Homeಕರ್ನಾಟಕಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

- Advertisement -
- Advertisement -

ಸ್ಕಾರ್ಫ್ (ಹಿಜಾಬ್) ಹಾಕಿಕೊಂಡು ಬರುತ್ತಾರೆಂದು ಕಳೆದ ಮೂರು ವಾರದಿಂದ ತರಗತಿಯಿಂದ ಹೊರಹಾಕಲ್ಪಟ್ಟ ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಐವರು ವಿದ್ಯಾರ್ಥಿನಿಯರು ಗುರುವಾರ ಕಾಲೇಜಿನ ಗೇಟಿನ ಬಳಿ ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ. “ಹಿಜಾಬ್ ಹಾಕಿದ್ದಕ್ಕಾಗಿ ನಾವು ತರಗತಿಯಿಂದ ಹೊರಗೆ ಕುಳಿತು ಕೊಳ್ಳುವಂತಾಗಿದೆ. ಹಿಜಾಬ್ ನನ್ನ ಹಕ್ಕು, ಅದನ್ನು ಪಡೆದೆ ತೀರುತ್ತೇವೆ, ಇದು ನನ್ನ ಮೂಲಭೂತ ಹಕ್ಕು- ಎಂಬ ಭಿತ್ತಿಪತ್ರವನ್ನು ವಿದ್ಯಾರ್ಥಿನಿಯರು ಪ್ರದರ್ಶಿಸಿದರು.

ನಮ್ಮದು ಒಂದು ವರ್ಷದ ಹೋರಾಟ. ಪ್ರಥಮ ಪಿಯುಸಿಗೆ ಸೇರಿದಾಗ ಸ್ಕಾರ್ಫ್ ಹಾಕಿಕೊಂಡು ಬಂದಾಗಿಂದ ನಮಗೆ ಮಾನಸಿಕ ಹಿಂಸೆ ಕೊಡಲಾಗುತ್ತಿದೆ. ಒತ್ತಡ ಹಾಕಿ ಹಿಜಾಬ್ ತೆಗೆಸಿದರು. ತರಗತಿಯಿಂದ ಹೊರಗೆ ಹಾಕಿದರು. ಮನವಿ ಮಾಡಿದರು ತರಗತಿಗೆ ಸೇರಿಸಲಿಲ್ಲ. ಅಂತೂ ಮೊದಲ ವರ್ಷ ಮಗಿಯಿತು. ದ್ವಿತೀಯ ಪಿಯುಸಿ ಸೇರಿದಾಗ ಮತ್ತೆ ಹಿಜಾಬ್ ಹಾಕದಂತೆ ಹೇಳಲಾಯಿತು. ಪ್ರಾಚಾರ್ಯರಿಗೆ ಪೋಷಕರಿಂದ ಸ್ಕಾರ್ಫ್ ಹಾಕಿಕೊಂಡು ಬರಲು ಅವಕಾಶ ಕೊಡುವಂತೆ ಮನವಿ ಮಾಡಿಸಿದೆವು. ಆದರೆ ಪ್ರಾಚಾರ್ಯರು ನಮ್ಮ ಬೇಡಿಕೆ ತಿರಸ್ಕರಿಸಿದರು ಎಂದು ವಿದ್ಯಾರ್ಥಿನಿಯರು ಬೇಸರ ವ್ಯಕ್ತಪಡಿಸುತ್ತಾರೆ.

ನಮ್ಮ ಬೇಡಿಕೆ ಪ್ರಾಚಾರ್ಯರು ಪರಿಗಣಿಸಬಹುದೆಂದು ಕಾದೆವು. ಆದರೆ ಸಕಾರಾತ್ಮಕ ಸ್ಪಂದನೆ ಬರಲಿಲ್ಲ. ನಾವು ಅನಿವಾರ್ಯವಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬಂದೆವು. ಆಗ ನಮ್ಮನ್ನು ತರಗತಿಗೆ ಪ್ರವೇಶಿಸದಂತೆ ಹೇಳಿ ಹೊರಗಡೆ ಇಟ್ಟರು. ನಾವು ತರಗತಿಯಿಂದ ಹೊರಹಾಕಲ್ಪಟ್ಟಿರುವುದು ಯಾರಿಗೂ ತಿಳಿಯಬಾರದೆಂದು ಲೈಬ್ರರಿ ಮತ್ತು ಸ್ಟಾಫ್ ರೂಮಿನಲ್ಲಿ ಕುಳಿತುಕೊಳ್ಳುವಂತೆ ಹೇಳಲಾಗುತ್ತಿತ್ತು ಎಂದು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ತಮಗಾಗುತ್ತಿರುವ ಅನ್ಯಾಯ ವಿವರಿಸುತ್ತಾರೆ.

