Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ಮುಸ್ಲಿಂ ಮಹಿಳೆ ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೊ ಮೂಲಕ ಮತೀಯ ದ್ವೇಷ ಹರಡಲಾಗುತ್ತಿದೆ

- Advertisement -
- Advertisement -

ಮಹಿಳೆಯೊಬ್ಬರು ಭಾರತ ಮಾತೆಯ ಚಿತ್ರವನ್ನು ಹಿಡಿಡುಕೊಂಡು ಜನರ ನಡುವೆ ಗಲಾಟೆ ಮಾಡುತ್ತಿರುವ ವಿಡಿಯೊವೊಂದು, ‘ಮಹಾರಾಷ್ಟ್ರದ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣ ಮಾಡುವುದನ್ನು ತಡೆದು, ಭಾರತ ಮಾತೆಯ ಚಿತ್ರವನ್ನು ಕಸಿಯುತ್ತಿದ್ದಾರೆ’ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೊ ಜೊತೆಗೆ ಮತೀಯ ದ್ವೇಷವನ್ನೂ ಕೂಡಾ ಹರಡಲಾಗುತ್ತಿದೆ.

ವಿಡಿಯೊದಲ್ಲಿ, ಮಹಿಳೆಯು ಚಿತ್ರವನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಾ ಅಲ್ಲಿರುವ ಮಹಿಳೆಯರಿಗೆ ಮತ್ತು ಪುರುಷರಿಗೆ ಹಲ್ಲೆ ಕೂಡಾ ನಡೆಸುತ್ತಾರೆ. ಜೊತೆಗೆ ಘಟನೆಯ ವಿಡಿಯೊ ಮಾಡುತ್ತಿರುವ ವ್ಯಕ್ತಿಯೊಬ್ಬರ ಮೊಬೈಲ್‌ ಅನ್ನು ಕಸಿದು ಅದನ್ನು ಒಡೆದು ಹಾಕುತ್ತಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ! 

ಸಾಮಾಜಿಕ ಮಾಧ್ಯಮದಲ್ಲಿಈ ವಿಡಿಯೊ, ‘‘ಮಹಾರಾಷ್ಟ್ರದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ವಜಾರೋಹಣವನ್ನು ತಡೆದು ಭಾರತ ಮಾತೆಯ ಫೋಟೋವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾವು ಅವರಿಗೆ ನೀಡಿರುವ ಸ್ವಾತಂತ್ರ್ಯವನ್ನು ವಿವರಿಸಲು ಸಾಧ್ಯವಿಲ್ಲ, ಮೂರ್ಖತನದ ಸಹಿಷ್ಣುತೆಯನ್ನು ನೋಡಿ’’ ಎಂದು ಪ್ರತಿಪಾದಿಸಿ ವೈರಲ್‌ ಆಗುತ್ತಿದೆ.

ವಿಡಿಯೊವನ್ನು ಮತೀಯ ದೃಷ್ಟಿಕೋನದಿಂದ ಹಂಚುತ್ತಿರುವ ಹಲವು ಹ್ಯಾಂಡಲ್‌ಗಳು ಬಿಜೆಪಿ ಬೆಂಬಲಿಗರದ್ದಾಗಿದೆ. ಫೇಸ್‌ಬುಕ್‌ನಲ್ಲಿ ಕೂಡಾ ಇವುಗಳನ್ನು ಇದೇ ಪ್ರತಿಪಾದನೆಯೊಂದಿಗೆ ವೈರಲ್ ಮಾಡಲಾಗುತ್ತಿದೆ.

ಟ್ವಿಟರ್‌ನಲ್ಲಿ ಕೂಡಾ ಈ ವಿಡಿಯೊ ವೈರಲ್‌ ಆಗುತ್ತಿದ್ದು, ಇದನ್ನು ಇಲ್ಲಿ ನೀವು ನೋಡಬಹುದಾಗಿದೆ.

ಇಷ್ಟೇ ಅಲ್ಲದೆ, ಈ ವಿಡಿಯೊ ಯೂಟ್ಯೂಬ್‌ನಲ್ಲಿ ಕೂಡಾ ಅಪ್‌ಲೋಡ್ ಆಗುತ್ತಿದೆ. ಇದನ್ನು ನೀವು ಇಲ್ಲಿ ನೋಡಬಹುದು.

