ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದಾಗ ತಮ್ಮ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಎಐಎಂಐಎಂ ನಾಯಕ, ಸಂಸದ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಆದರೆ ಅವರ ಕಾರಿನ ಟೈರ್‌ಗಳು ಪಂಕ್ಚರ್ ಆಗಿವೆ ಎಂದು ಅವರು ಹೇಳಿದ್ದಾರೆ.
“ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಅಲ್‌ಹಂದುಲಿಲ್ಲಾ” ಎಂದು ಅವರು ಬರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬನ ಬಂಧನವಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ: ಹಿಂದೂ ದೇಗುಲಗಳನ್ನು ’ಪ್ರಭುತ್ವ ನಿಯಂತ್ರಣಮುಕ್ತ’ಗೊಳಿಸುವ ದುಷ್ಟ ಸಂಚು
ಪಶ್ಚಿಮ ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ದೆಹಲಿ ಬಳಿಯ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಶೂಟರ್‌ಗಳು ಶಸ್ತ್ರಾಸ್ತ್ರಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಒವೈಸಿ ತಿಳಿಸಿದ್ದಾರೆ.
“ಮೀರತ್‌ನ ಕಿಥೌರ್‌ನಲ್ಲಿ ಚುನಾವಣಾ ಕಾರ್ಯಕ್ರಮದ ನಂತರ ನಾನು ದೆಹಲಿಗೆ ಹೊರಟಿದ್ದೆ. ಛಜರ್ಸಿ ಟೋಲ್ ಪ್ಲಾಜಾ ಬಳಿ ಇಬ್ಬರು ನನ್ನ ವಾಹನದ ಮೇಲೆ ಮೂರರಿಂದ ನಾಲ್ಕು ಸುತ್ತಿನ ಬುಲೆಟ್‌ಗಳನ್ನು ಹಾರಿಸಿದರು; ಒಟ್ಟು 3-4 ಜನರಿದ್ದರು” ಎಂದು ಓವೈಸಿ ಹೇಳಿದ್ದಾರೆ.
“ನನ್ನ ವಾಹನದ ಟೈರ್ (ಚಿತ್ರದಲ್ಲಿ) ಪಂಕ್ಚರ್ ಆಗಿದೆ, ಹೀಗಾಗಿ ನಾನು ಇನ್ನೊಂದು ವಾಹನದಲ್ಲಿ ಹೊರಟೆ” ಎಂದು ಅವರು ಬರೆದಿದ್ದಾರೆ. ಈ ಬಗ್ಗೆಅವರು ಚಿತ್ರವನ್ನು ಕೂಡಾ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮೋದಿಯಿಂದಾಗಿ ಕೊರೊನಾ ಸಮಯದಲ್ಲಿ ಪ್ರತಿ ಮನೆಗೆ ಲಕ್ಷ್ಮಿ ದೇವಿ ಬಂದಿದ್ದರು ಎಂಬ ಅಮಿತ್ ಹೇಳಿಕೆ ನಿಜವೇ?
कुछ देर पहले छिजारसी टोल गेट पर मेरी गाड़ी पर गोलियाँ चलाई गयी। 4 राउंड फ़ायर हुए। 3-4 लोग थे, सब के सब भाग गए और हथियार वहीं छोड़ गए। मेरी गाड़ी पंक्चर हो गयी, लेकिन मैं दूसरी गाड़ी में बैठ कर वहाँ से निकल गया। हम सब महफ़ूज़ हैं। अलहमदु’लिलाह। pic.twitter.com/Q55qJbYRih
— Asaduddin Owaisi (@asadowaisi) February 3, 2022
ಅವರು ಟ್ವೀಟ್ ಮಾಡಿರುವ ಚಿತ್ರದಲ್ಲಿ ಬಿಳಿ ಕಾರಿನ ಚಿತ್ರಣವಿದ್ದು, ಅದರ ಬಾಡಿಯಲ್ಲಿ ಎರಡು ಬುಲೆಟ್ ರಂಧ್ರಗಳು ಕಾಣುತ್ತಿದೆ. ಮೂರನೇ ಬುಲೆಟ್ ಟೈರ್‌ಗೆ ತಗುಲಿದೆ ಎನ್ನಲಾಗಿದೆ. ಓವೈಸಿ ಮತ್ತೊಂದು ಕಾರಿನಲ್ಲಿ ಸ್ಥಳದಿಂದ ತೆರಳಿದ್ದಾರೆ.
ಫೆಬ್ರವರಿ 10 ರಿಂದ ಪ್ರಾರಂಭವಾಗುವ ಉತ್ತರ ಪ್ರದೇಶ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಎಐಎಂಐಎಂ ನಾಯಕರಾಗಿರುವ ಓವೈಸಿ ಮೀರತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.
ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ


