Homeಕರ್ನಾಟಕಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಸ್ಕಾರ್ಫ್ ಹಾಕಿದವರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸುವುದರಿಂದ ಮುಸ್ಲಿ, ಹಿಂದೂ ಹಾಗೂ ಎಲ್ಲಾ ಕೋಮಿನ ವಿದ್ಯಾರ್ಥಿಗಳ ಸೌಹಾರ್ದತೆ ಹಾಳಾಗಬಹುದು ಎಂದು ಎಸ್‌ಎಫ್‌ಐ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ತರಗತಿಗಳಲ್ಲಿ ಪಾಠ ಕೇಳುವುದಕ್ಕೆ ಕಾಲೇಜಿನ ಪ್ರಾಂಶುಪಾಲರು ನಿರಾಕರಿಸಿರುವ ಅಸಂವಿಧಾನಿಕವಾದ ನಡೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸ್‌ಎಫ್‌ಐನ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅವರು, ಈ ಬೆಳವಣಿಗೆಯ ಹಿಂದಿರುವ ಮತೀಯ ಶಕ್ತಿಗಳ ಕುರಿತು ಎಚ್ಚರಿಸಿದ್ದಾರೆ.

ಕಾಲೇಜನ್ನು ಒಂದು ಕೋಮು ಅಥವಾ ಧರ್ಮದ ಪ್ರಚಾರಕ ಸಂಸ್ಥೆಯಂತೆ ಬಳಸುವುದೇ ಅಲ್ಲದೆ ಮತ್ತೊಂದು ಧರ್ಮದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುವುದು ಸಂವಿಧಾನ ವಿರೋಧಿ ನಡೆಯಾಗಿದೆ.ಆದ್ದರಿಂದ ಈ ಕೂಡಲೇ ವಿದ್ಯಾರ್ಥಿನಿಯರಿಗೆ ತರಗತಿಗಳಿಗೆ ಹಾಜರಾಗಲು ಅನುಮತಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದಿಕರಣವನ್ನು ತೀವ್ರಗೊಳಿಸುವ ಜನವಿರೋಧಿಯಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಬಿಜೆಪಿ ಸರ್ಕಾರ ಅಪ್ರಜಾಸತ್ತಾತ್ಮಕವಾಗಿ ಜಾರಿಗೊಳಿಸುತ್ತಿರುವುದರಿಂದ ರಾಜ್ಯದಲ್ಲಿ ಶೈಕ್ಷಣಿಕ ಅರಾಜಕತೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ತಮ್ಮ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಬೀದಿಗಿಳಿದಿದ್ದಾರೆ. ಇಂತಹ ಸಂದರ್ಭದಲ್ಲಿ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ಶಿಕ್ಷಣ ಕ್ಷೇತ್ರದ ನಿಜವಾದ ಸಮಸ್ಯೆಗಳನ್ನು ಮರೆಮಾಚಲು ಕರಾವಳಿಯ ಕೆಲವು ಕಾಲೇಜುಗಳನ್ನು ಶಿಕ್ಷಣದ ಕೋಮುವಾದಿಕರಣದ ಪ್ರಯೋಗ ಶಾಲೆಗಳನ್ನಾಗಿಸಿತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಉಡುಪಿ ಸರ್ಕಾರಿ ಕಾಲೇಜ್ ಹಿಜಾಬ್ ವಿವಾದ: ಭಿತ್ತಿಪತ್ರ ಪ್ರದರ್ಶಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿನಿಯರ ಒತ್ತಾಯ

