Homeಮುಖಪುಟರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ...

ರೈತ ಹೋರಾಟದ ಬಿಸಿಯಲ್ಲಿ ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದ ಮತದಾನ ಆರಂಭ – ಪ್ರಮುಖ ಅಂಶಗಳು ಇಲ್ಲಿವೆ

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಸಾರ್ವತ್ರಿಕ ಚುನಾವಣೆಗೂ ಮೊದಲು ನಡೆಯುವ ಸೆಮಿಫೈನಲ್ ಎಂದು ಹೇಳಲಾಗುತ್ತದೆ. ಇತ್ತೀಚೆಗೆ ಅಂತ್ಯಗೊಂಡ ರೈತ ಆಂದೋಲನದ ಕೇಂದ್ರ ಬಿಂದುವೂ ಆಗಿದ್ದ ಯುಪಿಯಲ್ಲಿ ಮೊದಲ ಹಂತದ ಚುನಾವಣೆ ಇಂದು ಆರಂಭವಾಗಿದೆ. ರಾಜ್ಯದ ನಿರ್ಣಾಯಕ ಪಶ್ಚಿಮ ಯುಪಿಯ 58 ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ನಡೆಯುತ್ತಿದ್ದು, ಇಂದು ಮತದಾರರು ತಮ್ಮ ಆಯ್ಕೆಯ ಪ್ರತಿನಿಧಿಯನ್ನು ಆರಿಸಲು ಮತದಾನ ಮಾಡಿದ್ದಾರೆ.

ಚುನಾವಣೆಗೆ ಸಂಬಂಧಿತ ಪ್ರಮುಖ 10 ಅಂಶಗಳು ಹೀಗಿವೆ:

