Homeಮುಖಪುಟಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಮಧ್ಯಪ್ರದೇಶ: ಬಿಜೆಪಿ ನಾಯಕಿಯ ಗೋಶಾಲೆಯಲ್ಲಿ 100ಕ್ಕೂ ಹೆಚ್ಚು ಹಸುಗಳ ಸಾವು, ಸ್ಥಳೀಯರ ಆಕ್ರೋಶ

ಗೋಶಾಲೆಯ ಮುಖ್ಯಸ್ಥರ ಮೇಲೆ ಹಸುಗಳನ್ನು ಕೊಂದು, ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ಆರೋಪ ಕೇಳಿಬಂದಿದೆ.

- Advertisement -
- Advertisement -

ಮಧ್ಯಪ್ರದೇಶದ ಭೋಪಾಲ್ ಬಳಿಯ ಬೆರಾಸಿಯಾ ಪಟ್ಟಣದಲ್ಲಿ ಬಿಜೆಪಿ ನಾಯಕಿ ನಡೆಸುತ್ತಿರುವ ಗೋಶಾಲೆಯಲ್ಲಿ ಸಾವಿಗೀಡಾದ 100 ಕ್ಕೂ ಹೆಚ್ಚು ಹಸುಗಳ ಸಾವಿನ ಸಂಖ್ಯೆ ಜನರಲ್ಲಿ ಆತಂಕ ಮೂಡಿಸಿದೆ. ಆದರೂ, ಗೋವುಗಳ ವಿಷಯವಿಟ್ಟುಕೊಂಡು ರಾಜಕೀಯ ಮಾಡುವ ಬಿಜೆಪಿಯವರು ಮತ್ತು ಇಲ್ಲಿನ ಸರ್ಕಾರ ಈ ಬಗ್ಗೆ ಮೌನವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೋಪಾಲ್ ಬಳಿಯ ಬೆರಾಸಿಯಾದಲ್ಲಿ ಬಿಜೆಪಿ ನಾಯಕಿ ನಿರ್ಮಲಾ ದೇವಿ ಶಾಂಡಿಲ್ಯ ಅವರ ಗೋಶಾಲೆಯಲ್ಲಿ ಈ ಸಾವುಗಳು ಸಂಭವಿಸಿವೆ. ಭಾನುವಾರ (ಜ.30) ಗೋಶಾಲೆಯ ಬಾವಿಯಲ್ಲಿ 20 ಹಸುಗಳ ಶವ ಪತ್ತೆಯಾಗಿದ್ದವು. ಬಳಿಕ ಗೋಶಾಲೆಯ ಪಕ್ಕದ ಖಾಲಿ ಜಾಗದಲ್ಲಿ  80ಕ್ಕೂ ಹೆಚ್ಚು ಹಸುಗಳ ಶವ ಹಾಗೂ ಅಸ್ಥಿಪಂಜರಗಳು ಪತ್ತೆಯಾಗಿವೆ.

ಇಚ್ಟೊಂದು ಹಸುಗಳು ಸಾವನ್ನಪ್ಪಿರುವ ಕುರಿತು ಗೋಶಾಲೆಯ ಹೊರಗೆ ಸ್ಥಳೀಯ ನಿವಾಸಿಗಳು ಮತ್ತು ಗೋರಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಗೋಶಾಲೆಯನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗೋಶಾಲೆಯ ಬಾವಿಯಲ್ಲಿನ ಹಸುಗಳ ಮೃತದೇಹಗಳು ಮತ್ತು ಗೋಶಾಲೆ ಪಕ್ಕದ ಖಾಲಿ ಸ್ಥಳದಲ್ಲಿ ಬಿದ್ದಿರುವ ಮೃತದೇಹಗಳು, ಅಸ್ಥಿಪಂಜರಗಳ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಇದನ್ನೂ ಓದಿ: ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

