Homeಮುಖಪುಟಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

ಯುಪಿ ಚುನಾವಣೆ: ಅಯೋಧ್ಯೆಯಿಂದ ಪವನ್ ಪಾಂಡೆ ಎಸ್‌ಪಿ ಅಭ್ಯರ್ಥಿ, ಬಿಜೆಪಿ ಅಭ್ಯರ್ಥಿ ಬಗ್ಗೆ ಕುತೂಹಲ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೋರಖ್‌ಪುರದ ನಂತರ ಅಯೋಧ್ಯೆ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವಾಗಿವೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಯೋಧ್ಯೆಯಿಂದ ಹಿಂದೆ ಸರಿದಿದ್ದಾರೆ. ಇದೇ ವೇಳೆ ಸಮಾಜವಾದಿ ಪಾರ್ಟಿ 2012ರಲ್ಲಿ ಅಯೋಧ್ಯೆಯಿಂದ ಜಯಗಳಿಸಿದ್ದ ಪವನ್ ಪಾಂಡೆ ಅವರನ್ನು ಕಣಕ್ಕಿಳಿಸಿದೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ತೇಜ್ ನಾರಾಯಣ ಪಾಂಡೆ ಅಲಿಯಾಸ್ ಪವನ್ ಪಾಂಡೆ ಅವರನ್ನು ತನ್ನ ಅಭ್ಯರ್ಥಿ ಎಂದು ಸಮಾಜವಾದಿ ಪಕ್ಷ ಘೋಷಿಸಿದ್ದು, ಪವನ್ ಪಾಂಡೆ ವಿರುದ್ಧ ಬಿಜೆಪಿ ತನ್ನ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಕೆರಳಿಸಿದೆ.

ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದಗಿನಿಂದ ಅಯೋಧ್ಯೆಯಲ್ಲಿ ಬಿಜೆಪಿ ವಿರುದ್ಧ ಜನರಲ್ಲಿ ಆಕ್ರೋಶವಿದೆ. ಸರ್ಕಾರ ತಮ್ಮ ಮನೆ, ಅಂಗಡಿಗಳನ್ನು ಕಸಿದುಕೊಂಡಿದೆ ಎಂಬ ಟೀಕೆಗಳು ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿಯ ಅಭ್ಯರ್ಥಿ ಆಯ್ಕೆಗೆ ಒತ್ತಡ ಕೂಡ ಇದೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ಪಾಂಡೆ ಅವರು 2012 ರಲ್ಲಿ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. 2017 ರವರೆಗೆ ಎಸ್‌ಪಿ ಸರ್ಕಾರದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 2017ರ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಬಿಜೆಪಿಯ ವೇದಪ್ರಕಾಶ್ ಗುಪ್ತಾ ವಿರುದ್ಧ ಸೋತಿದ್ದರು.

ರಾಮಲಲ್ಲಾ ದೇವಸ್ಥಾನದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಕೂಡ ಅಯೋಧ್ಯೆಯಲ್ಲಿ ಪವನ್ ಪಾಂಡೆ ಪ್ರಬಲ ಅಭ್ಯರ್ಥಿ ಎಂದಿದ್ದಾರೆ. ಚುನಾವಣೆ ಹಿನ್ನೆಲೆ ಆಶೀರ್ವಾದ ಪಡೆಯಲು ಸ್ಥಳೀಯ ರಾಜಕಾರಣಿಗಳು ತಮ್ಮ ಬಳಿಗೆ ಬರಲು ಪ್ರಾರಂಭಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಅರ್ಚಕರು, “ಇದುವರೆಗೂ ಸಮಾಜವಾದಿ ಪಕ್ಷದ ನಾಯಕ ಪವನ್ ಪಾಂಡೆ ಅವರ ಪತ್ನಿ ನನ್ನ ಬಳಿಗೆ ಬಂದಿದ್ದಾರೆ, ಪವನ್ ಪಾಂಡೆ ಎಸ್‌ಪಿಯ ಪ್ರಬಲ ಅಭ್ಯರ್ಥಿ” ಎಂದು ಹೇಳಿದ್ದರು.

ಸದ್ಯ ಬಿಜೆಪಿಯ ಶಾಸಕ ವೇದಪ್ರಕಾಶ್ ಗುಪ್ತಾ ಮತ್ತೆ ಇಲ್ಲಿಂದ ಕಣಕ್ಕಿಳಿಯುವ ಸಾಧ್ಯತೆಯನ್ನು ಬೆಂಬಲಿಗರು ಹೇಳುತ್ತಾರೆ. ಆದರೆ, ಅವರ ಬಗ್ಗೆಯೂ ಅಯೋಧ್ಯೆಯಲ್ಲಿ ಉತ್ತಮ ಅಭಿಪ್ರಾಯವಿಲ್ಲ ಎನ್ನಲಾಗುತ್ತದೆ. ಎಲ್ಲದಕ್ಕೂ ಸರ್ಕಾರ ಭೂ ಹಗರಣ ಮತ್ತು ಜನರ ನೆಲೆಯನ್ನು ಕಸಿದುಕೊಂಡಿದ್ದು ಕಾರಣ ಎನ್ನಲಾಗಿದೆ.

ಅಯೋಧ್ಯೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಿಸಿಲ್ಲ. ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳಾದ ಅಯೋಧ್ಯೆ, ಬಿಕಾಪುರ್, ರುದೌಲಿ, ಗೋಸೈಗಂಜ್ ಮತ್ತು ಮಿಲ್ಕಿಪುರ್ ಈಗ ಬಿಜೆಪಿ ವಶದಲ್ಲಿವೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಯೋಧ್ಯೆಯಲ್ಲಿ ಫೆಬ್ರವರಿ 27 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...