ಈ ಸ್ಕಾರ್ಫ್, ಕೇಸರಿ ಶಾಲು ವಿವಾದಗಳಿಗೆ ರಾಜ್ಯ ಬಿಜೆಪಿ ಸರಕಾರದ ಕುಮ್ಮಕ್ಕು ಮತ್ತು ಸಮ್ಮತಿ ಒಪ್ಪಿಗೆ ಇರುವ ರೀತಿಯಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರವರು ಹೇಳಿಕೆಗಳನ್ನು ನೀಡುತ್ತಿರುವುದರಿಂದ ಸ್ಪಷ್ಟವಾಗಿದೆ. “ದೇಶದ ಭವಿಷ್ಯ ತರಗತಿಯ ಕೊಠಡಿಗಳಲ್ಲಿ ನಿರ್ಮಾಣವಾಗುತ್ತದೆ”. ಎಂದು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಹೇಳಿರುವ ಮಾತನ್ನು ಇಲ್ಲಿ ನೆನಪು ಮಾಡಿಕೊಳ್ಳಬೇಕಾಗಿದೆ. ಏಕೆಂದರೆ ಕರಾವಳಿಯ ಜಿಲ್ಲೆಗಳಲ್ಲಿ ಹಿಂದುತ್ವದ ರಾಜಕೀಯ ಹಿಡನ್ ಅಜೆಂಡಾ ಜಾರಿಗಾಗಿ ಅದೇ ತರಗತಿಯ ಕೊಠಡಿಗಳ ಒಳಗೆ ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳನ್ನು ವಿಭಜಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕರಾವಳಿಯ ಜಿಲ್ಲೆಗಳಲ್ಲಿ ನೈತಿಕ ಪೋಲೀಸ್‌ಗಿರಿ, ಅನ್ಯ ಧರ್ಮೀಯ ವಿದ್ಯಾರ್ಥಿಗಳಿಗೆ ತ್ರಿಶೂಲದಿಂದ ತಿವಿದು ಹಲ್ಲೆ, ಲವ್ ಜಿಹಾದ್, ಹೋಮ್ ಸ್ಟೇ ದಾಳಿಗಳಂತಹ ಪ್ರಕರಣಗಳಲ್ಲಿ ದೇಶದ ಭವಿಷ್ಯವಾಗಬೇಕಾದ ವಿದ್ಯಾರ್ಥಿಗಳನ್ನು ಕ್ರಿಮಿನಲ್ ಗಳನ್ನಾಗಿ ಉತ್ಪಾದಿಸಲಾಗುತ್ತಿದೆ. ಈ ಕೋಮುವಾದಿ ಹುನ್ನಾರಗಳಿಗೆ ಎಳೆ ಪ್ರಾಯದ ಅಮಾಯಕ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಇದೆಲ್ಲವೂ ದೇಶದ ಭವಿಷ್ಯದ ಕುರಿತು ಆತಂಕಗಳನ್ನು ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡು ಬಂದರೆ ಹುಡುಗರು ನಾಳೆಯಿಂದ ಕೇಸರಿ ಶಾಲು ಹಾಕಿಕೊಂಡು ಬರುತ್ತಾರೆ. ಹಾಗಾಗಿ ಸ್ಕಾರ್ಫ್ ಹಾಕುವಂತಿಲ್ಲ ಎಂದು ಕಾಲೇಜು ಪ್ರಾಂಶುಪಾಲರು ಹೇಳಿರುವುದು ಖಂಡನೀಯ. ಸ್ಕಾರ್ಫ್ ಧರಿಸಿ ಬಂದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುವುದರ ಹಿಂದೆ ಎಬಿವಿಪಿಯಂತಹ ಮತೀಯವಾದಿ ಸಂಘಟನೆಗಳು ವಿದ್ಯಾರ್ಥಿಗಳಲ್ಲಿ ತುಂಬಿರುವ ಕೋಮು ದ್ವೇಷ ಭಾವನೆಯಿದೆ ಎಂದು ಎಸ್‌ಎಫ್‌ಐ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಸ್ಕಾರ್ಫ್ ಹಾಕಿದವರಿಗೆ ಕಾಲೇಜಿಗೆ ಪ್ರವೇಶ ನಿರಾಕರಿಸುವುದರಿಂದ ಮುಸ್ಲಿ, ಹಿಂದೂ ಹಾಗೂ ಎಲ್ಲಾ ಕೋಮಿನ ವಿದ್ಯಾರ್ಥಿಗಳ ಸೌಹಾರ್ದತೆಯಿಂದ ಸಹಶಿಕ್ಷಣ (ಕೋ ಎಜುಕೇಷನ್) ಪಡೆಯದಂತೆ ಆಗಬಹುದು. ಇಲ್ಲಿಯವರೆಗೂ ಹಿಂದೂ ಮುಸ್ಲಿಂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಟ್ಟಾಗಿ ಶಾಲೆ ಕಾಲೇಜು ಕಲಿಯುತ್ತಿದ್ದರು. ಇಂತಹ ಅನಾವಶ್ಯಕ ವಿವಾದಗಳಿಂದ ಧರ್ಮ ಆಧರಿತ ಶಾಲಾ ಕಾಲೇಜುಗಳಾಗಿ ಈಗಾಗಲೇ ಇರುವ ಹಿಂದೂ ಮುಸ್ಲಿಮರ ನಡುವಿನ ಅಪನಂಬಿಕೆಗಳು ಇನ್ನಷ್ಟೂ ಗಟ್ಟಿಯಾಗಿಸುವ ಆತಂಕವಿದೆ ಎಂದಿದ್ದಾರೆ.

