Homeಮುಖಪುಟಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

ಇದು ನನ್ನ ಭಾರತ: ಲತಾ ಮಂಗೇಶ್ಕರ್‌ರವರಿಗೆ ಅಂತಿಮ ನಮನ ಸಲ್ಲಿಸುವ ಶಾರುಖ್ ಖಾನ್ ಚಿತ್ರ ವೈರಲ್

- Advertisement -
- Advertisement -

ಅಗಲಿತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ರವರಿಗೆ ಇಡೀ ದೇಶವೇ ಭಾವಪೂರ್ಣ ಶ್ರಧ್ದಾಂಜಲಿ ಸಲ್ಲಿಸಿತು. ದೇಶದ ನಾಯಕರು ಸೇರಿದಂತೆ, ಚಿತ್ರರಂಗದ ನಟ-ನಟಿಯರು ಮಂಬೈಗೆ ತೆರಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ನಮನ ಸಲ್ಲಿಸಿದರು. ಈ ವೇಳೆ ಬಾಲಿವುಡ್ ನಟ ಶಾರುಖ್ ಖಾನ್‌ರವರು ಅಂತಿಮ ನಮನ ಸಲ್ಲಿಸಿದ ಚಿತ್ರಗಳು ಟ್ವಿಟರ್‌ನಲ್ಲಿ ಭಾವನಾತ್ಮಕ ಮತ್ತು ಐಕ್ಯತೆಯ ಸಂದೇಶಗಳೊಂದಿಗೆ ವೈರಲ್ ಆಗುತ್ತಿವೆ.

ಚಿತ್ರದಲ್ಲಿ ಶಾರುಖ್ ಖಾನ್ ಇಸ್ಲಾಂ ಪದ್ದತಿಯಂತೆ ದುವಾ ಮಾಡುತ್ತಿದ್ದರೆ ಅವರ ಮ್ಯಾನೇಜರ್ ಪೂಜಾ ದದ್ಲಾನಿಯವರು ಹಿಂದೂ ಸಂಪ್ರದಾಯದಂತೆ ಕೈಮುಗಿದು ಅಂತಿಮ ನಮನ ಸಲ್ಲಿಸಿದ್ದಾರೆ. ತದನಂತರ ಶಾರುಖ್ ಖಾನ್ ಸಹ ಹಿಂದೂ ಪದ್ದತಿಯಂತೆ ಕೈಮುಗಿದು ಗೌರವ ಸಲ್ಲಿಸಿದ್ದಾರೆ. ಈ ಚಿತ್ರಗಳು ಇದು ನನ್ನ ಭಾರತ, ಜಾತ್ಯಾತೀತ ಭಾರತ, ವಿವಿಧತೆಯನ್ನು ಏಕತೆಯನ್ನು ಸಾರುವ ಬಹುತ್ವದ ಭಾರತ ಎಂಬ ಸಾಲುಗಳೊಂದಿಗೆ ಹಂಚಿಕೆಯಾಗಿವೆ.

ಯಾರೂ, ಯಾವುದು ಸಹ ನಮ್ಮನ್ನು ವಿಭಜಿಸಲು ಸಾಧ್ಯವಿಲ್ಲ. ಇದು ನನ್ನ ಭಾರತ ಎಂದು ಸೌಮ್ಯ ಎಂಬುವವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

“ಲತಾ ಮಂಗೇಶ್ಕರ್‌ರವರ ಅಂತ್ಯಕ್ರಿಯೆಯಲ್ಲಿ ಶಾರುಖ್ ಖಾನ್‌ರವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಇದು ಭಾರತದ ನಿಜವಾದ ಪರಂಪರೆ ಮತ್ತು ಸಂಸ್ಕೃತಿಯಾಗಿದೆ. ಕೆಲ ಧಾರ್ಮಿಕ ಮತಾಂಧರು ಇದನ್ನು ಜೀರ್ಣಿಸಿಕೊಳ್ಳಲಾರರು” ಎಂದು ಚಂದ್ರ ಕುಮಾರ್ ಬೋಸ್‌ರವರು ಟ್ವೀಟ್ ಮಾಡಿದ್ದಾರೆ.