ಇದನ್ನೂ ಓದಿ: ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಫ್ಯಾಕ್ಟ್‌ಚೆಕ್‌

ವೈರಲ್‌ ಆಗುತ್ತಿರುವ ಈ ವಿಡಿಯೊವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಘಟನೆಯು ಜನವರಿ 26 ರಂದು ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಈ ಘಟನೆಯ ವರದಿಯನ್ನು ‘ಟೈಮ್ಸ್‌ನೌ ಮರಾಠಿ’ ಜನವರಿ 27 ರಂದು ಮಾಡಿದೆ. ಈ ವರದಿಯ ಪ್ರಕಾರ, ಥಾಣೆಯ ಕೋಲ್‌ಶೆಟ್ ಪ್ರದೇಶದ ‘ಲೋಧಾ ಅಮರಾ’ ಎಂಬ ಅಪಾರ್ಟ್ಮೆಂಟ್‌‌ನ ನಿವಾಸಿಗಳು ಗಣರಾಜ್ಯೋತ್ಸವ ಆಚರಣೆ ಮಾಡಲು ತಯಾರಿ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಮಹಿಳೆ ಅಲ್ಲಿಯದೇ ನಿವಾಸಿಯಾಗಿದ್ದಾರೆ ಎಂದು ಟೈಮ್ಸ್‌ನೌ ಉಲ್ಲೇಖಿಸಿದ್ದು, ಮಹಿಳೆ ಸ್ಥಳಕ್ಕೆ ಬಂದು ಭಾರತ ಮಾತೆಯ ಚಿತ್ರವನ್ನು ಕಿತ್ತುಕೊಂಡು ಗಲಾಟೆ ಎಬ್ಬಿಸಿದ್ದಾರೆ. ಈ ವೇಳೆ ಅಲ್ಲಿನ ಇತರ ನಿವಾಸಿಗಳು ಭದ್ರತಾ ಸಿಬ್ಬಂದಿಯನ್ನು ಕರೆಸಿದ್ದಾರೆ. ಆದರೆ ಮಹಿಳೆಯು ಅವರಿಗೂ ಥಳಿಸಿ, ಘಟನೆಯ ಚಿತ್ರೀಕರಣ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್‌ ಕೂಡಾ ಒಡೆದು ಹಾಕಿದ್ದಾರೆ.

ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡ ನಿವಾಸಿಗಳು ಅಂತಿಮವಾಗಿ ಕಪೂರಬಾವಡಿ ಠಾಣೆಯ ಪೊಲೀಸರನ್ನು ಕರೆಸಿದ್ದಾರೆ. ಪೊಲೀಸರು ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಹಿಂದೆ ಕೂಡಾ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದ್ದು, ಮಹಿಳೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಕೆಲವರು ಹೇಳಿದ್ದಾರೆ ಎಂದು ಟೈಮ್ಸ್‌ ನೌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದೇ ರೀತಿಯ ಪ್ರತಿಪಾದನೆಯೊಂದಿಗೆ ಎಬಿಪಿ ಲೈವ್‌, ನವ ಭಾರತ ಟೈಮ್ಸ್‌ ಕೂಡಾ ಸುದ್ದಿ ಮಾಡಿದೆ.

ಜೊತೆಗೆ ಈ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಮೆನ್ಸ್‌ ಡೆ ಔಟ್‌ ಎಂಬ ವೆಬ್‌ಸೈಟ್‌‌, ಆರೋಪಿತ ಮಹಿಳೆಯು ಘಟನೆಯ ಬಗ್ಗೆ ಟ್ವೀಟ್ ಕೂಡಾ ಮಾಡಿದ್ದಾರೆ ಎಂದು ಬಹಿರಂಗ ಪಡಿಸಿದೆ. ಮಹಿಳೆ ಈ ಟ್ವೀಟ್‌ ಅನ್ನು ಇದೀಗ ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಮೆನ್ಸ್‌ ಡೇ ಔಟ್‌ ಪ್ರಕಾರ, ಮಹಿಳೆಯು ಈ ಘಟನೆಯ ಬಗ್ಗೆ ಟ್ವೀಟ್‌ ಮಾಡುವ ಹೊತ್ತಿಗೆ ತನ್ನ ಟ್ವಿಟರ್‌ ಖಾತೆಯ ಹೆಸರನ್ನು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದು ಕರೆಸಿಕೊಳ್ಳುತ್ತಿದ್ದರು. ಇದರ ನಂತರ ಅವರು ತಮ್ಮ ಟ್ವಿಟರ್‌ ಖಾತೆಯ ಹೆಸರನ್ನು ಕನಿಕಾ ಸೆಕ್ರಿ ಎಂದು ಬದಲಿಸಿದ್ದರು, ನಂತರ ಮತ್ತೇ ತನ್ನ ಟ್ವಿಟರ್‌ ಹ್ಯಾಂಡಲ್ ಹೆಸರನ್ನು ಅವರು ಬದಲಿಸಿದ್ದಾರೆ.

