Homeಕರ್ನಾಟಕಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

- Advertisement -
- Advertisement -

“ಕಳೆದ ಕೆಲವು ತಿಂಗಳಿನಿಂದ ರಾಜ್ಯದಲ್ಲಿ ದ್ವೇಷ ಪ್ರೇರಿತ ಅಪರಾಧಗಳು ಮತ್ತು ದೊಂಬಿ ಅಪರಾಧಗಳು ಭೀಕರ ರೀತಿಯಲ್ಲಿ ಹೆಚ್ಚುತ್ತಿದ್ದು, ಈ ದಾಳಿಗಳು ಹೆಚ್ಚಾಗಿ ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯಗಳ ವಿರುದ್ಧ ನಡೆಯುತ್ತಿದೆ. ಇದೀಗ ಶೈಕ್ಷಣಿಕ ಸಂಸ್ಥೆಗಳು ಹೊಸತಾಗಿ ಹಿಂಸೆಯ ಕೇಂದ್ರಗಳಾಗಿ ಮಾರ್ಪಾಡಾಗುತ್ತಿದೆ, ಇದ್ದಕ್ಕಿದಂತೆಯೇ ಮುಸಲ್ಮಾನ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯಾಗಿ ಪಾಲಿಸುತ್ತಿದ್ದ ಹಿಜಾಬ್‌‌ ಅನ್ನು ಹಿಂಸಾತ್ಮಕ ರೀತಿಯಲ್ಲಿ ವಿರೋಧಿಸಲಾಗುತ್ತಿದೆ. ಈ ಘಟನೆಗಳು ಕರ್ನಾಟಕದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನೇ ನಾಶ ಮಾಡುತ್ತಿವೆ” ಎಂದು ‘ಬಹುತ್ವ ಕರ್ನಾಟಕ’ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದೆ.

ಶುಕ್ರವಾರದಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಪ್ರಸ್ತುತ ಕರ್ನಾಟಕದಲ್ಲಿರುವ ಸಂಧಿಗ್ಧ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಬಹುತ್ವ ಕರ್ನಾಟಕದ ಮೈತ್ರೇಯಿ ಕೃಷ್ಣನ್‌ ಅವರು, “ಇಲ್ಲಿ ವ್ಯಕ್ತಿಗಳ ಸಮಾನತೆ, ಬಹುತ್ವ, ಭ್ರಾತೃತ್ವ ಮತ್ತು ಘನತೆಯ ಮೇಲೆ ದಾಳಿ ನಡೆಯುತ್ತಿದೆ. ಒಂದು ಕಡೆ ಮುಸ್ಲಿಂ ಮಹಿಳೆಯರ ಮೇಲೆ ಇಸ್ಲಾಮೋಫೋಬಿಕ್‌‌‌ ದಾಳಿ ನಡೆಯುತ್ತಿದ್ದರೆ ಮತ್ತೊಂದೆಡೆ ಗತಕಾಲದಿಂದಲೂ ಶಿಕ್ಷಣದ ನಿರಾಕರಣೆಗೆ ಒಳಪಟ್ಟಿದ್ದ ತಳಮಟ್ಟದಲ್ಲಿರುವ ಬಡ ವಿದ್ಯಾರ್ಥಿಗಳನ್ನು ತೀವ್ರಗಾಮಿಗಳನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಪಿಯುಸಿಎಲ್‌‌‌ನ ಅರವಿಂದ್‌ ನಾರಾಯಣ್‌‌ ಮಾತನಾಡಿ, “ಹಿಜಾಬ್‌ ಧರಿಸಿದ ಕಾರಣಕ್ಕಾಗಿ ವಿದ್ಯಾರ್ಥಿನಿಯರಿಗೆ ಕಾಲೇಜ್‌ ಒಳಗಡೆ ಪ್ರವೇಶ ನಿರಾಕರಿಸಿದ ಕ್ರಮವು ಕಾನೂನು ಬಾಹಿರ. ಸರ್ಕಾರವು ಅಸಂವಿಧಾನಿಕವಾದ ಆದೇಶವನ್ನು ಹೊರಡಿಸುವುದರ ಮೂಲಕ ಇತರೆ ಕಾಲೇಜುಗಳಲ್ಲೂ ಸಹ ಇಂತಹ ಕಾನೂನು ಬಾಹಿರ ಕ್ರಮ ಹೆಚ್ಚಾಗುವಂತೆ ಮಾಡಿದೆ. ಸರಕಾರ ತನ್ನ ಕರ್ತವ್ಯ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ರಕ್ಷಣೆಗೆ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ)ಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್‌ ಮಾತನಾಡಿ, “ಕೋವಿಡ್‌ ನಂತರದ ರಾಜ್ಯದಲ್ಲಿ ಆರ್ಥಿಕ ಸ್ಥಿತಿಯು ಹದಗೆಟ್ಟಿದ್ದು, ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿವೆ. ಸರ್ಕಾರವು ಈ ಸಮಸ್ಯೆಗಳನ್ನು ಬಗೆಹರಿಸುವ ಬದಲು ತಮ್ಮ ಕಾನೂನು ಬಾಹಿರ ಕ್ರಮಗಳ ಮೂಲಕ ಈ ಬಿಕ್ಕಟ್ಟಿಗೆ ಮತ್ತಷ್ಟು ಪ್ರಚೋದನೆ ನೀಡಿದೆ. ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ವಿರುದ್ಧ ಸರಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?