ಹಿಜಾಬ್ ನಿಷೇದ ಮಾಡಿದ್ದು ಕಾಲೇಜು ಆಡಳಿತ ಮಂಡಳಿಯ ಏಕ ರೂಪದ ಸಮವಸ್ತ್ರ ನೀತಿ ಎಂಬ ಮೇಲ್ನೋಟಕ್ಕೆ ಕೆಲವರಿಗೆ ಅನಿಸಬಹುದು. ಆದರೆ ಇದಕ್ಕಾಗಿ ಕಾಯುತ್ತಿರುವ ಮುಸ್ಲಿಂ ವಿರೋಧಿ ದ್ವೇಷ ಬಿತ್ತುವ ಶಕ್ತಿಗಳು ಇದನ್ನು ಕೋಮು ಧೃವೀಕರಣ ರಾಜಕಾರಣಕ್ಕೆ ಬಳಸಿಕೊಳ್ಳುವುದು ಸಾಬೀತಾಗಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ಹಿಜಾಬ್, ಬುರ್ಕಾವನ್ನು ಪ್ರಗತಿಪರರು ಸ್ತ್ರಿವಾದದ ನೆಲೆಯಲ್ಲಿ ವಿರೋಧಿಸುತ್ತಾರೆ. ಆದರೆ ಈ ಎಬಿವಿಪಿ/ಹಿಂದೂ ಜಾಗರಣ ವೇದಿಕೆ/ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಯಾಕೆ ವಿರೋಧಿಸುತ್ತಾರೆ ಎಂಬ ಸ್ಪಷ್ಟನೆ ನಮಗಿದೆ. ಹಿಜಾಬ್ ವಿರೋಧಿಸುವುದು, ಹಿಜಾಬ್ ಧರಿಸಿಕೊಂಡು ವಿದ್ಯಾರ್ಥಿನಿಯರು ಕಾಲೇಜಿಗೆ ಬರಬಾರದೆಂದು ತಡೆಯುವುದು, ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿಸುವ ಸಂಚಲ್ಲದೆ ಬೇರೇನೂ ಅಲ್ಲ. ಈಗಾಗಲೇ ಶೈಕ್ಷಣಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತರ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕನ್ನು ಈ ಧಾರ್ಮಿಕ ಮೂಲಭೂತವಾದಿ, ಕೋಮುವಾದಿ ದಾಳಿಗಳಿಂದ ರಕ್ಷಿಸಬೇಕಾದದ್ದು ತುರ್ತು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣ ನೀಡುವುದು ಸ್ಕಾರ್ಫ್ ನಿಷೇಧಕ್ಕಿಂತ ಸದ್ಯದ ಉತ್ತಮ ಔಷಧಿ. ಮೊದಲು ಮುಸ್ಲಿಂ ಹುಡುಗಿಯರು ಶಿಕ್ಷಣ ಪಡೆಯುವಂತಾಗಬೇಕು. ಅದರಲ್ಲೂ ಸರ್ವ ಜನಾಂಗದ ಶಾಂತಿಯ ತೋಟವಾದ ಈ ನಾಡಿನ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಬೇಕು. ಹಿಂದೂ ಮುಸ್ಲೀಂ ಹುಡುಗ ಹುಡುಗಿಯರು ಸಹಶಿಕ್ಷಣ (ಕೋಎಜುಕೇಶನ್ ) ಪಡೆಯುವಂತಾಗಬೇಕು ಎಂದು ಆಶಿಸಿದ್ದಾರೆ.

