Homeಕರ್ನಾಟಕಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಆರಂಭವಾಗಿ ದೇಶಾದ್ಯಂತ ಹಬ್ಬುತ್ತಿರುವ ಹಿಜಾಬ್ ವಿವಾದದ ಬಗ್ಗೆ ಬಾಲಿವುಡ್ ನಟಿ ಸೋನಮ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಇನ್‌ಸ್ಟ್ರಾಗ್ರಾಮ್‌ನಲ್ಲಿ (Instagram) ಸ್ಟೋರೀಸ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಅವರು, ಎರಡು ಚಿತ್ರಗಳನ್ನು ಕೊಲಾಜ್ ಮಾಡಿರುವ ಫೋಟೋವನ್ನು ಹಂಚಿಕೊಂಡು ಟರ್ಬನ್ ಒಂದು ಆಯ್ಕೆಯಾಗಿಬಹುದಾದರೆ, ಹಿಜಾಬ್ ಏಕೆ ಆಗಬಾರದು? ಎಂದು ಪ್ರಶ್ನಿಸಿದ್ದಾರೆ.

ಹಿಜಾಬ್ ವಿರೋಧಿಸುತ್ತಿರುವುದನ್ನು ಖಂಡಿಸಿರುವ ನಟಿ ಸೋನಮ್ ಕಪೂರ್ ಹಂಚಿಕೊಂಡಿರುವ ಚಿತ್ರದ ಎಡಭಾಗದಲ್ಲಿ ಟರ್ಬನ್ ಧರಿಸಿರುವ ವ್ಯಕ್ತಿಯ ಚಿತ್ರವಿದ್ದು, ಅದರ ಮೇಲೆ “ಇದು ಆಯ್ಕೆಯಾಗಬಹುದು” ಎಂಬ ಸಾಲಿದೆ. ಅದರ ಪಕ್ಕದಲ್ಲಿ ಹಿಜಾಬ್ ಧರಿಸಿರುವ ಮಹಿಳೆಯ ಫೋಟೋವಿದ್ದು, ಅವರ ಮೇಲೆ “ಆದರೆ ಇದು ಸಾಧ್ಯವಿಲ್ಲವೇ?” ಎಂಬ ಸಾಲಿದೆ.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ’ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಪುತ್ರಿ ಕವಿತಾ

ನಟಿ ರಮ್ಯಾ ಕೂಡ ಹಿಜಾಬ್- ಕೇಸರಿ ಶಾಲು ವಿವಾದದಕ್ಕೆ ಪ್ರತಿಕ್ರಿಯಿಸಿದ್ದರು. ವಿದ್ಯಾರ್ಥಿಗಳ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಅವರು ’ಭಾರತದ ಯುವಜನತೆ ಈ ರೀತಿ ಛಿದ್ರವಾಗಿರುವುದನ್ನು ನೋಡಲು ನನಗೆ ಬೇಸರವಾಗುತ್ತದೆ’ ಎಂದಿದ್ದರು.

ಕಳೆದ ಡಿಸೆಂಬರ್‌ನಲ್ಲಿ ಉಡುಪಿಯ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ನಿರ್ಬಮಧ ಹೇರಿದ ಬಳಿಕ ಇದು ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಬಳಿಕ ಕುಂದಾಒಉರದ ಕಾಲೇಜಿನಲ್ಲೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಮೇಲೆ ನಿರ್ಬಂಧ ಹೇರಲಾಯಿತು. ಅಲ್ಲಿಂದ ಕೇಸರಿ ಶಾಲು ವಿವಾದ ಆರಂಭವಾಗಿ ಉಳಿದ ಜಿಲ್ಲೆಗಳಿಗೂ ಹಬ್ಬಿ ಅಂತರರಾಷ್ಟ್ರೀಯ ಸುದ್ದಿಯಾಗಿದೆ.

ಘರ್ಷಣೆ ಹೆಚ್ಚಾಗುತ್ತಿದ್ದಂತೆ ಫೆಬ್ರವರಿ 5 ರಂದು ಕರ್ನಾಟಕ ಸರ್ಕಾರವು “ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ” ಉಡುಪುಗಳನ್ನು ನಿಷೇಧಿಸುವುದರೊಂದಿಗೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್‌ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...