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಈ ಸ್ಮಾರಕ ಸ್ವತಂತ್ರ ಭಾರತದ ಸಶಸ್ತ್ರ ಸಂಘರ್ಷಗಳಲ್ಲಿ ಹೋರಾಡಿದ ಭಾರತೀಯ ಮಿಲಿಟರಿ ಸೈನಿಕರನ್ನು ಗೌರವಿಸುತ್ತದೆ. ಇದರಲ್ಲಿ ಪಾಕಿಸ್ತಾನ ಮತ್ತು ಚೀನಾದೊಂದಿಗಿನ ಸಶಸ್ತ್ರ ಸಂಘರ್ಷಗಳು ಮತ್ತು 1961 ರ ಗೋವಾ ಯುದ್ಧ, ಶ್ರೀಲಂಕಾದಲ್ಲಿ ಆಪರೇಷನ್ ಪವನ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ಷಕ್ ಸೇರಿದಂತೆ ಇತರ ಕಾರ್ಯಾಚರಣೆಗಳಲ್ಲಿ ಹೋರಾಡಿದ ಸೈನಿಕರ ನೆನಪಿನಲ್ಲಿ ನಿರ್ಮಿಸಲಾಗಿದೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...