ನಾರಾಯಣ ಗುರುಗಳಿರುವ ಸ್ತಬ್ಧಚಿತ್ರ ತೆರವು ವಿಚಾರದಲ್ಲಿ ಬಿಲ್ಲವರಲ್ಲಿ ಮೂಡಿರುವ ಅಸಮಾಧಾನದಿಂದ ಮತ್ತು ಗಣರಾಜ್ಯೋತ್ಸವ ಸಮಾರಂಭದಲ್ಲಿ ಡಾ.ಬಿ.ಆರ್‌.ಅ೦ಬೇಡ್ಕರ್‌ ಅವರ ಭಾವಚಿತ್ರ ತೆಗೆದಿರುವ ಬಗ್ಗೆ ರಾಜ್ಯಾದ್ಯಂತ ದಲಿತರು ಅಸಮಾಧಾನ ವ್ಯಕ್ತಪಡಿಸುತ್ತಿರುವುದರಿಂದ ಬಿಜೆಪಿ ಸರ್ಕಾರ ವಿಚಲಿತವಾಗಿದೆ. ತಳಮಟ್ಟದಲ್ಲಿರುವ ಸಮುದಾಯಗಳು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಇವೆಲ್ಲಾ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ವಿವಾದವನ್ನು ಸರ್ಕಾರ ಸೃಷ್ಟಿ ಮಾಡಿದೆ ಎಂಬ ಆತಂಕ ರಾಜ್ಯದಾದ್ಯಂತ ಇದೆ” ಎಂದು ಹೇಳಿದರು.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: `ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಪುತ್ರಿ

