Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...