ಹಸುಗಳ ಈ ದಾರುಣ ಸ್ಥಿತಿಯನ್ನು ಕಂಡು ಜನ ಆಕ್ರೋಶಗೊಂಡು, ಗೋಶಾಲೆ ಮುಖ್ಯಸ್ಥೆ ನಿರ್ಮಲಾದೇವಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಿಜೆಪಿ ನಾಯಕಿ ನಿರ್ಮಲಾ ದೇವಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಭೋಪಾಲ್ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಬೆರಸಿಯಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 269 (ನಿರ್ಲಕ್ಷ್ಯದ ಕ್ರಿಯೆಯಿಂದ ಜೀವಕ್ಕೆ ಅಪಾಯಕಾರಿ ರೋಗವನ್ನು ಹರಡುವ ಸಾಧ್ಯತೆ) ಮತ್ತು 270 (ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ನಾಯಕಿ ನಿರ್ಮಲಾ ದೇವಿ ಕಳೆದ 18 ವರ್ಷಗಳಿಂದಲೂ ಗೋಶಾಲೆ ನಡೆಸುತ್ತಿದ್ದಾರೆ.

ಹಸುಗಳ ಸಾವು ಪ್ರಕರಣದಲ್ಲಿ  ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತಿದ್ದಾರೆ.

ಮತ್ತೊಂದೆಡೆ, ಘಟನೆಯ ಗಂಭೀರತೆಯನ್ನು ಅರಿತು ಜಿಲ್ಲಾಧಿಕಾರಿ ಅವಿನಾಶ್ ಲಾವಾನಿಯಾ ಮತ್ತು ಹಲವಾರು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿ, ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಜನರ ಪ್ರತಿಭಟನೆ, ಆಕ್ರೋಶದಿಂದಾಗಿ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಹಸುಗಳ ಸಾವಿನ ಪ್ರಕರಣದ ತನಿಖೆಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದು, ಹಸುಗಳ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಆದೇಶಿಸಿದ್ದಾರೆ. ಸಂಬಂಧಪಟ್ಟ ಗೋಶಾಲೆಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ಬೆರಸಿಯಾ ಅಭಿವೃದ್ಧಿ ಬ್ಲಾಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸ್ಥಳೀಯ ನಿವಾಸಿ ಘನಶ್ಯಾಮ್ ಗುಪ್ತಾ ಅವರು ಗೋಶಾಲೆಯ ಮುಖ್ಯಸ್ಥರು ಹಸುಗಳನ್ನು ಕೊಂದು ನಂತರ ಸತ್ತ ಹಸುಗಳ ಚರ್ಮ ಮತ್ತು ಮೂಳೆಗಳನ್ನು ವ್ಯಾಪಾರ ಮಾಡುವ ದಂಧೆಯನ್ನು ನಡೆಸುತ್ತಿದ್ದರು ಎಂದು ಆರೋಪಿಸಿದ್ದಾರೆ.

ಸ್ಥಳೀಯ ವಿಎಚ್‌ಪಿ ನಾಯಕ ಜನಕ್ ಸಿಂಗ್ ರಜಪೂತ್, “ಗೋಶಾಲಾ ಮತ್ತು ಅದರ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋಶಾಲೆಯಲ್ಲಿ ಹಸುವಿನ ಚರ್ಮ ಮತ್ತು ಮೂಳೆಗಳ ವ್ಯಾಪಾರ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಲು ತನಿಖೆ ನಡೆಸುವಂತೆ  ನಾವು ಒತ್ತಾಯಿಸುತ್ತೇವೆ” ಎಂದಿದ್ದಾರೆ.

ಆದರೆ, ಗೋಶಾಲೆ ಮುಖ್ಯಸ್ಥೆ ನಿರ್ಮಲಾ ದೇವಿ ಶಾಂಡಿಲ್ಯ, ಸ್ಥಳೀಯ ನಿವಾಸಿಗಳ ಆರೋಪಗಳನ್ನು ನಿರಾಕರಿಸಿದ್ದಾರೆ. “ಜನರು ತಮ್ಮ ಅನಾರೋಗ್ಯದ ಹಸುಗಳನ್ನು ಇಲ್ಲಿ ಬಿಡುತ್ತಾರ. ನೀವು ನೋಡುತ್ತಿರುವ ಶವಗಳು ಅನಾರೋಗ್ಯದಿಂದ ಸತ್ತ ಹಸುಗಳವು. ಈ ಹಸುಗಳು ನಮ್ಮ ಗೋಶಾಲೆಗೆ ಸೇರಿದವುಗಳಲ್ಲ. ನಾನು ಇಲ್ಲಿ ಜೂಜು ಮತ್ತು ಕಳ್ಳತನವನ್ನಿ ನಿಲ್ಲಿಸಿರುವ ಕಾರಣ ಗ್ರಾಮಸ್ಥರು ನನ್ನ ಗೋಶಾಲೆಯನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ವಿಷಯದಲ್ಲಿ ಯಾವುದೇ ತನಿಖೆ, ಪ್ರಕರಣವನ್ನು ಎದುರಿಸಲು ಸಿದ್ಧ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಟ್ರಾಫಿಕ್‌ ಅಧಿಕಾರಿಯಿಂದ ವಿಕಲಾಂಗ ಮಹಿಳೆಗೆ ಥಳಿತ: ಬೆಂಗಳೂರಿನಲ್ಲಿ ಸದ್ಯಕ್ಕಿಲ್ಲ ಟೋಯಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆಯಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

