Homeಮುಖಪುಟಕೊಲೆ ಯತ್ನ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದು ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ಶಾಸಕ

ಕೊಲೆ ಯತ್ನ ಪ್ರಕರಣ: ಜಾಮೀನು ಅರ್ಜಿ ಹಿಂಪಡೆದು ನ್ಯಾಯಾಲಯಕ್ಕೆ ಶರಣಾದ ಬಿಜೆಪಿ ಶಾಸಕ

- Advertisement -
- Advertisement -

ತಮ್ಮ ವಿರುದ್ಧ ದಾಖಲಾಗಿರುವ ಕೊಲೆ ಯತ್ನ ಪ್ರಕರಣದಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕ ನಿತೇಶ್ ರಾಣೆ ಬುಧವಾರ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಶಾಸಕರನ್ನು ಫೆಬ್ರವರಿ 4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರದ ಸಚಿವ ನಾರಾಯಣ ರಾಣೆ ಅವರ ಪುತ್ರ ನಿತೇಶ್ ರಾಣೆ ಅವರು ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದಿದ್ದಾರೆ.

ಜಾಮೀನು ಅರ್ಜಿ ಹಿಂಪಡೆದು ಸಿಂಧುದುರ್ಗ ನ್ಯಾಯಾಲಯದ ಮುಂದೆ ಶರಣಾದರು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘರತ್ ಹೇಳಿದ್ದಾರೆ. ಪ್ರಾಸಿಕ್ಯೂಷನ್ ಅವರನ್ನು ಪೊಲೀಸ್ ಕಸ್ಟಡಿಗೆ ಕೋರಿತ್ತು. ಹೀಗಾಗಿ ಫೆಬ್ರವರಿ 4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: BJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?: ಮಲ್ಲಿಕಾರ್ಜುನ ಖರ್ಗೆ

ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಸಿಂಧುದುರ್ಗ) ಆರ್.ಬಿ ರೋಟೆ ಅವರು ನಿತೇಶ್ ರಾಣೆ ಜಾಮೀನು ಅರ್ಜಿಯನ್ನು ಮಂಗಳವಾರ ತಿರಸ್ಕರಿಸಿದ್ದರು. ಕೊಲೆ ಯತ್ನ ಪ್ರಕರಣದ ತನಿಖೆ ಅಪೂರ್ಣವಾಗಿರುವುದರಿಂದ ನಿತೇಶ್ ರಾಣೆಯ ಕಸ್ಟಡಿ ವಿಚಾರಣೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾಮೀನು ಅರ್ಜಿಯಲ್ಲಿ, ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳಿಗೆ ಸೇರಿದ ಮತ್ತು ಸಾರ್ವಜನಿಕ ಸ್ಥಾನಮಾನಗಳನ್ನು ಹೊಂದಿರುವ ಜನರನ್ನು ಸುಳ್ಳು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಜ್ಯ ಸರ್ಕಾರ (ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಒಳಗೊಂಡಿರುವ) ಅವರನ್ನು ಬಲಿಪಶು ಮಾಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿತ್ತು.

ಸಿಂಧುದುರ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆ ಪ್ರಚಾರದ ವೇಳೆ ಶಿವಸೇನೆ ಕಾರ್ಯಕರ್ತ ಸಂತೋಷ್ ಪರಬ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ.

ಇತ್ತ ಮಂಗಳವಾರ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ಸಿಂಧುದುರ್ಗ ಜಿಲ್ಲೆಯ ನ್ಯಾಯಾಲಯದ ಹೊರಗೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ, ಸರ್ಕಾರಿ ನೌಕರರ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಕ್ಕಾಗಿ ಮಾಜಿ ಸಂಸದ ನಿಲೇಶ್ ರಾಣೆ ಮತ್ತು ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಮಾಜಿ ಸಂಸದ ನಿಲೇಶ್ ರಾಣೆ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....