Homeಮುಖಪುಟಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

ಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

- Advertisement -
- Advertisement -

ಬುಲ್ಲಿ ಬಾಯ್ ಆಪ್ ಪ್ರಕರಣದಲ್ಲಿ ಬಂಧಿಸಲಾಗಿರುವ ಆ್ಯಪ್‌ನ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಜಾಮೀನು ಅರ್ಜಿಗೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ತನಿಖೆ ಈಗ ಒಂದು ಹಂತದಲ್ಲಿದ್ದು, ಈ ವೇಳೆ ಜಾಮೀನು ನೀಡಬಾರದು ಎಂದು ಹೇಳಿದ್ದಾರೆ.

ಆರೋಪಿಯ ಟ್ವಿಟರ್ ಹ್ಯಾಂಡಲ್‌ಗಳಲ್ಲಿನ ವಿಷಯಗಳು ಅವಹೇಳನಕಾರಿಯಾಗಿದೆ. ಆರೋಪಿಗಳು ನಿರ್ದಿಷ್ಟ ಸಮುದಾಯದ ಮಹಿಳೆಯರನ್ನು ಗುರಿಯಾಗಿಸಲು “ಸುಲ್ಲಿ” ಮತ್ತು “ಬುಲ್ಲಿ ” ನಂತಹ ಪದಗಳನ್ನು ಬಳಸುತ್ತಿದ್ದಾರೆ. ಈ ಬುಲ್ಲಿ ಬಾಯ್ ವೆಬ್‌ಸೈಟ್ ಅನ್ನು ಈ ಆರೋಪಿ ರಚಿಸಿದ್ದಾರೆ. ತನಿಖಾ ಅಧಿಕಾರಿ ಇನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ದೆಹಲಿ ಪೊಲೀಸರ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಡ್ವೊಕೇಟ್ ಇರ್ಫಾನ್ ಅಹ್ಮದ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಗಿಟ್‌ಹಬ್‌ನಲ್ಲಿ ಬುಲ್ಲಿ ಬಾಯಿ ಅಪ್ಲಿಕೇಶನ್‌ನ ಮುಖ್ಯ ಸಂಚುಕೋರ, ಸೃಷ್ಟಿಕರ್ತ ಮತ್ತು ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಎಂದು ಹೇಳಲಾದ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ನೀರಜ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕ (IFSO) ಅಸ್ಸಾಂನ ಜೋರ್ಹತ್‌ನಲ್ಲಿ ಜನವರಿ 5ರಂದು ಬಂಧಿಸಿದೆ.

ಇದನ್ನೂ ಓದಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ಆರೋಪಿ ನೀರಜ್ ಬಿಷ್ಣೋಯ್ ಪರ ವಾದ ಮಂಡಿಸಿದ ವಕೀಲ ಎಲ್. ಓಜಾ, “ನೀರಜ್ ಬಿಷ್ಣೋಯ್ ಅವರನ್ನು ಶಂಕಿತ ಆರೋಪಿಯಾಗಿ ಬಂಧಿಸಲಾಗಿದೆ. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ. ಆದರೆ ಐಟಿ ಕಾಯ್ದೆಯ ಸೆಕ್ಷನ್‌ಗಳನ್ನು ಅವರ ಮೇಲೆ ಹಾಕಲಾಗಿದೆ. ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಅವರು ಯಾವುದೇ ಅವಹೇಳನಕಾರಿ ಭಾಷೆಯನ್ನು ಬಳಸಿಲ್ಲ. ಎಫ್‌ಐಆರ್‌ನಲ್ಲಿ ಕೋಮು ಸೌಹಾರ್ದತೆಯ ಕುರಿತಾದ ಸೆಕ್ಷನ್ 153 ಎ ಅನ್ನು ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ವಿಚಾರಣೆಯನ್ನು ಜನವರಿ 27 ಕ್ಕೆ ಮುಂದೂಡಿದ್ದಾರೆ. ಅರೋಪಿ ಪರ ವಕೀಲರ ಆರೋಪಕ್ಕೆ ವಿವರವಾದ ಉತ್ತರವನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.

ಇದೇ ಪ್ರಕರಣದಲ್ಲಿ  21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಆ್ಯಪ್‌ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದನ್ನೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆ್ಯಪ್‌ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...