Homeಮುಖಪುಟಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

- Advertisement -
- Advertisement -

“ಮತದಾರರು ತಪ್ಪು ಮಾಡಿದರೆ ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಬಂಗಾಳವಾಗಿ ಬದಲಾಗುತ್ತದೆ” ಎಂಬ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವಿಟರ್‌ನಲ್ಲಿ ತಿರುಗೇಟು ನೀಡಿದ್ದಾರೆ.

ಉತ್ತರ ಪ್ರದೇಶದ ಮೊದಲ ಹಂತದ ಮತದಾನಕ್ಕೂ ಮುನ್ನ ವಿಡಿಯೋ ಬಿಡುಗಡೆ ಮಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತದಾರರಿಗೆ ತಮ್ಮ ಮತವು ರಾಜ್ಯದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಎಚ್ಚರಿಸಿದ್ದರು. ಈ ವೇಳೆ ಮತದಾರರು ತಪ್ಪುಗಳನ್ನು ಮಾಡಿದರೆ ರಾಜ್ಯವು ಶೀಘ್ರದಲ್ಲೇ “ಕಾಶ್ಮೀರ, ಬಂಗಾಳ ಅಥವಾ ಕೇರಳ” ಆಗಬಹುದು ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, “ಯೋಗಿ ಆದಿತ್ಯನಾಥ್ ಭಯಪಡುವಂತೆಯೇ ಉತ್ತರಪ್ರದೇಶವು ಕೇರಳವಾಗಿ ಬದಲಾದರೆ, ಅಲ್ಲಿನ ಜನರಿಗೆ ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಗಳು, ಸಮಾಜ ಕಲ್ಯಾಣ, ಜೀವನಮಟ್ಟ ದೊರೆಯಲಿದೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವನ್ನು ಹೊಂದಿರುತ್ತದೆ. ಉತ್ತರ ಪ್ರದೇಶದ ಜನರು ಇದನ್ನೇ ಬಯಸುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೇ ಹಿಂದಿ ಭಾಷೆಯಲ್ಲಿಯೂ ಪಿಣರಾಯಿ ವಿಜಯನ್ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಕೂಡ ಟ್ವೀಟ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

“ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಉತ್ತರ ಪ್ರದೇಶವು ಕಾಶ್ಮೀರ, ಬಂಗಾಳ ಅಥವಾ ಕೇರಳವಾಗಿ ಬದಲಾಗುತ್ತದೆ ಎಂದು ಮತದಾರರಿಗೆ ಯೋಗಿ ಆದಿತ್ಯನಾಥ್ ಹೇಳುತ್ತಾರೆ. ಯುಪಿ ಅದೃಷ್ಟ ಹೊಂದಿರಬೇಕು!! ಕಾಶ್ಮೀರದ ಸೌಂದರ್ಯ, ಬಂಗಾಳದ ಸಂಸ್ಕೃತಿ ಮತ್ತು ಕೇರಳದ ಶಿಕ್ಷಣವು ಈ ಸ್ಥಳವನ್ನು ಅದ್ಭುತವನ್ನಾಗಿಸುತ್ತದೆ” ಎಂದು ಶಶಿ ತರೂರ್ ಪೋಸ್ಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆ.10 ರಿಂದ ಚುನಾವಣೆ ಆರಂಭವಾಗಿದೆ. ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮಾರ್ಚ್ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...