ಈಶ್ವರ್ ಅಲ್ಲಾ ತೇರಾ ನಾಮ್, ಸಬ್ಕೊ ಸನ್ಮತಿ ದೇ ಭಗವಾನ್ ಎಂದು ಚಿತ್ರದೊಂದಿಗೆ ರಾಣ ಸಫ್ವಿ ಬರೆದಿದ್ದಾರೆ.

ಇದು ನನ್ನ ಭಾರತ ಎಂದು ಕಾಂಗ್ರೆಸ್ ವಕ್ತಾರ ಪವೇನ್ ಖೇರಾ ಹಂಚಿಕೊಂಡಿದ್ದಾರೆ.

ಯಾವ ದ್ವೇಷವನ್ನು ಇದನ್ನು ಅಳಿಸಲು ಸಾಧ್ಯವಿಲ್ಲ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯೆಶಾ ಘೋಷ್ ಬರೆದಿದ್ದಾರೆ.

ಇದು ಭಾರತದ ನಿಜವಾದ ಅರ್ಥ. 80:20 ಎಂದು ಹೇಳುವ ಮೂಲಕ ಇದನ್ನು ಮುರಿಯಲು ನಿಮಗೆ ಸಾಧ್ಯವಿಲ್ಲ ಎಂದು ಸಮೃದ್ಧಿ ಕೆ ಎಂಬುವವರು ಬರೆದಿದ್ದಾರೆ.

ನಿಜವಾದ ಭಾರತ ಒಂದು ಚಿತ್ರದಲ್ಲಿ ಎಂದು ತನ್ವೀರ್ ಟ್ವೀಟ್ ಮಾಡಿದ್ದಾರೆ.

ಇದಿಷ್ಟು ಆ ಚಿತ್ರವನ್ನು ನೋಡಿ ಒಂದು ಅತ್ಯುತ್ತಮ ಅಂತಿಮ ನಮನ ಎಂದು ಹೇಳಿರುವುದಾಗಿದೆ. ಆದರೆ ಕೆಲ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶಾರುಖ್ ಖಾನ್ ಮಂಗೇಶ್ಕರ್ ಮೇಲೆ “ಉಗುಳುದ್ದಾರೆ” ಎಂದು ಸುಳ್ಳು ಸುದ್ದಿ ಹರಡಿ ಮತಾಂಧತೆ ಮೆರೆದಿದ್ದಾರೆ. ಹರಿಯಾಣದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಯಾದವ್ ಅವರು ಈ ಆರೋಪವನ್ನು ಮಾಡಿದವರಲ್ಲಿ ಮೊದಲಿಗರಾಗಿದ್ದಾರೆ. “ಕ್ಯಾ ಇಸ್ನೆ ತುಕಾ ಹೈ (ಅವರು ಉಗುಳಿದ್ದಾರಾ)?” ಎಂದು ಟ್ವೀಟ್ ಮಾಡಿರುವ ಅವರು ವಿಡಿಯೊ ತುಣಕನ್ನು ಲಗತ್ತಿಸಿದ್ದಾರೆ.

ಇದಕ್ಕೆ ಬಹುತೇಕ ಜನ ನಿಮಗೆ ಇಸ್ಲಾಂ ಆಚರಣೆಯ ಕನಿಷ್ಟ ತಿಳುವಳಿಕೆಯು ಇಲ್ಲ. ಅವರು ದುವಾ ಮಾಡಿದ ನಂತರ ಉಫ್ ಎನ್ನುವ ಪದ್ದತಿ ಅನುಸರಿಸಿದ್ದಾರೆ ಅಷ್ಟೆ. ಇಲ್ಲಿಯೂ ನಿಮ್ಮ ಕೋಮುವಾದ ತರಬೇಡಿ ಎಂದು ಖಂಡಿಸಿದ್ದಾರೆ.


ಇದನ್ನೂ ಓದಿ: ಲತಾ ಮಂಗೇಶ್ಕರ್‌‌ ಮೇಲೆ ಶಾರುಖ್‌ ಉಗುಳಿದರೆಂದು ಸುಳ್ಳು ಹಬ್ಬಿಸಿದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...