ಕಾಲೇಜಿನಲ್ಲಿ ಪೂಜೆ ಇನ್ನಿತರ ಆಚರಣೆ ನಡೆಯುತ್ತವೆ, ಇದು ಕಾಲೇಜಾದ್ದರಿಂದ ನಾವು ಅದಕ್ಕೆ ಗೌರವ ಕೊಡುತ್ತೇವೆ. ಹಾಗೆಯೆ ನಮ್ಮ ಮೂಲಭೂತ ಹಕ್ಕಾಗಿರುವ ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬರಲು ಅವಕಾಶ ಕೊಡಬೇಕು. ನಾವು ಕಪ್ಪು ಬಣ್ಣದ ಹಿಜಾಬ್ ಹಾಕಿಕೊಂಡು ಬರುವುದಿಲ್ಲ. ಕಾಲೇಜಿನ ಸಮವಸ್ತ್ರದಲ್ಲಿರುವ ನೀಲಿ ಬಣ್ಣದ ಹಿಜಾಬ್ ಹಾಕಿಕೊಂಡು ಬರತ್ತೇವೆ. ಇದಕ್ಕಾದರೂ ಅವಕಾಶ ಕೊಡಿಯೆಂದು ಬೇಡುತ್ತಿದ್ದೇವೆ. ಆದರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ ಎಂದು ತರಗತಿಯಿಂದ ಹೊರ ಹಾಕಲ್ಪಟ್ಟ ವಿದ್ಯಾರ್ಥಿನಿಯರು ತಮ್ಮ ನೋವು ತೋಡಿಕೊಳ್ಳುತ್ತಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಹಿಜಾಬ್ ಧರಿಸಿರುವವರನ್ನು ತರಗತಿಯಿಂದ ಹೊರಕ್ಕೆ ಹಾಕಿರುವುದು ಅಮಾನವೀಯ ಹಾಗೂ ಕಾನೂನು ಬಾಹಿರ ಕೃತ್ಯ.

  2. ಇವತ್ತು ಹಿಜಾಬ್ ನಾಳೆ ಘೋಷ ನಾಳದು ತರಗತಿಯ ಮಧ್ಯದಲ್ಲಿ ನಮಾಜ್ ಮಾಡಲು ಅವಕಾಶ ನಂತರ ಮಹಿಳೆಯರ ಕಲಾ ಶಾಲೆಯಲ್ಲಿ ಗಂಡಸರು ಪಾಠ ಮಾಡಬಾರದು ಕೊನೆಗೆ ಶರಿಯತ್ತನ್ನು ಪಾಲಿಸಬೇಕು ಎಂದು ತಕರಾರು ಮಾಡುತ್ತಾರೆ ಇವರು ಶಾಲೆಗೆ ಬರುವುದು ವಿದ್ಯೆ ಕಲಿಯಲು ಇವರಿಗೆ ಎಲ್ಲಿ ಸರಿಯಾಗುತ್ತದೆಯೊ ಅಲ್ಲಿಗೆ ಹೋಗಲಿ ಆದುದರಿಂದ ಶಾಲ ಆಡಳಿತ ಮಂಡಳಿಯು ಇವರ ಬೇಡಿಕೆಯನ್ನು ಇಡೇರಿಸ ಬಾರದು ಶಾಲೆಯಲ್ಲಿ ಅದರ ನಿಯಮಗಳನ್ನು ವಿರೋಧಸಿದ್ದಕ್ಕೆ ಅವರನ್ನು ಶಾಲೆಯಿಂದ ತೆಗೆದು ಹಾಕಬೇಕು

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...