ಹಿಂದೂ ಮುಸ್ಲೀಮರು ಸಹಶಿಕ್ಷಣ ಪಡೆಯುವ ಕಾಲೇಜುಗಳಲ್ಲಿ ಸ್ಕಾರ್ಫ್ /ಬುರ್ಕಾ ನಿಷೇಧ ಮಾಡುವುದು ಬುರ್ಕಾ ಸಂಸ್ಕೃತಿಯನ್ನು ಇನ್ನಷ್ಟೂ ಬಲಗೊಳಿಸುತ್ತದೆ. ಸ್ಕಾರ್ಫ್ ನಿಷೇಧಕ್ಕೊಳಗಾಗಿರುವ ಕಾಲೇಜು ಹೊರತು ಪಡಿಸಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರ್ಯಾಯ ಆಯ್ಕೆ ಇರುವುದು ಮುಸ್ಲಿಂ ಕಾಲೇಜುಗಳು. ಇದು ಸಮಾಜದಲ್ಲಿ ಇನ್ನಷ್ಟು ಅಸಮಾನತೆಯ ಮನಸ್ಥಿತಿಯನ್ನು ಮತ್ತು ಅಂತರವನ್ನು ಹೆಚ್ಚಿಸುತ್ತದೆಯೇ ಹೊರತು ಇನ್ನೇನಲ್ಲ. ಹಲವಾರು ಜಾತಿ, ಧರ್ಮ, ಸಮುದಾಯದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಒಟ್ಟಾಗಿ ವಿದ್ಯಾಭ್ಯಾಸ ಮಾಡುವುದೇ ಪರಸ್ಪರರನ್ನು ಅರಿತು ಸಮಾನತೆ, ಸೌಹಾರ್ದತೆಯನ್ನು ಸಾಧಿಸಲು ಇರುವ ಅತೀ ದೊಡ್ಡ ಮಾರ್ಗ ಎಂದು ತಿಳಿಸಿದ್ದಾರೆ.

ಕಾಲೇಜುಗಳಿಗೆ ವಿದ್ಯಾರ್ಥಿಗಳಲ್ಲಿ ನಿಜವಾಗಿಯೂ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂಬ ಪ್ರಾಮಾಣಿಕ ಇಚ್ಚಾಶಕ್ತಿ ಇದ್ದರೆ ಕಾಲೇಜು ತರಗತಿ ಕೊಠಡಿಗಳಲ್ಲಿ ಶಿಕ್ಷಕರು ವೈಚಾರಿಕವಾದ, ಜ್ಯಾತ್ಯಾತೀತವಾದ ಸಂವಿಧಾನದ ಆಶಯಗಳನ್ನು ಸಾರುವ ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗೆ ನಾಜೂಕಾಗಿ ತುಂಬುವಂತಹ ಬೋಧನೆಗಳನ್ನು ಮಾಡಲಿ. ಇಂತಹ ಪ್ರಗತಿಪರ ಮನಸ್ಸುಗಳುಳ್ಳ ವಿದ್ಯಾರ್ಥಿಗಳನ್ನು ಬೆಳೆಸಿದ ನಂತರ ಸ್ಕಾರ್ಫ್ ಹಾಕಿಕೊಂಡು ತರಗತಿಗೆ ಬರಬೇಡಿ ಎಂದು ಹೇಳುವುದರ ಹಿಂದೆ ಒಂದು ಅರ್ಥ ಇರುತ್ತದೆ. ಅದುಬಿಟ್ಟು ಏಕಾಏಕಿ ಬುರ್ಕಾ ನಿಷೇದಿಸುವುದರ ಹಿಂದೆ ಮುಸ್ಲಿಂ ಮಹಿಳೆಯರನ್ನು ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಬದಿಗೆ ದೂಡುವ ಹುನ್ನಾರ ಇದೆ. ಈ ಹುನ್ನಾರವನ್ನು ಹಿಂದುತ್ವದ ಕೋಮುವಾದಿಗಳು ಬಹಳ ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ ಎಂದು ಎಸ್‌ಎಫ್‌ಐನ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮತೀಯಾ ಸೃಷ್ಟಿ ಮಾಡ್ತಿರೋದು ಕಮ್ಯೂನಿಸ್ಟ್ ರು,ಮಾವೋವಾದಿಗಳು ,ಜಿಹಾದಿಗಳೇ ವಿನಹ ಎಬಿವಿಪಿ ಅಲ್ಲಾ ,ಷರಿಯತ್ ಕಾನೂನಿಗೆ ಬೆಂಬಲ ನೀಡುತ್ತಿರುವ ತಮ್ಮ ಪತ್ರಿಕೆಗೇ ಏನೇಳಬೇಕು ,ದೇಶದ್ರೋಹಿಗಳೇ ನಿಮ್ಮ ಆಟ ಇನ್ನು ನಡೆಯದು.

  2. There was no Hijab issue in that college. All girls used to follow the uniform rules and we’re attending the classes without Hijab/Burkha. Now some communal forces behind the scene provoked the innocent girls (For those forces their hidden agenda is more important than education of their own women)

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...