Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

ಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

"ಶಿವಸೇನೆಯು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ" ಎಂದು ಮಹಾರಾಷ್ಟ್ರದ ಸಿಎಂ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮುಂಬೈ: ಬಿಜೆಪಿಯು ತನ್ನ ರಾಜಕೀಯ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು, “ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ, ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ” ಎಂದು ಭಾನುವಾರ ಹೇಳಿದ್ದಾರೆ.

ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ಸಂಸ್ಥಾಪಕ ಮತ್ತು ಅವರ ತಂದೆ ಬಾಳ ಠಾಕ್ರೆ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಶಿವಸೇನೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್‌ ಠಾಕ್ರೆ, ಅಧಿಕಾರದ ಮೂಲಕ ಹಿಂದುತ್ವದ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲು ಸೇನೆಯು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾಗಿ ಎಂದು ತಿಳಿಸಿದ್ದಾರೆ.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಡ: ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ವಿಡಿಯೋ ವೈರಲ್: ಪ್ರಕರಣ ದಾಖಲು

2019ರ ಮಹಾರಾಷ್ಟ್ರ ಚುನಾವಣೆಯ ನಂತರ ಶಿವಸೇನೆಯು ಬಿಜೆಪಿಯಿಂದ ಹೊರಗುಳಿದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದಾರೆ.

ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಿವಸೇನೆ ಅಧಿಕಾರಕ್ಕಾಗಿ ಹಿಂದುತ್ವವನ್ನು ತ್ಯಜಿಸಿದೆ ಎಂಬ ಬಿಜೆಪಿಯ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಅವರು, “ನಮ್ಮ ಪಕ್ಷವು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ” ಎಂದು ಉತ್ತರಿಸಿದ್ದಾರೆ.

“ಬಿಜೆಪಿ ಎಂದರೆ ಹಿಂದುತ್ವವಲ್ಲ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂಬ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಸೇನೆ ಕಳಪೆ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನ ಗಳಿಸಿದ ಇತ್ತೀಚಿನ ನಗರ ಪಂಚಾಯತ್ ಚುನಾವಣೆಗಳನ್ನು ಉಲ್ಲೇಖಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ, ತಾವು ಸೇರಿದಂತೆ ಶಿವಸೇನೆಯ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಅದಕ್ಕೆ ತಕ್ಕಂತೆ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ನಮ್ಮ ಹೊಸ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಳಮಟ್ಟದಲ್ಲಿ ಸಂಸ್ಥೆಗಳನ್ನು ನಿರ್ಮಿಸಿವೆ. ನಾವೂ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಕಳೆದ ಎರಡು ವರ್ಷಗಳಲ್ಲಿ ದ್ವೈವಾರ್ಷಿಕ ಚುನಾವಣೆಯಲ್ಲಿ ನಾವು ಹೊಂದಿದ್ದ ಎರಡು ವಿಧಾನ ಪರಿಷತ್ ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪಕ್ಷದ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಸೇನೆಯು ರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ದೆಹಲಿಯಲ್ಲಿ ಅಧಿಕಾರವನ್ನು ಹಿಡಿಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಂಸ್ಥೆಗಳನ್ನು ನಿರ್ಮಿಸುವತ್ತ ಗಮನಹರಿಸುವಂತೆ ಶಿವ ಸೇನಾ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ನಮ್ಮ ಕೈ ಬಲವಿಲ್ಲದಿದ್ದರೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...