Homeಮುಖಪುಟ2019-20ರ ಅಂಕಿ-ಅಂಶಗಳ ಪ್ರಕಾರ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷ: ವರದಿ

2019-20ರ ಅಂಕಿ-ಅಂಶಗಳ ಪ್ರಕಾರ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷ: ವರದಿ

- Advertisement -
- Advertisement -

ನವದೆಹಲಿ: 2019-20ರ ಹಣಕಾಸು ವರ್ಷದಲ್ಲಿ ಬಿಜೆಪಿ 4,847.78 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದೆ. ಈ ಮೌಲ್ಯವು ಇತರ ಎಲ್ಲಾ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಅತ್ಯಧಿಕವಾಗಿದೆ ಎಂದು ವರದಿಯಾಗಿದೆ.

ಬಿಜೆಪಿ ನಂತರದ ಸ್ಥಾನದಲ್ಲಿ ಬಿಎಸ್‌ಪಿ 698.33 ಕೋಟಿ ರೂ., ಕಾಂಗ್ರೆಸ್ 588.16 ಕೋಟಿ ರೂ. ಹೊಂದಿರುವುದಾಗಿ ಚುನಾವಣಾ ಸುಧಾರಣೆಗಳ ವಕೀಲರ ಗುಂಪಾದ ಎಡಿಆರ್ (ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್) ತಿಳಿಸಿದೆ.

2019-20ರಲ್ಲಿ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಆಸ್ತಿ, ಹೊಣೆಗಾರಿಕೆಗಳ ವಿಶ್ಲೇಷಣೆಯ ಆಧಾರದ ಮೇಲೆ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ತನ್ನ ವರದಿಯನ್ನು ಸಿದ್ಧಪಡಿಸಿದೆ.

ವಿಶ್ಲೇಷಣೆಯ ಪ್ರಕಾರ, 2019-20ರಲ್ಲಿ ಏಳು ರಾಷ್ಟ್ರೀಯ ಮತ್ತು 44 ಪ್ರಾದೇಶಿಕ ಪಕ್ಷಗಳು ಘೋಷಿಸಿದ ಒಟ್ಟು ಆಸ್ತಿ ಕ್ರಮವಾಗಿ 6,988.57 ಕೋಟಿ ರೂ. ಮತ್ತು 2,129.38 ರೂ. ಕೋಟಿ ಆಗಿದೆ.

ಏಳು ರಾಷ್ಟ್ರೀಯ ಪಕ್ಷಗಳ ಪೈಕಿ, ಅತಿ ಹೆಚ್ಚು ಆಸ್ತಿಯನ್ನು ಬಿಜೆಪಿ (ರೂ. 4847.78 ಕೋಟಿ ಅಥವಾ ಶೇ. 69.37) ಹೊಂದಿದೆ. ನಂತರದ ಸ್ಥಾನದಲ್ಲಿ ಬಿಎಸ್‌ಪಿ (ರೂ. 698.33 ಕೋಟಿ ಅಥವಾ ಶೇ. 9.99), ಕಾಂಗ್ರೆಸ್ (588.16 ಕೋಟಿ ಅಥವಾ ಶೇ. 8.42) ಇರುವುದಾಗಿ ಎಡಿಆರ್‌ ಹೇಳಿದೆ.

44 ಪ್ರಾದೇಶಿಕ ಪಕ್ಷಗಳ ಪೈಕಿ ಅಗ್ರ 10 ಪಕ್ಷಗಳ ಆಸ್ತಿ ಮೌಲ್ಯ 2028.715 ಕೋಟಿ ರೂ. ಅಥವಾ ಒಟ್ಟು ಮೌಲ್ಯದ ಪೈಕಿ ಶೇ.95.27ರಷ್ಟು ಪಾಲು ಎನ್ನಲಾಗಿದೆ.

2019-20 ರಲ್ಲಿ ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು 563.47 ಕೋಟಿ ರೂ. (ಶೇ. 26.46), ಟಿಆರ್‌ಎಸ್ 301.47 ಕೋಟಿ ರೂ. ಮತ್ತು ಎಐಎಡಿಎಂಕೆ 267.61 ಕೋಟಿ ರೂ. ಹೊಂದಿವೆ.

ಆರ್ಥಿಕ ವರ್ಷ 2019-20 ರಲ್ಲಿ ಪ್ರಾದೇಶಿಕ ಪಕ್ಷಗಳು ಘೋಷಿಸಿದ ಒಟ್ಟು ಆಸ್ತಿಯಲ್ಲಿ 1,639.51 ಕೋಟಿ ರೂ. (ಶೇ. 76.99)ಗಳಷ್ಟು ದೊಡ್ಡ ಪಾಲನ್ನು ಫಿಕ್ಸೆಡ್ ಡೆಪಾಸಿಟ್‌ಗಳು/ಎಫ್‌ಡಿಆರ್ ಹೊಂದಿದೆ.

ಎಫ್‌ಡಿಆರ್/ನಿಶ್ಚಿತ ಠೇವಣಿಗಳ ವರ್ಗದಲ್ಲಿ, ಬಿಜೆಪಿ 3,253.00 ಕೋಟಿ ರೂ., ಬಿಎಸ್‌ಪಿ 618.86 ಕೋಟಿ ರೂ.ಗಳನ್ನು ಘೋಷಿಸಿವೆ. ಕಾಂಗ್ರೆಸ್ ₹ 240.90 ಕೋಟಿ ಘೋಷಿಸಿವೆ.

ಪ್ರಾದೇಶಿಕ ಪಕ್ಷಗಳ ಪೈಕಿ ಎಸ್‌ಪಿ- 434.219 ಕೋಟಿ ರೂ., ಟಿಆರ್‌ಎಸ್- 256.01 ಕೋಟಿ ರೂ., ಎಐಎಡಿಎಂಕೆ- ರೂ. 246.90 ಕೋಟಿ, ಡಿಎಂಕೆ- 62.425 ಕೋಟಿ ರೂ., ಶಿವಸೇನೆ- 148.46 ಕೋಟಿ ರೂ., ಬಿಜೆಡಿ- 118.425 ಕೋಟಿ ರೂ.ಗಳನ್ನಿ ಎಫ್‌ಡಿಆರ್‌‌/ನಿಶ್ಚಿತ ಠೇವಣಿಗಳ ವಿಭಾಗದಲ್ಲಿ ಆಸ್ತಿಯನ್ನು ಘೋಷಿಸಿವೆ.


ಇದನ್ನೂ ಓದಿರಿ: ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...