Homeಮುಖಪುಟಪಂಜಾಬ್‌‌: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯದ ಮೊರೆ ಹೋದ ಕಾಂಗ್ರೆಸ್‌

ಪಂಜಾಬ್‌‌: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯದ ಮೊರೆ ಹೋದ ಕಾಂಗ್ರೆಸ್‌

- Advertisement -
- Advertisement -

ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ನಿರ್ಧರಿಸಲು ಜನಾಭಿಪ್ರಾಯ ಸಂಗ್ರಹಿಸುವುದಾಗಿ ಪಕ್ಷವು ತಿಳಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ಬುಧವಾರ ವರದಿ ಮಾಡಿದೆ.

ಆಮ್ ಆದ್ಮಿ ಪಕ್ಷದಂತೆಯೇ ಕಾಂಗ್ರೆಸ್ ಹೈಕಮಾಂಡ್ ಕೂಡಾ ಐವಿಆರ್ ಕರೆಗಳ ಮೂಲಕ ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬಹುದು ಎಂದು ನಿರ್ಧರಿಸಲು ಜನರ ಅಭಿಪ್ರಾಯವನ್ನು ಪಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಪಂಜಾಬ್‌: ಸಿಎಂ ಅಭ್ಯರ್ಥಿ ಆಯ್ಕೆಗಾಗಿ ಫೋನ್‌ ಕರೆ: ತಾನೇ ತೋಡಿದ ಖೆಡ್ಡಾದೊಳಗೆ ಬೀಳುತ್ತಿದೆಯೇ ಎಎಪಿ?

IVR ನಲ್ಲಿ ಮೂರು ಆಯ್ಕೆಗಳಿವೆ. ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರ ಹೆಸರು ಮೊದಲ ಸ್ಥಾನದಲ್ಲಿದ್ದು, ನಂತರ ನವಜೋತ್ ಸಿಧು ಅವರ ಹೆಸರನ್ನು ಇರಿಸಲಾಗಿದೆ. ಮೂರನೇ ಆಯ್ಕೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌‌ ಸಿಎಂ ಅಭ್ಯರ್ಥಿಯಿಲ್ಲದೆ ಚುನಾವಣೆ ಸ್ಪರ್ಧಿಸಬೇಕೆ ಎಂದು ಕೇಳುತ್ತಿದೆ.

ಸುನಿಲ್ ಜಾಖರ್ ಮತ್ತು ಸುಖಜಿಂದರ್ ರಾಂಧವಾ ಅವರಂತಹ ಇತರ ಸಂಭಾವ್ಯರ ಹೆಸರುಗಳನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿಲ್ಲ.

ಈ ಹಿಂದೆ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯ ಸಮೀಕ್ಷೆಯನ್ನು ಪ್ರಶ್ನಿಸಿದ್ದರು, ಇದು ಹಗರಣವಾಗಿದ್ದು, ನೀತಿ ಸಂಹಿತೆಯ ಉಲ್ಲಂಘನೆ ಎಂದು ಕರೆದಿದ್ದರು.

ಇದನ್ನೂ ಓದಿ: ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...