Homeಮುಖಪುಟಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

- Advertisement -
- Advertisement -

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಮ್ಮನ್ನೆಲ್ಲ ಇಂದು ಅಗಲಿದ್ದಾರೆ. ದೇಶದ ಸಂಗೀತ ಸಂಸ್ಕೃತಿಯನ್ನು ರೂಪಿಸುವಲ್ಲಿ ಅವರ ಧ್ವನಿಯು ಪ್ರಮುಖ ಪಾತ್ರವಹಿಸಿದೆ. ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ಚಲನಚಿತ್ರ ಪತ್ರಕರ್ತರ ಸಂಘದ ಪ್ರಶಸ್ತಿಗಳು, ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ನಾಲ್ಕು ಫಿಲ್ಮ್‌ಫೇರ್‌‌ ಪ್ರಶಸ್ತಿಗಳು, ಎರಡು ಫಿಲ್ಮ್‌ಫೇರ್‌‌ ವಿಶೇಷ ಪ್ರಶಸ್ತಿಗಳು, ಫಿಲ್ಮ್‌ಫೇರ್‌‌ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಇನ್ನೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಏಳು ದಶಕಗಳ ವೃತ್ತಿ ಜೀವನದಲ್ಲಿ ಲತಾ ಮಂಗೇಶ್ಕರ್‌ ಹಿಂದಿ ಸೇರಿದಂತೆ ಭಾರತದ 20 ಭಾಷೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಕನ್ನಡದ ಸಂಗೊಳ್ಳಿ ರಾಯಣ್ಣ ಚಿತ್ರದ ಬೆಳ್ಳನೆ ಬೆಳಗಾಯಿತು ಗೀತೆ ಸೇರಿದಂತೆ ಎರಡು ಹಾಡುಗಳನ್ನು ಹಾಡಿದ್ದಾರೆ. ಈ ಪೈಕಿ ನೂರಾರು ಹಾಡುಗಳು ಎಂದಿಗೂ ಮರೆಯದ ಗೀತೆಗಳ ಸಾಲಿನಲ್ಲಿವೆ. ಲತಾ ಮಂಗೇಶ್ಕರ್ ಅವರ ಕೆಲವು ಭಾವಪೂರ್ಣ ಹಾಡುಗಳ ನೆನಪು ಇಲ್ಲಿದೆ.

1. ‘ಹೋತೊನ್ ಮೈನ್ ಐಸಿ ಬಾತ್’

`ಹೋತೊನ್ ಮೈನ್ ಐಸಿ ಬಾತ್’ ಭೂಪಿಂದರ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಯುಗಳ ಗೀತೆಯಾಗಿದೆ. ಈ ಹಾಡಿನ ರೆಕಾರ್ಡ್ ಮತ್ತು ಚಿತ್ರೀಕರಣದ ರೀತಿಯಲ್ಲಿ ಆ ಸಮಯದಲ್ಲಿ ಗಮನಾರ್ಹವಾಗಿತ್ತು. ಜ್ಯುವೆಲ್ ಥೀಫ್ ಚಲನಚಿತ್ರವು ಮುಖ್ಯವಾಹಿನಿಯ ಬಾಲಿವುಡ್‌ನ ಅತ್ಯುತ್ತಮ ಥ್ರಿಲ್ಲರ್‌ಗಳಲ್ಲಿ ಒಂದಾಗಿದೆ.

2. ತುಜೆ ದೇಖಾ ತೋ ಯೇ ಜಾನಾ ಸನಂ

ಕುಮಾರ್ ಸಾನು ಮತ್ತು ಲತಾ ಮಂಗೇಶ್ಕರ್ ಹಾಡಿರುವ ’ತುಜೆ ದೇಖಾ ತೋ ಯೇ ಜಾನಾ ಸನಂ’ ದಿಲ್ವಾಲೆ ದುನಿಯಾ ಲೇ ಜಾಯೆಂಗೇ ಸಿನಿಮಾದ ಈ ಹಾಡು ಹಿಟ್ ಆಯಿತು.

3. ’ಆಜ್ ಫಿರ್ ಜೀನೆ ಕಿ ತಮನ್ನಾ’

ಆರ್.ಕೆ. ನಾರಾಯಣ್ ಅವರ ಕಾದಂಬರಿ ಆಧಾರಿತ ಸಿನಿಮಾ ‘ಗೈಡ್’ ಚಿತ್ರದ ಹಾಡು. ಶೈಲೇಂದ್ರ ಬರೆದಿರುವ ಎಸ್.ಡಿ. ಬ್ರೂಮನ್ ಸಂಗೀತ ಸಂಯೋಜನೆಯ ಈ ಹಾಡು ತುಂಬಾ ಜನಪ್ರಿಯವಾಗಿತ್ತು. ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಈ ಯುಗಳ ಗೀತೆ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

4. ಪಿಯಾ ತೋಸೆ

1965 ರ ರೊಮ್ಯಾಂಟಿಕ್ ಸಿನಿಮಾ ‘ಗೈಡ್’. ವಹೀದಾ ರೆಹಮಾನ್ ಮತ್ತು ದೇವ್ ಆನಂದ್ ಈ ಹಾಡಿನಲ್ಲಿ ಚಿತ್ರಿಸಲಾಗಿದೆ. ಬಾಲಿವುಡ್ ನಿರ್ಮಿಸಿದ ಅತ್ಯಂತ ಭಾವಪೂರ್ಣ ರೊಮ್ಯಾಂಟಿಕ್ ಹಾಡುಗಳಲ್ಲಿ ಒಂದಾಗಿದೆ.