‘ವಂದೇ ಮಾತರಂ’ ದೇಶದ ರಾಷ್ಟ್ರೀಯ ಗೀತೆಯಾಗಿ (National Song) ಮುಂದುವರಿಯಲಿದೆ, ಆದರೆ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ನೈಜ ಧಾರ್ಮಿಕ ಆಕ್ಷೇಪಣೆ ಹೊಂದಿರುವ ಯಾವುದೇ ವ್ಯಕ್ತಿಯು ಅದರ ಕೆಲವು ಚರಣಗಳನ್ನು...

ಉತ್ತರ ಪ್ರದೇಶ ಸೇರಿದಂತೆ 3 ರಾಜ್ಯಗಳ 12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ಭಾರತೀಯ ಚುನಾವಣಾ ಆಯೋಗವು (ಇಸಿಐ) 11 ರಾಜ್ಯಸಭಾ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಗಳು ಹಾಗೂ ಪಶ್ಚಿಮ ಬಂಗಾಳದ ಒಂದು ಸ್ಥಾನಕ್ಕೆ ಉಪಚುನಾವಣೆಯನ್ನು ಅಕ್ಟೋಬರ್ 16ರಂದು ನಡೆಸುವುದಾಗಿ ಘೋಷಿಸಿದೆ. ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ನಡೆಯಲಿರುವ 11 ಸ್ಥಾನಗಳ...

ಪತ್ರಕರ್ತ ರವಿ ನಾಯರ್ ಬಂಧನ ಮುಂದುವರಿಕೆ: ಅದಾನಿ ಮಾನನಷ್ಟ ಪ್ರಕರಣದಲ್ಲಿ ಬಿಡುಗಡೆ ಅರ್ಜಿ ಮುಂದೂಡಿದ ಗುಜರಾತ್ ಹೈಕೋರ್ಟ್ 

ಅದಾನಿ ಎಂಟರ್‌ಪ್ರೈಸಸ್ ವಿರುದ್ಧದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಬಂಧನ ಪ್ರಶ್ನಿಸಿ ಪತ್ರಕರ್ತ ರವಿ ನಾಯರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ಸೋಮವಾರ ಮುಂದೂಡಿದೆ. ನಾಯರ್ ಅವರ ಅರ್ಜಿಗೆ ಪ್ರತಿಕ್ರಿಯಿಸಲು ಅದಾನಿ ಎಂಟರ್‌ಪ್ರೈಸಸ್‌ಗೆ...

ರಾಮನ ಹೆಸರಿಗೆ ಕಳಂಕ ತರಬೇಡಿ’: ರಾಮಮಂದಿರ ದೇಣಿಗೆ ಪ್ರಕರಣದ ಚಾರ್ಜ್‌ಶೀಟ್‌ ವಿಳಂಬದ ಕುರಿತು ಕಾಂಗ್ರೆಸ್‌ ಆಕ್ರೋಶ

ಅಯೋಧ್ಯೆಯ ರಾಮಮಂದಿರದ ದೇಣಿಗೆ ಹಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆ ಕುರಿತು ಕಾಂಗ್ರೆಸ್‌ ಪ್ರಶ್ನೆಗಳನ್ನು ಎತ್ತಿದ್ದು, ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದೆ. ದೇಣಿಗೆ ನಿರ್ವಹಣೆ ಮತ್ತು...

