Homeಕರ್ನಾಟಕಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

ಸಂಪುಟ ಪುನರ್‌‌‌‌ ರಚನೆಗೆ ಹೆಚ್ಚುತ್ತಿರುವ ಒತ್ತಡ: ಹೈಕಮಾಂಡ್‌‌‌‌‌ ಒಪ್ಪಿಗೆಗೆ ಕಾಯುತ್ತಿದ್ದೇನೆ ಎಂದ ಬೊಮ್ಮಾಯಿ!

- Advertisement -
- Advertisement -

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌‌ ರಚನೆ ಮಾಡುವಂತೆ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇದಕ್ಕಾಗಿ ಬಿಜೆಪಿ ನಾಯಕತ್ವದ ಒಪ್ಪಿಗೆಗಾಗಿ ಕಾಯುತ್ತಿರುವುದಾಗಿ ಸೋಮವಾರ ಸೂಚಿಸಿದ್ದಾರೆ. ಜನವರಿ 28ಕ್ಕೆ ತಮ್ಮ ಸರ್ಕಾರ ಆರು ತಿಂಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮ ಆಡಳಿತದ ಸಾಧನೆಗಳ ಪಟ್ಟಿಯನ್ನು ಹೊರತರುವುದಾಗಿ ತಿಳಿಸಿದ್ದಾರೆ.

“ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ, ಆದ್ದರಿಂದ ಸಹಜವಾಗಿ ಆಕಾಂಕ್ಷೆಗಳಿವೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಅದನ್ನು ಯಾವಾಗ ಮತ್ತು ಹೇಗೆ ಮಾಡಬೇಕೆಂದು ಪಕ್ಷದ ನಾಯಕತ್ವಕ್ಕೆ ತಿಳಿದಿದೆ. ನಾನು ಅದನ್ನು ನಾಯಕತ್ವದ ಗಮನಕ್ಕೆ ತರುತ್ತಿದ್ದೇನೆ. ನಾಯಕತ್ವವು ಈ ಬಗ್ಗೆ ನನ್ನನ್ನು ಚರ್ಚೆಗಾಗಿ ಕರೆದಾಗ ಅವರಿಗೆ ನಾನು ಎಲ್ಲಾ ವಿವರಗಳನ್ನು ನೀಡುತ್ತೇನೆ” ಎಂದು ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ಮಂಡಳಿ ಮತ್ತು ನಿಗಮಗಳ ನೇಮಕಾತಿ ಕುರಿತ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪಕ್ಷದಲ್ಲಿ ಚರ್ಚಿಸಬೇಕು ಮತ್ತು ಇದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

“ಇದು ಪಕ್ಷದ ಮೇಲೆ ಅವಲಂಬಿತವಾಗಿದೆ, ಯಾವ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂಬುದನ್ನು ಪಕ್ಷವು ನಿರ್ಧರಿಸುತ್ತದೆ. ಸದ್ಯಕ್ಕೆ ಮುಖ್ಯಮಂತ್ರಿಯಾಗಿರುವ ನನ್ನ ಮುಂದೆ ಮಂಡಳಿ ಮತ್ತು ನಿಗಮಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಹ ಯಾವುದೇ ಪ್ರಸ್ತಾಪವಿಲ್ಲ, ಪಕ್ಷವು ಅದನ್ನು ನೋಡುತ್ತಿದೆ. ಚರ್ಚೆಯ ನಂತರ ಅವರು ವರದಿಯನ್ನು ನೀಡುತ್ತಾರೆ, ಅದರ ಆಧಾರದ ಮೇಲೆ ನಾವು ಈ ಬಗ್ಗೆ ನೋಡುತ್ತೇವೆ”ಎಂದು ಅವರು ಹೇಳಿದ್ದಾರೆ.

2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು ಶೀಘ್ರದಲ್ಲೇ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲು ಅಥವಾ ಪುನರ್ರಚನೆ ಮಾಡಲು ಮತ್ತು ಪಕ್ಷದ ಶಾಸಕರನ್ನು ವಿವಿಧ ಮಂಡಳಿಗಳು ಮತ್ತು ನಿಗಮಗಳ ಖಾಲಿ ಇರುವ ಮುಖ್ಯಸ್ಥರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಯ ಮೇಲೆ ಒತ್ತಡ ಹೆಚ್ಚುತ್ತಿದೆ.

ರಾಜ್ಯದಲ್ಲಿರುವ 34 ಸಚಿವರ ಸ್ಥಾನದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದಲ್ಲಿ 30 ಸಚಿವರು ಈಗಾಗಲೆ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಚ್ಚರಗೊಂಡವರ ಕನಸು; ವೋಕ್ ಸಂಸ್ಕೃತಿ-ಕಥನ ಮತ್ತು ತಾತ್ವಿಕ-ಮಂಥನ

