Homeಮುಖಪುಟಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಕ್ಷೇತ್ರದಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ ಇರುವುದು ಒಳ್ಳೆಯದೆ. ಏಕೆಂದರೆ, ಯೋಗಿ ಆದಿತ್ಯನಾಥ್ ಅವರು ಇಲ್ಲಿ ಸಾಕಷ್ಟು ವಿರೋಧವನ್ನು ಎದುರಿಸಬೇಕಾಗುತ್ತಿತ್ತು ಎಂದು ಇಲ್ಲಿನ ರಾಮ ಮಂದಿರದ ಪ್ರಧಾನ ಅರ್ಚಕರು ಸೋಮವಾರ ಹೇಳಿದ್ದಾರೆ.

“ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಂದಾಗಿ ಇಲ್ಲಿನ ಮನೆಗಳು ಮತ್ತು ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ. ಇದರಿಂದ ಆದಿತ್ಯನಾಥ್ ಅವರು ಜನರ ವಿರೋಧವನ್ನು ಎದುರಿಸಬೇಕಾಗುತ್ತದೆ ಹೀಗಾಗಿ ಗೋರಖ್‌ಪುರದಿಂದ ಸ್ಪರ್ಧಿಸಬೇಕು ಎಂದು ನಾನು ಈ ಹಿಂದೆ ಸಲಹೆ ನೀಡಿದ್ದೆ” ಎಂದು ತಾತ್ಕಾಲಿಕ ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಸ್ಪರ್ಧಿಸಬಾರದು ಎಂದು ಹೇಗೆ ಸೂಚಿಸಿದ್ದಿರಿ ಎಂಬ ಪ್ರಶ್ನೆಗೆ, ರಾಮ ಲಲ್ಲಾ ಅವರನ್ನು ಕೇಳಿದ ನಂತರ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಆದಿತ್ಯನಾಥ್‌‌ ಅಯೋಧ್ಯೆಯಲ್ಲಿ ಸ್ಪರ್ಧಿಸುವ ಕನಸು ಭಗ್ನವಾಗಿದ್ದೇಕೆ?

’ಇಲ್ಲಿನ ದಾರ್ಶನಿಕರು ಭಿನ್ನಾಭಿಪ್ರಾಯ ಹೊಂದಿದ್ದಾರೆ. ಮನೆಗಳು ಮತ್ತು ಅಂಗಡಿಗಳನ್ನು ನೆಲಸಮ ಮಾಡಿರುವುದರಿಂದ ಮನೆ, ಅಂಗಡಿ ಕಳೆದುಕೊಂಡವರು ಆದಿತ್ಯನಾಥ್ ವಿರುದ್ಧವಾಗಿದ್ದಾರೆ. ಹೀಗಾಗಿ ಅವರು ಗೋರಖ್‌ಪುರ್‌ ಹೋಗುವುದು ಉತ್ತಮ ಎಂದು ನಾನು ಹೇಳಿದೆ. ಇಲ್ಲಿಂದ ಅವರು ಗೆಲ್ಲುತ್ತಿದ್ದು. ಆದರೆ, ಸಾಕಷ್ಟು ಸಮಸ್ಯೆ ಎದುರಿಸಬೇಕಾಗಿತ್ತು’ ಎಂದು 84 ವರ್ಷದ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸರುವ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದಾರೆ.

ಪವನ್ ಪಾಂಡೆ ಅವರು 2012 ರ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ ಗೆದ್ದ, ಹಿಂದಿನ ಅಖಿಲೇಶ್ ಯಾದವ್ ಸರ್ಕಾರದಲ್ಲಿ ಸಚಿವರಾಗಿದ್ದರು. 2017 ರಲ್ಲಿ ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅಯೋಧ್ಯೆ ಕ್ಷೇತ್ರವನ್ನು ಗೆದ್ದಿದ್ದರು.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಕಣಕ್ಕೆ ಇಳಿಯುತ್ತಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಡಿತ್ತು. ಆದರೆ ಬಿಜೆಪಿ ನಾಯಕತ್ವವು ಅವರನ್ನು ಗೋರಖ್‌ಪುರ (ನಗರ) ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ನಿರ್ಧರಿಸಿದೆ.

ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳು – ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಮ್ಯೂನಿಸ್ಟ್,ಮಾವೋವಾದಿಗಳ ಕಪೋಲ ಕಲ್ಪಿತಾ ಮಾಹಿತಿಗೆ ದಿಕ್ಕಾರವಿರಲಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...