SIR ಹೆಸರಿನಲ್ಲಿ ಚುನಾವಣಾ ಆಯೋಗದ ವಿಐಪಿ ಹಾಗೂ ಸಾಮಾನ್ಯ ಮತದಾರರು ಎಂಬ ಪದವೇ ಅಸಂವಿಧಾನಿಕ: ಮಲ್ಲಿಕಾರ್ಜುನ ಖರ್ಗೆ

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಹೆಸರಿನಲ್ಲಿ ದೇಶದ ಪ್ರಜೆಗಳ ಮತದಾನದ ಹಕ್ಕನ್ನೇ ಕಸಿಯಲಾಗುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ...

ದೆಹಲಿ ಎಸ್‌ಐಆರ್‌: ಮುಸ್ಲಿಂ, ಎಸ್‌ಸಿ ಹಾಗೂ ವಲಸಿಗರ ಪ್ರದೇಶಗಳಲ್ಲೇ ಭಾರೀ ಮತದಾರರ ಹೆಸರುಗಳ ಹೊರಗಿಡುವಿಕೆ: ವರದಿ

ನವದೆಹಲಿ: ದೆಹಲಿಯಲ್ಲಿ ನಡೆದಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ಈ ಹಿಂದೆ ನೋಂದಾಯಿತರಾಗಿದ್ದ ಸುಮಾರು ಮೂವರಲ್ಲಿ ಒಬ್ಬರ ಹೆಸರು ಕಾಣೆಯಾಗಿರುವುದು ಗಮನಾರ್ಹ ಸಂಗತಿಯಾಗಿ ಹೊರಹೊಮ್ಮಿದೆ. ಅದರಲ್ಲೂ...

ಅಪಹರಣ ಪ್ರಕರಣದಲ್ಲಿ ಬಂಧನ: ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾದ ದಲಿತ ಯುವಕ

ಉತ್ತರ ಪ್ರದೆಶದ ಪ್ರತಾಪ್‌ಗಢದ ಪಟ್ಟಿ ಪೊಲೀಸ್ ಠಾಣೆಯ ತನಿಖಾ ಕೊಠಡಿಯ ಶೌಚಾಲಯದಲ್ಲಿ ಸೋಮವಾರ ಮುಂಜಾನೆ 22 ವರ್ಷದ ದಲಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪ್ರತಾಪ್‌ಗಢ ಎಸ್‌ಪಿ,...

‘ಬಾಂಗ್ಲಾದೇಶಿ’ ಎಂಬ ಹಣೆಪಟ್ಟಿ, 87 ದಿನಗಳ ಬಂಧನ, ಬಳಿಕ ಜಾಮೀನು : ಇದು ಬಂಗಾಳಿ ಮುಸ್ಲಿಮನ ಕರುಣಾಜನಕ ಕಥೆ

ಜಲೀಲ್ ಅಖ್ತರ್ ಅವರು ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಬಾಗ್ರೋಯಿ ಗ್ರಾಮದಲ್ಲಿ 70 ವರ್ಷಗಳ ಕಾಲ ಅತ್ಯಂತ ಶಾಂತಿಯುತ ಮತ್ತು ನಿರಾಳವಾದ ಜೀವನವನ್ನು ನಡೆಸುತ್ತಿದ್ದರು. ಭೂ ರಹಿತ ಗ್ರಾಮಸ್ಥರಾಗಿದ್ದ ಅವರು, ದಿನಗೂಲಿ...

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ: ಸಚಿವ ಶಿವಲಿಂಗೇಗೌಡ ವಿವಾದದ ಹೇಳಿಕೆ ಲೋಕಾಯುಕ್ತ ಮತ್ತು ರಾಜ್ಯಪಾಲರಿಗೆ ದೂರು

ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಚಿವರ ವಿರುದ್ಧ ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿಗೆ ವಕೀಲರು ದೂರು ಸಲ್ಲಿಸಿದ್ದಾರೆ. ವಕೀಲ ಎಂ.ಡಿ. ಗೋಪಾಲಗೌಡ ನೇತೃತ್ವದ...

‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ

ಪ್ರಯಾಗ್‌ರಾಜ್‌ನ ಡಾ. ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್‌ಎಲ್‌ಯು) ಕಾನೂನು ವಿಭಾಗದ ಮುಖ್ಯಸ್ಥರ ವಿರುದ್ಧ ದಲಿತ ವಿದ್ಯಾರ್ಥಿಯೊಬ್ಬರು ಮಾಡಿದ ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನದ ಆರೋಪಗಳ ಬಗ್ಗೆ ತನಿಖೆ ನಡೆಸಲು...