Homeಕರ್ನಾಟಕಕಾಸರಗೋಡಿನಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡುತ್ತಿದ್ದೇವೆ; ಕರ್ನಾಟಕಕ್ಕೆ ಪತ್ರ ಬರೆದ ಕೇರಳ ಸರ್ಕಾರ

ಕಾಸರಗೋಡಿನಲ್ಲಿ ಕನ್ನಡಿಗರ ಹಿತಾಸಕ್ತಿ ಕಾಪಾಡುತ್ತಿದ್ದೇವೆ; ಕರ್ನಾಟಕಕ್ಕೆ ಪತ್ರ ಬರೆದ ಕೇರಳ ಸರ್ಕಾರ

- Advertisement -
- Advertisement -

ಕೇರಳದ ಕಾಸರಗೋಡು ಜಿಲ್ಲೆಯಲ್ಲಿರುವ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡಲು ಕೈಗೊಂಡಿರುವ ಕ್ರಮಗಳ ಕುರಿತು ಕೇರಳ ಸರ್ಕಾರ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆದಿದೆ.

ಕೇರಳದಲ್ಲಿರುವ ಕನ್ನಡಿಗರ ಹಿತಾಸಕ್ತಿ ಮತ್ತು ರಕ್ಷಣೆಗೆ ಕುರಿತಂತೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ ಸೋಮಶೇಖರ ಅವರು ಕೆಲವು ದಿನಗಳ ಹಿಂದೆ ಕೇರಳ ಸರ್ಕಾರಕ್ಕೆ ಬರೆದ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯಿಸಿ ಕೇರಳ ಸರ್ಕಾರವು ಮರುಪತ್ರ ಬರೆದಿದೆ.

“ಕೇರಳ ಸರ್ಕಾರವು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಕೇರಳ ಸರ್ಕಾರಕ್ಕೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಉತ್ತರಿಸಿರುವ ಪ್ರತಿಯನ್ನೂ ನಮಗೆ ಕಳುಹಿಸಿದೆ. ಇದು ನಮ್ಮ ಪ್ರಯತ್ನಕ್ಕೆ ಸಂದ ಜಯ’ ಎಂದು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕನ್ನಡ ಭಾಷೆಯನ್ನು ನಿಭಾಯಿಸಲು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಕಚೇರಿಯಲ್ಲಿ ಕನ್ನಡ ಮತ್ತು ಮಲಯಾಳಂ ಬಲ್ಲ ಗುಮಾಸ್ತರನ್ನು ನೇಮಿಸಲಾಗಿದೆ. ಕಾಸರಗೋಡು ಜಿಲ್ಲೆಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಕುಂದುಕೊರತೆಗಳನ್ನು ಹೆಚ್ಚುವರಿ ಎಸ್ಪಿ ಹರಿಶ್ಚಂದ್ರ ನಾಯ್ಕ್ ಮೂಲಕ ಪರಿಹರಿಸಲಾಗುವುದು ಎಂದು ಕೇರಳ ಸರ್ಕಾರ ಪತ್ರದಲ್ಲಿ ತಿಳಿಸಿದೆ.

ಕನ್ನಡ ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ಕನ್ನಡ ಮಾತನಾಡುವ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗಿದೆ ಮತ್ತು ಕನ್ನಡ ಭಾಷೆಯಲ್ಲಿ ಬರುವ ದೂರುಗಳನ್ನು ಪರಿಹರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಠಾಣೆಗಳ ಸೂಚನಾ ಫಲಕಗಳು, ಠಾಣೆಗಳ ಹೆಸರುಗಳನ್ನು ಕನ್ನಡದಲ್ಲಿ ಬರೆಯಲಾಗಿದೆ ಮತ್ತು ಕಾಸರಗೋಡು ಮತ್ತು ಮಂಜೇಶ್ವರಂ ತಾಲೂಕು ವ್ಯಾಪ್ತಿಯ ಎಲ್ಲಾ ಅಕ್ಷಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ದರ ಪಟ್ಟಿಯನ್ನು ಕನ್ನಡದಲ್ಲಿ ಪ್ರದರ್ಶಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಇ-ಡಿಸ್ಟ್ರಿಕ್ಟ್ ಪೋರ್ಟಲ್‌ನಲ್ಲಿ ಕನ್ನಡ ಭಾಷೆಯನ್ನು ಸೇರಿಸುವ ಬಗ್ಗೆ ರಾಜ್ಯ ಐಟಿ ಮಿಷನ್ ನಿರ್ದೇಶಕರಿಗೂ ತಿಳಿಸಲಾಗುವುದು ಎಂದು ಕೇರಳ ಸರ್ಕಾರ ಭರವಸೆ ನೀಡಿದೆ.

ಕರ್ನಾಟಕದ ಗಡಿ ಭಾಗದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಭಾಷಾ ಪ್ರವೀಣ ಶಿಕ್ಷಕರ ಕೊರತೆ ಇದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಅಂತಹ ಕಡೆಗಳಲ್ಲಿ ಕನ್ನಡ ಬಾರದ ಶಿಕ್ಷಕರ ನೇಮಕವನ್ನು ಕಟ್ಟುನಿಟ್ಟಾಗಿ ತಪ್ಪಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌ ಫೋಟೋ ತೆರವು: ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲು ದೇವನೂರು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...