Homeಮುಖಪುಟಶಾರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹ ಆರೋಪವನ್ನು ಹೊರಿಸಿದ ದೆಹಲಿ ನ್ಯಾಯಾಲಯ!

ಶಾರ್ಜೀಲ್ ಇಮಾಮ್ ವಿರುದ್ಧ ದೇಶದ್ರೋಹ ಆರೋಪವನ್ನು ಹೊರಿಸಿದ ದೆಹಲಿ ನ್ಯಾಯಾಲಯ!

- Advertisement -
- Advertisement -

ನವ ದೆಹಲಿಯ ಜಾಮಿಯಾ ಪ್ರದೇಶದಲ್ಲಿ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೆಹಲಿ ನ್ಯಾಯಾಲಯವು ದೇಶದ್ರೋಹದ ಆರೋಪವನ್ನು ಹೊರಿಸಿದೆ.

ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಇಮಾಮ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜನವರಿ 16, 2020 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಅವರು ಮಾಡಿದ ಭಾಷಣಕ್ಕಾಗಿ, ಅಸ್ಸಾಂ, ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ನವದೆಹಲಿ, ಮಣಿಪುರ ರಾಜ್ಯಗಳು ದೇಶದ್ರೋಹದ ಪ್ರಕರಣವನ್ನು ದಾಖಲಿಸಿದ್ದರು ಮತ್ತು ಅವರನ್ನು ಬಿಹಾರದಿಂದ ಬಂಧಿಸಲಾಗಿತ್ತು.

ಇದನ್ನೂ ಓದಿ:ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 153A (ಧರ್ಮ, ಜನಾಂಗದ ದ್ವೇಷದ ಕಾರಣಗಳನ್ನು ಉತ್ತೇಜಿಸುವುದು), 153B (ಶಾಂತಿ ಭಂಗವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡುವುದು) ಮತ್ತು 505 (2) ಮತ್ತು ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳಿಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಾರ್ಜಿಲ್ ತನ್ನ ಭಾಷಣದಲ್ಲಿ, “ಭಾರತದಿಂದ ಅಸ್ಸಾಂ ಅನ್ನು ಕತ್ತರಿಸುವಂತೆ” ಹೇಳಿದ್ದಾರೆಂದು ಆರೋಪಿಸಲಾಗಿದೆ. ಈ ಹೇಳಿಕೆಯು ಪ್ರತ್ಯೇಕತಾವಾದಿ ಹೇಳಿಕೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ವಾಹನಗಳನ್ನು ತಡೆದು ಅಸ್ಸಾಂಗೆ ಹೋಗುವ ರಸ್ತೆಗಳನ್ನು ನಿರ್ಬಂಧಿಸಲು ಶಾಂತಿಯುತ ಪ್ರತಿಭಟನೆಗಳಿಗೆ ತಾನು ಕರೆ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

ಈ ಪ್ರಕರಣದಲ್ಲಿ ಶಾರ್ಜಿಲ್ ಅವರಿಗೆ ನವೆಂಬರ್‌ನಲ್ಲಿ ಜಾಮೀನು ಸಿಕ್ಕಿತ್ತು, ಆದರೆ ದೆಹಲಿ ಗಲಭೆಗಳ ಪಿತೂರಿ ಪ್ರಕರಣ ಮತ್ತು ಜಾಮಿಯಾ ಪ್ರತಿಭಟನೆಯ ಹಿಂಸಾಚಾರ ಪ್ರಕರಣದಲ್ಲಿ ಕೂಡ ಅವರು ಆರೋಪಿಯಾಗಿರುವುದರಿಂದ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಕಳೆದ ವರ್ಷದ ಫೆಬ್ರವರಿಯಲ್ಲಿ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಅವರು ಪಿತೂರಿ ಇತ್ತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಕೊಲ್ಲಲ್ಪಟ್ಟಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಇದನ್ನೂ ಓದಿ:ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...