Homeಕರ್ನಾಟಕಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

- Advertisement -
- Advertisement -

ಕಲ್ಲು ಹೊಡೆದ ಆರೋಪದ ಮೇಲೆ ಬೆಂಗಳೂರಿನ ಟ್ರಾಫಿಕ್ ಎಎಸ್‌ಐ ಒಬ್ಬರು ವಿಕಲಾಂಗ ಮಹಿಳೆಗೆ ಬೂಟು ಕಾಲಿನಿಂದ ಒದ್ದು ಥಳಿಸಿರುವ ಘಟನೆ ನಡೆದಿದೆ. ಈ ಸಂಬಂಧ ವಿಡಿಯೊ ಲಭ್ಯವಾಗಿದೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ಮಹಿಳೆಯ ಮೇಲೆ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಎಎಸ್‌ಐ, ವಿಕಲಾಂಗ ಮಹಿಳೆಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಎಎಸ್‌ಐ ನೀಡಿದ ದೂರಿನ ಆಧಾರದಲ್ಲಿ ಎಸ್.ಜೆ.ಪಾರ್ಕ್ ಪೊಲೀಸರು ವಿಕಲಾಂಗ ಮಹಿಳೆಯ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಎಸ್‌.ಜೆ.ಪಾರ್ಕ್ ಪೊಲೀಸ್ ಠಾಣೆಯ ಸಿಬ್ಬಂದಿ, “ಜನವರಿ 24ರಂದು ಪ್ರಕರಣ ದಾಖಲಾಗಿದೆ. ಟ್ರಾಫಿಕ್‌ ಎಎಸ್‌ಐ ನಾರಾಯಣ್‌ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ. ಟ್ರಾಫಿಕ್‌ ಎಎಸ್‌ಐ ನಾರಾಯಣ್‌ ಅವರು ಹಲಸೂರು ಗೇಟ್‌ ಟ್ರಾಫಿಕ್‌ ಪೊಲೀಸ್ ಠಾಣೆಯವರಾಗಿದ್ದಾರೆಂದು ತಿಳಿದುಬಂದಿದೆ.

ಮಹಿಳೆಯನ್ನು ಅವ್ಯಾಚ್ಯವಾಗಿ ನಿಂದಿಸಿ, ಅಮಾನವೀಯವಾಗಿ ಥಳಿಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಯಾವುದಾದರೂ ಕ್ರಮ ಜರುಗಿಸಲಾಗಿಯೇ ಎಂದು ಪರಿಶೀಲಿಸಲಾಗುತ್ತಿದೆ. ಮೇಲಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಲಾಗಿದೆ. ಅವರ ಗಮನಕ್ಕೂ ಪ್ರಕರಣವನ್ನು ತರಲಾಗಿದ್ದು, ಪ್ರತಿಕ್ರಿಯೆಗಳನ್ನು ನಿರೀಕ್ಷಿಸಲಾಗಿದೆ.

ಸೂಚನೆ: ಈ ವಿಡಿಯೊದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಲಾಗಿದೆ.


ಇದನ್ನೂ ಓದಿರಿ: ಪೊಲೀಸ್ ಇಲಾಖೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್‌ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

11 COMMENTS

  1. ವಿಕಲಾಂಗ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಈ ಪೊಲೀಸಪ್ಪನನ್ನು ಕೂಡಲೇ ಬಂದಿಸಿ ಜೈಲಿಗೆ ಕಳುಹಿಸಬೇಕು.

  2. ಅಧಿಕಾರ ಇದೆ ಅಂತ ಏನು ಬೇಕಾದರೂ ಮಾಡಿದರೆ ನಡೆಯುತ್ತೆ ಅಂತ ಹುಚ್ಚು ಹುಚ್ಚು ಆಗಿ ದಬ್ಬಾಳಿಕೆ ಹಿಂಸೆ ಮಾಡಿ ಕ್ರೌರಿಯವನ್ನು ಮೆರೆಯುವ ಇಂಥ ಅಧಿಕಾರಿಗಳ ಮೇಲೆ ನೇರ ನಿಷ್ಟೂರ ಕ್ರಮಗಳನ್ನು ಮೇಲಾಧಿಕಾರಿಗಳು ತೆಗೆಯಬೇಕು ಹಾಗು ಮಹಿಳೆ ತಪ್ಪು ಮಾಡಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಅದು ಬಿಟ್ಟು ಈ ರೀತಿ ಅಮಾನವೀಯವಾಗಿ ನಡೆಯುದಲ್ಲ

  3. ಇಂಥ ದುಷ್ಟ ದರ್ಪಿಷ್ಟ ಅಧಿಕಾರಿಗೆ ಶಿಕ್ಷೆ ಆಗಲಿ. ಇದು ಅಮಾನವೀಯ ಘಟನೆ ಖಂಡನಾರ್ಹ

  4. Traffic Police officers should have utmost patience while handling any critical cases on roads. When this type videos are made public, Concerned ACP and above officers should find out fact and resolve the issue to save the reputation of Police Department. Harassment to public should be brought to books without delay.

  5. ಪೊಲೀಸ್ರಾ ಅಲ್ಲ ರಕ್ಷಸ ನಡೆ ಇದು ತುಂಬಾ ಅಮಾನವೀಯ ಅವರಿಗೆ ಕಠಿಣ ಶಿಕ್ಷೆ ಆಗಬೇಕು pension ಅನ್ನೋದು ಸಿಗಬಾರದು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ನನ್ನದು

  6. ಇದು ಯಾವಾಗ ಮತ್ತು ಯಾವ ದಿನಾಂಕದಂದು ಆಗಿದೆ ಯಾವ ಪೊಲೀಸ್ ಸ್ಟೇಷನ್ ತಿಳಿಸಿ

  7. If anything is happened he should brought to Senior officers anyway this ASI should be punished Should HomeMinister take action. It should be a lesson to others otherwise public will be giving a fitting reply in a near future

  8. ಅವನಿಗೆ ಯಾವ ಶಿಕ್ಷೇನೂ ಆಗೋದಿಲ್ಲ.ಸ್ವಲ್ಪ ಸಮಯದ ನಂತರ ಎಲ್ಲವೂ ಮರೆತುಹೋಗುತ್ತದೆ.ನಮ್ಮಪ್ರಜಾಪ್ರಬುತ್ವ ಕೆಲಸ ಮಾಡೋದು ಹೀಗೆಯೇ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...