5. ಕೋರಾ ಕಾಗಜ್ ಥಾ ಯೇ ಮನ್ ಮೇರಾ

ಕಿಶೋರ್ ಕುಮಾರ್ ಮತ್ತು ಲತಾ ಮಂಗೇಶ್ಕರ್ ಒಳಗೊಂಡ ಡ್ಯುಯೆಟ್ ನಿಮ್ಮನ್ನು 60 ರ ದಶಕಕ್ಕೆ ಕೊಂಡೊಯ್ಯುತ್ತದೆ.

6. ಆಪ್‌ ಕಿ ನಝ್ರೋನ್‌ ನೆ ಸಮ್ಜಾ

ಮಾಲಾ ಸಿನ್ಹಾ, ಧರ್ಮೇಂದ್ರ ಮತ್ತು ಬಾಲರಾಜ್ ಸಹನ್ ನಟಿಸಿದ 1962ರ ಅನ್ಪರ್‌ ಚಿತ್ರಕ್ಕಾಗಿ ಲತಾ ಮಂಗೇಶ್ಕರ್ ಹಾಡಿದ್ದಾರೆ. ಸಾಹಿತ್ಯವನ್ನು ರಾಜಾ ಮೆಹದಿ ಅಲಿ ಖಾನ್ ಬರೆದಿದ್ದಾರೆ.

7. ಮೇರಾ ಸಾಯಾ ಸಾಥ್ ಹೋಗಾ, ಮೇರಾ ಸಾಯಾ

ಕಾಡುವ ಮೆಲೋಡಿ ‘ಮೇರಾ ಸಾಯಾ ಸಾಥ್ ಹೋಗಾ’ ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾಗಿದೆ, ಇಂದಿಗೂ ಈ ಚಲನಚಿತ್ರವನ್ನು ನೋಡಲೇಬೇಕು.


8. ಹುಮೇನ್ ಔರ್ ಜೀನೆ ಕಿ, ಅಗರ್ ತುಮ್ ನಾ ಹೋತೆ

ರಾಜೇಶ್ ಖನ್ನಾ, ರೇಖಾ ಮತ್ತು ರಾಜ್ ಬಬ್ಬರ್ ನಟಿಸಿರುವ, ಲತಾ ಮಂಗೇಶ್ಕರ್ ಹಾಡಿರುವ ಈ ಹಾಡು ಸೂಪರ್ಹಿಟ್ ಆಗಿತ್ತು . ಈ ಹಾಡು ಮೂರು ಆವೃತ್ತಿಗಳನ್ನು ಹೊಂದಿತ್ತು – ಕಿಶೋರ್ ಕುಮಾರ್ ಆವೃತ್ತಿ, ಲತಾ ಮಂಗೇಶ್ಕರ್ ಆವೃತ್ತಿ ಮತ್ತು ಯುಗಳ ಗೀತೆ.

9. ಜಿಯಾ ಚಲೆ ಜಾ ಚಲೆ

ಮಣಿರತ್ನಂ ಅವರ 1998ರಲ್ಲಿ ಬಿಡುಗಡೆಯಾದ ದಿಲ್ ಸೆ ಸಿನಿಮಾದ ಈ ಹಾಡನ್ನು ಪ್ರೀತಿ ಜಿಂಟಾ ಮತ್ತು ಶಾರುಖ್ ಖಾನ್ ಅವರ ಮೇಲೆ ಚಿತ್ರಿಸಲಾಗಿದೆ. ಎ.ಆರ್. ರೆಹಮಾನ್ ಈ ಸಿನಿಮಾದ ಸಂಗೀತ ಸಂಯೋಜನೆ ಮಾಡಿದ್ದಾರೆ.

10. ಕಭಿ ಖುಷಿ ಕಭಿ ಗಮ್

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ಶಾರುಖ್ ಖಾನ್, ಕಾಜೋಲ್, ಹೃತಿಕ್ ರೋಷನ್, ಕರೀನಾ ಕಪೂರ್ ಮುಂತಾದ ಬಾಲಿವುಡ್‌ನ ಸ್ಟಾರ್ ನಟರು ನಟಿಸಿದ ಈ ಚಿತ್ರವು ಭಾರಿ ಹಿಟ್ ಆಗಿತ್ತು. ಈ ಸಿನಿಮಾದ ಶೀರ್ಷಿಕೆ ಗೀತೆಯನ್ನು ಹಾಡಿದ್ದು ಲತಾ ಮಂಗೇಶ್ಕರ್.


ಇದನ್ನೂ ಓದಿರಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...