Homeಮುಖಪುಟದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

ದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

- Advertisement -
- Advertisement -

ದೆಹಲಿ: ಎಂಟು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರು ಅತ್ಯಾಚಾರವೆಸಗಿದ್ದು, ಬಾಲಕಿಯನ್ನು ಐಸಿಯುಗೆ ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ.

ಈಶಾನ್ಯ ದೆಹಲಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ 11 ಮತ್ತು 12 ವರ್ಷದ ಇಬ್ಬರು ಬಾಲಕರು ಅತ್ಯಾಚಾರವೆಸಗಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಮಂಗಳವಾರ ವರದಿ ಮಾಡಿದೆ.

ಬಾಲಕಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಬಾಲಕಿಗೆ ತೀವ್ರ ರಕ್ತಸ್ರಾವವಾಗಿದೆ ಎಂದು ವರದಿಗಳಾಗಿವೆ.

ಎಂಟು ವರ್ಷದ ಬಾಲಕಿ ಸೋಮವಾರ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ 12 ವರ್ಷದ ಬಾಲಕ ಬಾಲಕಿಯನ್ನು ತನ್ನ ಮನೆಗೆ ಕರೆದಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವನು ಮತ್ತು ಅವನ ಸ್ನೇಹಿತ ಸೇರೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕಿ ಮನೆಗೆ ಹಿಂದಿರುಗಿದಾಗ,  ತೀವ್ರ ಹೊಟ್ಟೆ ನೋಯುತ್ತಿರುವುದಾಗಿ ತಿಳಿಸಿದ್ದು, ಮರ್ಮಾಂಗಗಳಿಗೆ ಗಂಭೀರ ಗಾಯಗಳಾಗಿರುವುದು ತಿಳಿದುಬಂದಿದೆ ಎಂದು ದೆಹಲಿ ಮಹಿಳಾ ಆಯೋಗ ಹೇಳಿದೆ.

“ಆರಂಭದಲ್ಲಿ ನನ್ನ ಮಗಳು ಏನು ಹೇಳುತ್ತಿದ್ದಾಳೆಂದು ತನಗೆ ಅರ್ಥವಾಗಲಿಲ್ಲ” ಎಂದು ಬಾಲಕಿಯ ತಾಯಿ ದಿ ಹಿಂದೂಗೆ ತಿಳಿಸಿದ್ದಾರೆ. “ನಾನು ಅವಳ ಬಟ್ಟೆಗಳನ್ನು ನೋಡಿದಾಗ, ಅವಳು ಅತ್ಯಾಚಾರಕ್ಕೊಳಗಾಗಿದ್ದಾಳೆಂದು ಅರಿವಾಯಿತು” ಎಂದು ಹೇಳಿದ್ದಾರೆ. “ಆ ಹುಡುಗ ನನ್ನ ಮಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆಂದು ನಂತರ ನನಗೆ ಅರ್ಥವಾಯಿತು” ಎಂದಿದ್ದಾರೆ.

ಆಯೋಗವು ಬುಧವಾರ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಥಮ ಮಾಹಿತಿ ವರದಿಯ ಪ್ರತಿಯನ್ನು ನೀಡುವಂತೆ ಸೂಚಿಸಿದೆ. ಪ್ರಕರಣದಲ್ಲಿ ಬಂಧಿತರಾಗಿರುವವರ ವಿವರಗಳನ್ನು ಸಮಿತಿ ಕೇಳಿದೆ.

ಜನವರಿ 28ರೊಳಗೆ ಕ್ರಮ ಕೈಗೊಂಡಿರುವ ವರದಿ ಸಲ್ಲಿಸುವಂತೆ ಸಮಿತಿಯು ಪೊಲೀಸರಿಗೆ ಸೂಚಿಸಿದೆ. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 (ಅಪಹರಣ) ಮತ್ತು 376 ಎಬಿ (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಸಂಜಯ್ ಸೈನ್ ತಿಳಿಸಿದ್ದಾರೆ. “ಅತ್ಯಾಚಾರವೆಸಗಿರುವ ಹುಡುಗರು ಬಾಲಕಿಯ ನೆರೆಹೊರೆಯವರಾಗಿದ್ದಾರೆಂಬುದು ಸ್ಥಳೀಯರ ವಿಚಾರಣೆ ಮತ್ತು ಮನೆಯ ಸಮೀಪವಿರುವ ಸಿಸಿಟಿವಿಗಳ ಸಹಾಯದಿಂದ ತಿಳಿದುಬಂದಿದೆ” ಎಂದು ಪೊಲೀಸರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕಾಗಿದೆ” ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಒಡಿಶಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ, ಆತನ ಪತ್ನಿಗೆ 20 ವರ್ಷ ಜೈಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...