  1. ಮತದಾನ ನಡೆಯುತ್ತಿರುವ 58 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆಯ ವೇಳೆಗೆ ಸರಾಸರಿ 20% ಮತದಾನವಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಪ್ರಮುಖ ಅಭ್ಯರ್ಥಿಗಳಾಗಿ ನೋಯ್ಡಾದ ಹಾಲಿ ಶಾಸಕ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಪುತ್ರ ಪಂಕಜ್ ಸಿಂಗ್ ಮತ್ತು ಆಗ್ರಾ ಗ್ರಾಮಾಂತರದಿಂದ ಸ್ಪರ್ಧಿಸುತ್ತಿರುವ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ ಕಣದಲ್ಲಿದ್ದಾರೆ.
  2. EVM ಮತ್ತು VVPAT ಅಸಮರ್ಪವಾಗಿ ಕೆಲಸ ಮಾಡುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ತಕ್ಷಣವೇ ಅವುಗಳನ್ನು ಪರಿಹರಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಅಜಯ್ ಕುಮಾರ್ ಶುಕ್ಲಾ ಹೇಳಿದ್ದಾರೆ. “ಎಲ್ಲಾ ಮತಗಟ್ಟೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲಾಗಿದೆ ಮತ್ತು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಅವರು ಹೇಳಿದ್ದರು.
  3. 2017 ರಲ್ಲಿ ಬಿಜೆಪಿ ಗರಿಷ್ಟ ಸ್ಥಾನಗಳನ್ನು ಪಡೆದು ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಚುನಾವಣೆಯು ನಿರ್ಣಾಯಕವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸರ್ಕಾರದ ಮೇಲೆ ಯಾವ ರೀತಿಯ ಜನಾಭಿಪ್ರಾಯ ಎಂಬುದನ್ನು ಮತದಾನದಲ್ಲಿ ನಿರೀಕ್ಷಿಸಲಾಗಿದೆ. ಸರ್ಕಾರವು ಕೋವಿಡ್‌ನ ಎರಡನೇ ಅಲೆಯನ್ನು ನಿಭಾಯಿಸಿದ್ದ ಬಗ್ಗೆ ಭಾರೀ ಆಕ್ರೋಶ-ಟೀಕೆಗಳು ವ್ಯಕ್ತವಾಗಿದ್ದವು. ಕೊರೊನಾದಿಂದ ಮೃತಪಟ್ಟವರ ಶವಗಳು ಗಂಗಾ ನದಿಯಲ್ಲಿ ತೇಲಿದ್ದವು ಮತ್ತು ಅದರ ಮರಳಿನ ದಂಡೆಯಲ್ಲಿ ಹೂಳಲ್ಪಟ್ಟಿದ್ದ ಚಿತ್ರಗಳು ದೇಶವನ್ನು ಬೆಚ್ಚಿಬೀಳಿಸಿತ್ತು.
  4. ಬಿಜೆಪಿಗೆ ದೊಡ್ಡ ಸವಾಲಾಗಿ ಸಮಾಜವಾದಿ ಪಕ್ಷವು ಕಣದಲ್ಲಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಕೆಲವು ಸಣ್ಣ ಪಕ್ಷಗಳು ಚುನಾವಣೆಯನ್ನು ಎದುರಿಸುತ್ತಿವೆ. ಅವರು ಇತರ ಹಿಂದುಳಿದ ವರ್ಗಗಳು, ಮುಸ್ಲಿಂ ಸಮುದಾಯ ಮತ್ತು ಯಾದವ ಸಮುದಾಯದಲ್ಲಿ ತಮ್ಮ ಬೆಂಬಲದ ನೆಲೆಯನ್ನು ಹೆಚ್ಚಿಸಿಕೊಂಡಿದ್ದಾರೆ.
  5. ಯುಪಿ ಗೆಲ್ಲುವ ಜವಾಬ್ದಾರಿಯನ್ನು ಹೊತ್ತಿರುವ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಅವರಿಗೆ ಈ ಚುನಾವಣೆಯು ಪರೀಕ್ಷೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ದಲಿತರಲ್ಲಿ ದೊಡ್ಡ ಬೆಂಬಲದ ನೆಲೆಯನ್ನು ಹೊಂದಿರುವ ಮಾಯಾವತಿಯವರ ಬಹುಜನ ಸಮಾಜ ಪಕ್ಷವು ಮತದಾನದಲ್ಲಿರುವ 58 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಲ್ಲಿ ಫಲಿತಾಂಶಗಳ ಮೇಲೆ ಪ್ರಭಾವಬೀರಬಲ್ಲದು ಎಂದು ಹೇಳಲಾಗುತ್ತಿದೆ.
  6. 2013ರ ಮುಜಾಫರ್‌ನಗರ ಹಿಂಸಾಚಾರದ ನಂತರ ಮತದಾನದಲ್ಲಿ ಭಾರೀ ಬದಲಾವಣೆಗಳನ್ನು ಕಂಡಿದೆ. ಧಾರ್ಮಿಕ ಧ್ರುವೀಕರಣವು ಪ್ರಚಾರದ ಕೇಂದ್ರವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಪ್ರತಿಪಕ್ಷ ಸಮಾಜವಾದಿ ಪಕ್ಷವನ್ನು ಪಾಕಿಸ್ತಾನದ ಬೆಂಬಲಿಗರು ಎಂದು ಪದೇ ಪದೇ ಆರೋಪಿಸಿದ್ದಾರೆ.
  7. 2017ರ ಚುನಾವಣೆಯಲ್ಲಿ ಈ 58 ಸ್ಥಾನಗಳಲ್ಲಿ 91% ಬಿಜೆಪಿ ಗೆದ್ದಿದ್ದರೂ, ಈ ಬಾರಿ ಕೃಷಿ ಕಾನೂನುಗಳ ಮೇಲಿನ ಪ್ರತಿಭಟನೆಯಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಾಧ್ಯತೆ ಬಲವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬಿಜೆಪಿಗೆ ಮತದಾರರು ಶಿಕ್ಷೆ ನೀಡಬೇಕು ಎಂದು ಕರೆಕೊಟ್ಟಿದ್ದಾರೆ.
  8. ಚುನಾವಣಾ ತಯಾರಿಗಳು ಆರಂಭವಾಗುತ್ತಿದ್ದ ವೇಳೆ ಜಯಂತ್ ಚೌಧರಿ ಅವರು, ತಮ್ಮನ್ನು ಬಿಜೆಪಿಗೆ ಸೆಳೆಯಲು ಅಮಿತ್ ಶಾ ಪದೇ ಪದೇ ಯತ್ನಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಮೈತ್ರಿಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪೂರಕವಾಗಿ, ಅಮಿತ್‌ ಶಾ ತಮ್ಮ ಭಾಷಣಗಳಲ್ಲಿ, ಜಾಟ್ ನಾಯಕ (ಜಯಂತ್‌ ಚೌಧರಿ) “ತಪ್ಪಾದ ಮನೆ”ಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪದೇ ಪದೇ ಹೇಳಿದ್ದಾರೆ.
  9. “2014, 2017 ಮತ್ತು 2019 ರಲ್ಲಿ ಯುಪಿ ಜನರು ನಮ್ಮನ್ನು ಒಪ್ಪಿಕೊಂಡಿದ್ದಾರೆ. ಅವರು ನಮ್ಮ ಕೆಲಸವನ್ನು ನೋಡಿದ್ದಾರೆ. ಹೀಗಾಗಿ, 2022ರಲ್ಲಿಯೂ ನಮ್ಮನ್ನು ಸ್ವೀಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಬುಧವಾರ ಹೇಳಿದ್ದಾರೆ.
  10. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಗೋವಾ, ಮಣಿಪುರ, ಪಂಜಾಬ್ ಮತ್ತು ಉತ್ತರಾಖಂಡ್‌ ಹಾಗೂ ಉತ್ತರ ಪ್ರದೇಶ ಸೇರಿದಂತೆ ಒಟ್ಟು ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳೂ ಕೂಡ ಅದೇ ದಿನ ಪ್ರಕಟವಾಗುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ ವಿಚಿತ್ರ ಮುನ್ಸೂಚನೆ: ಭಾಗ 2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...