ಈ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಅವರು ಘಟನೆಯ ಬಗ್ಗೆ ವಿವರಿಸುತ್ತಾ, “ಗಣರಾಜ್ಯೋತ್ಸವ ಆಚರಿಸುತ್ತಿದ್ದ ಹಲವರಿಗೆ ಈ ದಿನದ ಬಗ್ಗೆ ಅವರಿಗೆ ಏನೂ ತಿಳಿದಿರಲಿಲ್ಲ. ಅವರು ಕೇವಲ ಧ್ವಜಾರೋಹಣಕ್ಕಾಗಿ ಒಟ್ಟುಗೂಡಿದ್ದರು. ಅವರ ಕೊಳಕು ಕೈಯಲ್ಲಿ ಭಾರತ ಮಾತೆಯ ಚಿತ್ರ ಇತ್ತು, ಅದೂ ಕೂಡಾ ಒಬ್ಬ ಗಂಡಸಿನ ಕೈಯಲ್ಲಿ. ಭಾರತದಲ್ಲಿ ಅತ್ಯಾಚಾರದ ಶೇಕಡಾವಾರು ಪ್ರಮಾಣವು ತುಂಬಾ ಹೆಚ್ಚಿರುವುದರಿಂದ ನಾನು ಆ ಗಂಡಸಿನ ಕೊಳಕು ಕೈಗಳಿಂದ ಚಿತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದೆ. ಅತ್ಯಾಚಾರಿಗಳು ಭಾರತ ಮಾತೆಯ ಚಿತ್ರವನನ್ನು ಸ್ಪರ್ಶಿಸಬಾರದು. ಈ ಪುರುಷರೇ ಮಹಿಳೆಯರ ವಿರುದ್ಧ ಅಪರಾಧಗಳನ್ನು ಮಾಡುತ್ತಾರೆ, ಆದ್ದರಿಂದ ಅವರು ಅದನ್ನು ಹೇಗೆ ಪೂಜೆ ಮಾಡುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಈ ಬಗ್ಗೆ ಇನ್ನೂ ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ ನಾನುಗೌರಿ.ಕಾಂ ಮಹಾರಾಷ್ಟ್ರದ ಥಾಣೆ ಪೊಲೀಸ್‌ ಸ್ಟೇಷನ್‌ಗೆ ಕರೆ ಮಾಡಿತ್ತು. ಕರೆ ಸ್ವೀಕರಿಸಿದ ಅಲ್ಲಿಂದ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ನೀಡಿಲ್ಲ.

ಈ ಬಗ್ಗೆ ದೇಶದ ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌‌ ಆಲ್ಟ್‌‌ನ್ಯೂಸ್‌ ಕೂಡಾ ಕಪೂರ್ಬವಾಡಿ ಮಾಡಿ ಮಾಹಿತಿ ಪಡೆದಿದೆ. ಘಟನೆ ಬಗ್ಗೆ ಮಾತನಾಡಿದ ಅಲ್ಲಿನ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, “ಮಹಿಳೆಯು ಇಸ್ಲಾಂ ಧರ್ಮದವರಲ್ಲ, ಅವರು ಪಂಜಾಬಿ ಹಿಂದೂ ಆಗಿದ್ದಾರೆ. ಜನರು ಸಾಮಾಜಿಕ ಮಾಧ್ಯಮದಲ್ಲಿ ಇಂತಹ ತಪ್ಪು ಮಾಹಿತಿಯನ್ನು ಹಂಚಿಕೊಳ್ಳಬಾರದು” ಎಂದು ಹೇಳಿದ್ದಾರೆ.

“ನಾನು ಡಾಕ್ಟರ್‌ ಅಲ್ಲದಿರುವುದರಿಂದ ಮಹಿಳೆಯ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಅವರಿ ಅಸ್ವಸ್ಥ ಮನಸ್ಸಿನವರಂತೆ ವರ್ತಿಸುತ್ತಾರೆ. ಆದರೆ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಸಾಮಾಜಿಕ ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಜನರ ಬಗ್ಗೆ ಪೊಲೀಸರು ಗಮನಿಸುತ್ತಾರೆ” ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬಹುದಾದರೆ, ಈ ಮಹಿಳೆಯು ಮಾನಸಿಕ ರೋಗಿಯೆಂದು ಹಲವು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಪೊಲೀಸರ ಹೇಳಿಕೆಯಂತೆ ಮಹಿಳೆ ಪಂಜಾಬಿ ಹಿಂದೂ ಆಗಿದ್ದಾರೆ. ಮೆನ್ಸ್‌ಡೆಔಟ್‌ ಹೇಳುವಂತೆ ಈ ಮಹಿಳೆಯ ಹೆಸರು ‘ಕನಿಕಾ ಭೂಪಿಂದರ್‌ ಸೆಕ್ರಿ’ ಎಂದಾಗಿದೆ. ಈ ಹೆಸರು ಸಾಮಾನ್ಯವಾಗಿ ಮುಸ್ಲಿಂ ಮಹಿಳೆಯರಿಗೆ ಇರುವುದಿಲ್ಲ. ಬಿಜೆಪಿ ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಕೆಲವು ಪೇಜ್‌ಗಳು ಮತ್ತು ಹ್ಯಾಂಡಲ್‌ಗಳು ವಿಡಿಯೊವನ್ನು ಮತೀಯ ದ್ವೇಷಕ್ಕೆ ಬಳಸಿಕೊಳ್ಳುತ್ತಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....