Homeಕರ್ನಾಟಕವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ: ಗೃಹ ಸಚಿವರ ಸೂಚನೆ ಬೆನ್ನಲ್ಲೇ ‌ಅಧಿಕಾರಿ ಅಮಾನತು

ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ: ಗೃಹ ಸಚಿವರ ಸೂಚನೆ ಬೆನ್ನಲ್ಲೇ ‌ಅಧಿಕಾರಿ ಅಮಾನತು

- Advertisement -
- Advertisement -

ಕಲ್ಲು ಹೊಡೆದ ಆರೋಪದ ಮೇಲೆ ಬೆಂಗಳೂರಿನ ಟ್ರಾಫಿಕ್ ಎಎಸ್‌ಐ ಒಬ್ಬರು ವಿಕಲಾಂಗ ಮಹಿಳೆಗೆ ಬೂಟು ಕಾಲಿನಿಂದ ಒದ್ದು ಥಳಿಸಿರುವ ಘಟನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ ಹೊಡೆದ ಆರೋಪದ ಮೇಲೆ ಮಹಿಳೆಯ ಮೇಲೆ ಎಸ್‌.ಜೆ.ಪಾರ್ಕ್ ಪೊಲೀಸ್ ಪ್ರಕರಣವನ್ನೂ ದಾಖಲಿಸಲಾಗಿದೆ. ಅಲ್ಲದೆ ಎಎಸ್‌ಐ, ವಿಕಲಾಂಗ ಮಹಿಳೆ ಮಂಜುಳಾ ಅವರಿಗೆ ಸಾರ್ವಜನಿಕವಾಗಿ ಬೂಟು ಕಾಲಿನಿಂದ ಒದ್ದು ಅವ್ಯಾಚ್ಯ ಪದಗಳಿಂದ ನಿಂದಿಸಿರುವುದು ವಿಡಿಯೊದಲ್ಲಿ ದಾಖಲಾಗಿದ್ದು, ಈಗ ವೈರಲ್ ಕೂಡ ಆಗಿದೆ. ಈ ಸಂಬಂಧ ಗೃಹ ಸಚಿವರು ಕ್ರಮ ಜರುಗಿಸಿದ್ದಾರೆ. ಮಹಿಳೆಗೆ ನಿಂದಿಸಿ, ಹಲ್ಲೆ ನಡೆಸಿರುವ ಎಎಸ್‌ಐ ನಾರಾಯಣ ಅವರ ವಿರುದ್ಧ ತನಿಖೆಗೆ ಸಚಿವರು ಸೂಚಿಸಿದ್ದರು.

‘ಒಬ್ಬ ಅಮಾಯಕ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಅವಾಚ್ಯ ಮಾತುಗಳನ್ನು ಬಳಸಿದ್ದಲ್ಲದೆ, ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಸೂಚಿಸಿರುವೆ. ಯಾರೇ ಆದರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಇದಕ್ಕೆ ಪೊಲೀಸರೂ ಹೊರತಾಗಿಲ್ಲ’ ಎಂದು ಅವರು ಗೃಹಸಚಿವರು ಎಚ್ಚರಿಸಿದ್ದರು.

ಗೃಹ ಸಚಿವರ ಹಿನ್ನೆಲೆಯಲ್ಲಿ ಸಂಚಾರ ವಿಭಾಗದ ಜಂಟಿ ಕಮಿಷನರ್‌ ಬಿ.ಆರ್‌.ರವಿಕಾಂತೇಗೌಡ ಅವರು ಪ್ರಾಥಮಿಕ ತನಿಖೆ ನಡೆಸಿ ನಾರಾಯಣ್ ಅವರನ್ನು ಸಸ್ಪೆಂಡ್ ಮಾಡಿದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದ ಎಸ್‌.ಜೆ.ಪಾರ್ಕ್ ಪೊಲೀಸ್ ಠಾಣೆಯ ಸಿಬ್ಬಂದಿ, “ಜನವರಿ 24ರಂದು ಪ್ರಕರಣ ದಾಖಲಾಗಿದೆ. ಟ್ರಾಫಿಕ್‌ ಎಎಸ್‌ಐ ನಾರಾಯಣ್‌ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...