ಈ ಮಧ್ಯೆ, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಂತರವೇ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಸಾಧ್ಯತೆ ಇದೆ ಎಂಬ ಮಾತುಗಳು ಕೂಡಾ ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಹೊಸ ಮುಖಗಳಿಗೆ ಅವಕಾಶ ನೀಡುವ ಗುಜರಾತ್ ಮಾದರಿಯನ್ನು ಶೀಘ್ರದಲ್ಲೇ ರಾಜ್ಯದಲ್ಲೂ ಬಿಜೆಪಿ ಪ್ರಯೋಗಿಸುತ್ತದೆ ಎಂದು ಇತ್ತೀಚೆಗೆ ವರದಿ ಹರಡಿತ್ತು. ಇದನ್ನು ಮಾರ್ಚ್‌ ತಿಂಗಳಲ್ಲಿ ಮಾಡಿದರೆ ತುಂಬಾ ತಡವಾಗಲಿದ್ದು, ಮಂತ್ರಿಗಳು ತಮ್ಮ ಸಂಪುಟದಲ್ಲಿ ಮಾತ್ರವಲ್ಲದೆ, ಸ್ವಂತ ಕ್ಷೇತ್ರದಲ್ಲೂ ಛಾಫು ಮೂಡಿಸಲು ಸಾಧ್ಯವಿರುವುದಿಲ್ಲ ಎಂದು ಪಕ್ಷವು ಗಮನಿಸಿದೆ ಎನ್ನಲಾಗಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ, ಬಿಜೆಪಿಯು ಭೂಪೇಂದ್ರ ಪಟೇಲ್ ಸರ್ಕಾರಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡುವ ಮೂಲಕ ಗುಜರಾತ್‌ನ ಮಂತ್ರಿ ಮಂಡಳಿಯನ್ನು ಸಂಪೂರ್ಣವಾಗಿ ಬದಲಾಯಿಸಿತ್ತು. ಈ ಹಿಂದಿನ ವಿಜಯ್ ರೂಪಾನಿ ನೇತೃತ್ವದ ಸಚಿವಾಲಯದಿಂದ ಯಾವುದೇ ಸಚಿವರನ್ನು ಸೇರ್ಪಡೆಗೊಳಿಸಿರಲಿಲ್ಲ.

ಬಿಜೆಪಿಯ ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಎಂಪಿ ರೇಣುಕಾಚಾರ್ಯ ಅವರು ಗುರುವಾರದಂದು ರಹಸ್ಯ ಸಭೆ ನಡೆಸಿದ್ದಾರೆ ಎಂದು TNIE ವರದಿ ಮಾಡಿದೆ. ಬೆಳಗಾವಿಯಲ್ಲಿ  ಕೂಡಾ ಇದೇ ರೀತಿಯ ಸಭೆ ಸಚಿವ ಉಮೇಶ ಕತ್ತಿ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಈ ಭಾಗದ ಇತರ ಶಾಸಕರು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಂದೂ ವಿರೋಧಿ ಭಾಷಣ ಆರೋಪಿಸಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌‌ಗೆ ಹಿಂದುತ್ವ ಸಂಘಟನೆಗಳ ಅರ್ಜಿ

ಕೆಲವು ಬಿಜೆಪಿ ಶಾಸಕರ ನಡುವೆ “ರಹಸ್ಯ ಸಭೆ” ನಡೆದಿರುವ ಕುರಿತು ಕೇಳಿದ ಪ್ರಶ್ನೆಯನ್ನು ತಳ್ಳಿ ಹಾಕಿ ಮುಖ್ಯಮಂತ್ರಿ, ಇದು ಪಕ್ಷದ ನಾಯಕರ ನಡುವಿನ ಸಾಂದರ್ಭಿಕ ಸಭೆ ಎಂದು ಬಣ್ಣಿಸಿದ್ದಾರೆ.

“ಈ ಬಗ್ಗೆ ನನಗೆ ಗೊತ್ತಿಲ್ಲ, ಮಾಧ್ಯಮಗಳು ಇದನ್ನು ರಹಸ್ಯ ಸಭೆ ಎಂದು ಕರೆಯುತ್ತಿದ್ದೀರಿ. ಇದರಲ್ಲಿ ಯಾವುದೇ ಗೊಂದಲವಿಲ್ಲ, ನಾಯಕರು ಹಲವಾರು ಸಂದರ್ಭಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ನೀವು ಅದನ್ನು ಬೇರೇನೋ ಎಂದು ಬಿಂಬಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ವಿವಿಧ ಸ್ಥಳಗಳಲ್ಲಿ ಆಕಸ್ಮಿಕವಾಗಿ ಭೇಟಿಯಾಗುತ್ತಾರೆ. ಅದೇ ರೀತಿ ಬಿಜೆಪಿ ನಾಯಕರು ಕೂಡ ಭೇಟಿಯಾಗುತ್ತಾರೆ, ಅದರಲ್ಲಿ ಏನೂ ಇಲ್ಲ” ಎಂದು ಅವರು ಹೇಳಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಕಚೇರಿಯಲ್ಲಿ ಸಭೆ ನಿಗದಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಜೆಟ್ ಸಿದ್ಧತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಡಿಸೆಂಬರ್‌ನಿಂದ ಹಣಕಾಸು ಇಲಾಖೆಯೊಂದಿಗೆ ಆಂತರಿಕ ಸಭೆಗಳನ್ನು ನಡೆಸುತ್ತಿದ್ದು, ಆದಾಯ ಉತ್ಪಾದಿಸುವ ಇಲಾಖೆಗಳೊಂದಿಗೆ ಮತ್ತು ಗುರಿಗಳನ್ನು ತಲುಪಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನಗಳನ್ನು ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ರುವಾಂಡ ರೀತಿಯ ನರಮೇಧ ಭಾರತದಲ್ಲೂ ನಡೆಯಲಿದೆಯೇ?; ತಜ್ಞರ ಎಚ್ಚರಿಕೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...