Homeಕರ್ನಾಟಕಗಣರಾಜ್ಯೋತ್ಸವ-2022: ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನಿಭಾಯಿಸಬೇಕು - ಬಸವರಾಜ ಬೊಮ್ಮಾಯಿ

ಗಣರಾಜ್ಯೋತ್ಸವ-2022: ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನಿಭಾಯಿಸಬೇಕು – ಬಸವರಾಜ ಬೊಮ್ಮಾಯಿ

- Advertisement -
- Advertisement -

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು 73ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ವಂದನೆ ಸ್ವೀಕರಿಸಿ, ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ’ಸರ್ಕಾರವು ಕೋವಿಡ್ ಸೋಂಕನ್ನು ಸಮರ್ಥವಾಗಿ ಎದುರಿಸಿದೆ. ಸರ್ಕಾರ ಜನತೆಯ ಸಹಾಯದಿಂದ ಮಾಡಿದ ಕಾರ್ಯ ಪ್ರಶಂಸನೀಯವಾಗಿದೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿ, ಪ್ರವಾಹದ ಸಂದರ್ಭದಲ್ಲಿ ಸರ್ಕಾರ ಸಂತ್ರಸ್ತರ ನೆರವಿಗೆ ಧಾವಿಸಿದೆ. 2021-22ನೇ ಸಾಲಿನಲ್ಲಿ 1,472 ಕೋಟಿ ರೂ. ಮೊತ್ತದ ಜಲಾನಯನ ಅಭಿವೃದ್ದಿ ಕಾಮಗಾರಿಗಳಿಗೆ ಅನುಮೋದನೆ ನೀಡಿ, ಕೃಷಿಗೆ ಒತ್ತು ನೀಡಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹ ಯೋಜನೆಯಡಿ 4.41 ಕೋಟಿ ರೂ. ಮೊತ್ತವನ್ನು 16 ಸಾವಿರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ’ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ. ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು ಎನ್ನುವುದನ್ನು ಇಂದಿನ ಯುವಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು. ನಮಗೆ ಬಹಳಷ್ಟು ಹಕ್ಕುಗಳನ್ನು ಸಂವಿಧಾನ ನೀಡಿದೆ. ಆ ಹಕ್ಕುಗಳನ್ನು ಪಡೆಯುವ ಅರ್ಹತೆಯನ್ನು ಸಂಪಾದಿಸುವ ರೀತಿಯಲ್ಲಿ ನಮ್ಮ ಕರ್ತವ್ಯಗಳನ್ನು  ನಿಭಾಯಿಸಬೇಕು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ವ್ಯಕ್ತಿ ಘನತೆ ಎತ್ತಿ ಹಿಡಿಯುತ್ತೇವೆ’: ತುಮಕೂರು ಮಹೀಂದ್ರಾ ಶೋರೂಂ ಘಟನೆ ಬಗ್ಗೆ ಆನಂದ್‌ ಮಹೀಂದ್ರ

‘ಪ್ರಜಾಪ್ರಭುತ್ವದ ತಳಹದಿಯ ಮೇಲೆ ದೇಶ ಗಣರಾಜ್ಯವಾಗಿದ್ದು, ರಾಜ್ಯಗಳ ಒಕ್ಕೂಟವೂ ಆಗಿದೆ. ಪ್ರತಿಯೊಂದು ರಾಜ್ಯವೂ ರಾಷ್ಟ್ರ ನಿರ್ಮಾಣದಲ್ಲಿ ಮುಂದಿರಬೇಕು. ಜನತೆಯೂ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು. ದೇಶ ಮೊದಲು ಎನ್ನುವ ಭಾವನೆ ಇರಬೇಕು. ಕರ್ನಾಟಕ ಭಾರತ ಒಕ್ಕೂಟದಲ್ಲಿ ಪ್ರಬಲವಾದ ರಾಜ್ಯ. ಇದು ಆರ್ಥಿಕವಾಗಿ, ಸಾಮಾಜಿಕವಾಗಿ, ಕೌಶಲ್ಯಯುತವಾಗಿ, ಸಾಂಸ್ಕೃತಿಕವಾಗಿ ಕೊಡುಗೆ ನೀಡುವ ರಾಜ್ಯ. ಈ ಪರಂಪರೆಯನ್ನು ನಾವು ಉಳಿಸಿ ಬೆಳಸಬೇಕಿದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ಚಿಂತನೆ ಹಾಗೂ ಕರ್ತವ್ಯವಿರಬೇಕು ಎಂದು ಜಾಗೃತಿ ಮೂಡಿಸುವ ದಿನ ಇದು’ ಎಂದಿದ್ದಾರೆ.

ಗ್ರಾಮ ಒನ್ ಯೋಜನೆ

ಗ್ರಾಮ ಒನ್ ಯೋಜನೆ ಗ್ರಾಮ ಪಂಚಾಯಿತಿಯಲ್ಲಿ ಜಾತಿ, ಆದಾಯ ಪ್ರಮಾಣ ಪತ್ರಗಳು ಹಾಗೂ ಬ್ಯಾಂಕಿಂಗ್ ಸೇವೆಗಳು  ಸೇರಿದಂತೆ ಹಲವಾರು ಸೇವೆಗಳನ್ನು ಒದಗಿಸುವ ವಿಶಿಷ್ಟ ಯೋಜನೆ. ಇದಕ್ಕಾಗಿ ಗ್ರಾಮಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು 12 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಲಿದೆ. ಸುಮಾರು 3000 ಗ್ರಾಮ ಪಂಚಾಯಿತಿಗಳಲ್ಲಿ  ಪ್ರಾರಂಭವಾಗಲಿದೆ. ಮುಂದಿನ ಕೆಲವೇ  ದಿನಗಳಲ್ಲಿ  ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಯೋಜನೆಯನ್ನು ವಿಸ್ತರಿಸಲಾಗುವುದು. ಜನರ ಬಳಿಗೆ ಸರ್ಕಾರ ಮತ್ತು ಸೇವೆಗಳು ತಲುಪಬೇಕು ಎಂಬ ನೀತಿಯ ಆಧಾರದ ಮೇಲೆ ಯೋಜನೆಯನ್ನು ರೂಪಿಸಲಾಗಿದೆ. ಇದೊಂದು ಕ್ರಾಂತಿಕಾರಿ ಯೋಜನೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...