Homeಮುಖಪುಟಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸಿದ ರೈಲ್ವೇ

- Advertisement -
- Advertisement -

ಭಾರತೀಯ ರೈಲ್ವೇ ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆಯ ಕುರಿತು ಉದ್ಯೋಗ ಆಕಾಂಕ್ಷಿಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ನಂತರ ಎನ್‌ಟಿಪಿಸಿ (Non-Technical Popular Categories) ಪರೀಕ್ಷೆಗಳನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ರಾಷ್ಟ್ರೀಯ ಸಾರಿಗೆ ವಕ್ತಾರರು ಬುಧವಾರ ತಿಳಿಸಿದ್ದಾರೆ.

ವಿವಿಧ ರೈಲ್ವೇ ನೇಮಕಾತಿ ಮಂಡಳಿಗಳ (ಆರ್‌ಆರ್‌ಬಿ) ಅಡಿಯಲ್ಲಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಮತ್ತು ಅನುತ್ತೀರ್ಣರಾದವರ ಕುಂದುಕೊರತೆಗಳನ್ನು ಪರಿಶೀಲಿಸುವ ಸಮಿತಿಯನ್ನು ಸಹ ಇಲಾಖೆ ರಚಿಸಿದೆ. ಎರಡೂ ಕಡೆಯವರ ಮಾತುಗಳನ್ನು ಆಲಿಸಿದ ನಂತರ ಸಮಿತಿಯು ರೈಲ್ವೆ ಸಚಿವಾಲಯಕ್ಕೆ ವರದಿ ಸಲ್ಲಿಸಲಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸುವ ರೈಲ್ವೇ ಇಲಾಖೆ ನಿರ್ಧಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 2019 ರಲ್ಲಿ ಹೊರಡಿಸಲಾದ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆಯಲ್ಲಿ ಒಂದೇ ಒಂದು ಪರೀಕ್ಷೆಯನ್ನು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ರೈಲ್ವೆ ಸಚಿವಾಲಯವು ಜನವರಿ 25 ರಂದು ಉದ್ಯೋಗಾಕಾಂಕ್ಷಿಗಳಿಗೆ ಸಾಮಾನ್ಯ ಸೂಚನೆಯನ್ನು ನೀಡಿತ್ತು, ಪ್ರತಿಭಟನೆಯ ಸಮಯದಲ್ಲಿ ವಿಧ್ವಂಸಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವವರು ರೈಲ್ವೇಯಲ್ಲಿ ಎಂದಿಗೂ ಉದ್ಯೋಗ ಪಡೆಯಲು ಸಾಧ್ಯಾವಾಗುವುದಿಲ್ಲ ಎಂದು ತಿಳಿಸಿತ್ತು.

ಬಿಹಾರದ ಹಲವಾರು ಸ್ಥಳಗಳಲ್ಲಿ ಪ್ರತಿಭಟನಾಕಾರರು ರೈಲು ಹಳಿಗಳ ಮೇಲೆ ಧರಣಿ ನಡೆಸಿದ್ದರು. ಪೂರ್ವ ಕೇಂದ್ರ ರೈಲ್ವೇ (ECR) ವಲಯದ ಕೋಲ್ಕತ್ತಾ-ದೆಹಲಿ ಮಾರ್ಗದಲ್ಲಿ ಸುಮಾರು 25 ರೈಲುಗಳ ಸಂಚಾರಕ್ಕೆ ತೊಂದರೆಯಾಯಿತು. ಪಾಟ್ನಾ, ನವಾಡ, ಮುಜಾಫರ್‌ಪುರ, ಸೀತಾಮರ್ಹಿ, ಬಕ್ಸರ್ ಮತ್ತು ಭೋಜ್‌ಪುರ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆದಿತ್ತು.

ಕೆಲವು ಸ್ಥಳಗಳಲ್ಲಿ ಪ್ರತಿಭಟನಾಕಾರರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದಾರೆ. ಇದರಿಂದಾಗಿ ರೈಲ್ವೆ ಆಸ್ತಿಗೆ ಹಾನಿಯಾಗಿದೆ. ಸಿತಾಮರ್ಹಿಯರೈಲು ನಿಲ್ದಾಣದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಅರಾದಲ್ಲಿ ನಿಂತಿದ್ದ ರೈಲು ಕೋಚ್‌ಗೆ ಬೆಂಕಿ ಹಚ್ಚಲಾಗಿದೆ.

ಸುಮಾರು 1.25 ಕೋಟಿ ಅಭ್ಯರ್ಥಿಗಳು ಹಂತ 2 ರಿಂದ ಹಂತ 6 ರವರೆಗಿನ 35,000 ಕ್ಕೂ ಹೆಚ್ಚು ಹುದ್ದೆಗಳ ಪರೀಕ್ಷೆಗಳಿಗೆ ಹಾಜರಾಗಿದ್ದಾರೆ. ಈ ಹುದ್ದೆಗಳ ಆರಂಭಿಕ ವೇತನವು ತಿಂಗಳಿಗೆ 19,900 ರಿಂದ 35,400 ರೂಪಾಯಿಯಿದೆ.


ಇದನ್ನೂ ಓದಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...