Homeಮುಖಪುಟಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್

ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್

- Advertisement -
- Advertisement -

ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಘೋಷಣೆಯೇ ದೊಡ್ಡ ಒತ್ತಡ ಉಂಟುಮಾಡುತ್ತಿದೆ.

ಸಿಎಂ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಶನಿವಾರ ಹೇಳಿದ್ದಾರೆ.

“ಕಾಂಗ್ರೆಸ್ ಪ್ರತಿಯೊಬ್ಬ ನಾಯಕರ ಗುಣಗಳನ್ನು ವಿಶ್ಲೇಷಿಸಿದ ನಂತರ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ನನಗೆ ಪಕ್ಷದ ಮೇಲೆ ಸಂಪೂರ್ಣ ನಂಬಿಕೆಯಿದೆ. ಸಿಎಂ ಅಭ್ಯರ್ಥಿಯನ್ನು ನಿರ್ಧರಿಸಲು ಪಕ್ಷದ ಹೈಕಮಾಂಡ್ ಇದೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನಿಸುತ್ತದೆಯೋ ಆ ನಾವು ನಿರ್ಧಾರವನ್ನು ನಾವು ಒಪ್ಪಿಕೊಳ್ಳುತ್ತೇವೆ” ಎಂದು ನವಜೋತ್ ಸಿಂಗ್ ಸಿಧು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನಡುವಿನ ಮನಸ್ತಾಪದ ಬಳಿಕ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ರಾಜೀನಾಮೆ ನೀಡಿದ್ದರು. ಬಳಿಕ ಚರಣ್‌ಜಿತ್‌ ಸಿಂಗ್ ಚನ್ನಿಯವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು.

ಕಳೆದ ಮೂರು ತಿಂಗಳಲ್ಲಿ ನೂತನ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ತಾವು ಮುಂದಿನ ಸಿಎಂ ಅಭ್ಯರ್ಥಿಯಾಗಲು ಸೂಕ್ತ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಇತ್ತ ಹಲವು ಕಾಂಗ್ರೆಸ್ ನಾಯಕರು ಕೂಡ ಚನ್ನಿ ಮುಂದಿನ ಸಿಎಂ ಆಗಲು ಸೂಕ್ತ ಎನ್ನುತ್ತಿದ್ದಾರೆ. ಇದರ ನಡುವೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.

ಇನ್ನು, ಮುಂದಿನ ತಿಂಗಳು ನಡೆಯಲಿರುವ ಐದು ರಾಜ್ಯ ಚುನಾವಣೆಗಳ ಪ್ರಚಾರಕ್ಕಾಗಿ ರೋಡ್‌ಶೋಗಳು ಮತ್ತು ರ್‍ಯಾಲಿಗಳ ಮೇಲೆ ವಿಧಿಸಿದ್ದ ನಿಷೇಧವನ್ನು ಚುನಾವಣಾ ಆಯೋಗವು ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಿದೆ. ಆದರೆ, ಫೆಬ್ರವರಿ 10 ಮತ್ತು 14 ರಂದು ನಡೆಯಲಿರುವ ಮೊದಲ ಎರಡು ಹಂತದ ಚುನಾವಣೆಗೆ ಸಡಿಲಿಕೆ ನೀಡಿದೆ.

ಚುನಾವಣಾ ಆಯೋಗವು ಈ ಮೊದಲು ಜನವರಿ 15 ರವರೆಗೆ ಚುನಾವಣಾ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸಿತ್ತು. ಅದನ್ನು ನಂತರ ಜನವರಿ 22 ರವರೆಗೆ ವಿಸ್ತರಿಸಿತು. ಈಗ ಜನವರಿ 31 ರ ವರೆಗೆ ನಿರ್ಬಂಧ ಹೇರಿದೆ.

ಮುಂದಿನ ತಿಂಗಳು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ ಎಂದ ಪಂಜಾಬ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...