Homeಮುಖಪುಟಹಿಜಾಬ್‌‌‌: ವಿದ್ಯಾರ್ಥಿನಿಯರ ಪರವಾಗಿ ಧ್ವನಿ ಎತ್ತಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಹಿಜಾಬ್‌‌‌: ವಿದ್ಯಾರ್ಥಿನಿಯರ ಪರವಾಗಿ ಧ್ವನಿ ಎತ್ತಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

- Advertisement -
- Advertisement -

ರಾಜ್ಯದ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿರುವ ವಿವಾದ ಕುರಿತಂತೆ ಕಾಂಗ್ರೆಸ್‌ ನಾಯಕ, ಸಂಸದ ರಾಹುಲ್ ಗಾಂಧಿ ಧ್ವನಿ ಎತ್ತಿದ್ದು, “ಶಿಕ್ಷಣದ ಮಧ್ಯೆ ಹಿಜಾಬ್‌ ಅನ್ನು ಎಳೆದು ತಂದು ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ” ಎಂದು ಶನಿವಾರ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜಿನ ಆಡಳಿತ ಮಂಡಳಿ ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ನಂತರ ವಿದ್ಯಾರ್ಥಿನಿಯರು ಪ್ರತಿಭಟನೆಗೆ ಇಳಿದಿದ್ದರು. ಜೊತೆಗೆ ಹೈಕೋರ್ಟ್‌ ಮೊರೆಯು ಹೋಗಿದ್ದಾರೆ. ಇದರ ನಂತರ ಜಿಲ್ಲೆಯ ಇತರ ಕೆಲವು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರನ್ನು ಹಿಜಾಬ್‌ ಕಾರಣಕ್ಕೆ ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿದೆ.

ಇದನ್ನೂ ಓದಿ: ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ಈ ಮಧ್ಯೆ, ಶನಿವಾರ ಹಿಜಾಬ್‌ ಅನ್ನು ವಿರೋಧಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಾದವು ಅಂತರಾಷ್ಟ್ರೀಯವಾಗಿ ಸುದ್ದಿಯಾಗಿದ್ದು, ಹಲವಾರು ರಾಷ್ಟ್ರೀಯ ನಾಯಕರು ಈ ಬಗ್ಗೆ ಹಿಜಾಬ್ ಪರವಾಗಿ ಧ್ವನಿ ಎತ್ತಿದ್ದು, ವಿವಾದದ ಹಿಂದೆ ಸಂಘಪರಿವಾರ ಮತ್ತು ಬಿಜೆಪಿ ಇದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ವಿದ್ಯಾರ್ಥಿಗಳ ಹಿಜಾಬನ್ನು ಶಿಕ್ಷಣಕ್ಕೆ ಅಡ್ಡಿಯಾಗುವಂತೆ ಮಾಡಿ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಅವಳು ಯಾರೊಂದಿಗೂ ಭೇದ ತೋರಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, “ಬೇಟಿ ಬಚಾವೋ ಬೇಟಿ ಪಡಾವೋ ಮತ್ತೊಂದು ಟೊಳ್ಳು ಘೋಷಣೆಯಾಗಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಅವರ ಉಡುಗೆ ತೊಡುಗೆಗಳ ಕಾರಣಕ್ಕಾಗಿ ಶಿಕ್ಷಣದ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಮುಸಲ್ಮಾನರ ಕಡೆಗಣಿಸುವಿಕೆಯನ್ನು ಕಾನೂನುಬದ್ಧಗೊಳಿಸುವುದು ಗಾಂಧಿಯವರ ಭಾರತವನ್ನು ಗೋಡ್ಸೆಯ ಭಾರತವನ್ನಾಗಿ ಪರಿವರ್ತಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್‌ ಮುಚ್ಚಿದ ಕುಂದಾಪುರ ಕಾಲೇಜ್‌: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....