ಜಮಾತೆ ಇಸ್ಲಾಮಿ ಹಿಂದ್ ಉಪಾಧ್ಯಕ್ಷ ಮೊಹಮ್ಮದ್‌ ಯೂಸುಫ್‌ ಕಣ್ಣಿ ಮಾತನಾಡಿ, “ಎಲ್ಲಾ ಜನತೆ, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಮುಸ್ಲಿಮರ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಹಿಂದುಳಿದಿದ್ದು, ಅದನ್ನು ಪರಿಹರಿಸಲು ಸರ್ಕಾರ ತೆಗೆದು ಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ‘ಸಾಚಾರ್‌ ಸಮಿತಿಯ ವರದಿ’ ವಿವರಿಸಿದೆ. ಇತ್ತೀಚಿಗೆ ನಡೆಯುತ್ತಿರುವ ವಿದ್ಯಾಮಾನಗಳು ಮುಸ್ಲಿಮರನ್ನು, ಅದರಲ್ಲೂ ವಿಶೇಷವಾಗಿ ಮಹಿಳೆಯರನ್ನು ಇನ್ನಷ್ಟು ದುರ್ಬಲ ಸ್ಥಾನಕ್ಕೆ ತಳ್ಳುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ರೈತ ಮುಖಂಡ ವೀರಸಂಗಯ್ಯ ಜಿ ಎಂ ಮಾತನಾಡಿ, “ತಮ್ಮ ಮಕ್ಕಳಿಗೆ ಬೇಡದಿದ್ದರೂ ಬಲವಂತವಾಗಿ ಕೇಸರಿ ಶಾಲು ತೊಡಿಸುತ್ತಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ದ್ವೇಷವನ್ನು ತುಂಬಿಸಲಾಗಿದ್ದು ಮತ್ತು ಇದರಿಂದಾಗಿ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯುಂಟಾಗಿದೆ ಎಂದು ಎಷ್ಟೋ ಜನ ಪೋಷಕರು ನಮ್ಮ ಬಳಿ ಬಂದು ನೋವನ್ನು ಹಂಚಿಕೊಂಡಿದ್ದಾರೆ. ಈ ಕೋಮುವಾದಿ ಅಜೆಂಡಾ ಕೂಡಲೇ ನಿಲ್ಲಬೇಕು” ಎಂದು ಒತ್ತಾಯಿಸಿದರು.

ಅಕ್ಕೈ ಪದ್ಮಶಾಲಿಯವರು ಮಾತನಾಡಿ, “ಮಹಿಳೆಯರು ತಮಗೆ ಬೇಕಾದುದನ್ನು ಧರಿಸುವ ಹಕ್ಕನ್ನು ಹೊಂದಿದ್ದಾರೆ. ಸರ್ಕಾರ ಅಥವಾ ಯಾವುದೇ ವ್ಯಕ್ತಿ ಅದನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಮಹಿಳೆಯರು ಯಾವ ರೀತಿಯ ಬಟ್ಟೆಯನ್ನು ಧರಿಸಬೇಕೆಂದು ನಿರ್ಧರಿಸಲು ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ. ಈಗ ಶಿಕ್ಷಣವನ್ನು ನಿರಾಕರಿಸಲು ಇದನ್ನು ಬಳಸಲಾಗುತ್ತಿದೆ. ಇದು ಸಂಪೂರ್ಣವಾಗಿ ಅಸಾಂವಿಧಾನಿಕ ಮತ್ತು ಮಹಿಳೆಯರ ಘನತೆ ಮತ್ತು ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಹಿಜಾಬ್ ವಿವಾದ ವಿಶೇಷ ವರದಿ: ಬಹುತ್ವ ಸಂಸ್ಕೃತಿಯ ಭಾರತದಲ್ಲಿ ಮತೀಯ ರಾಜಕಾರಣ

ಬಹುತ್ವ ಕರ್ನಾಟಕದ ಹಕ್ಕೊತ್ತಾಯಗಳು

  1. ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಯೊಳಗಿನ ಶಾಸನಬದ್ಧ ಹಕ್ಕುಗಳನ್ನು ತಾರತಮ್ಯವಿಲ್ಲದೆ ಸಾಂವಿಧಾನಿಕವಾಗಿ ಪುನಃಸ್ಥಾಪಿಸಿ, ಇತ್ತೀಚಿನ ದ್ವೇಷಾತ್ಮಕ ಕೃತ್ಯಗಳಿಗೆ ಒಳಗಾಗಿರುವ ಮುಸಲ್ಮಾನ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆಯನ್ನು ನೀಡಿ ಅವರ ಶೈಕ್ಷಣಿಕ ಹಕ್ಕನ್ನು ಭದ್ರಪಡಿಸಬೇಕು.
  2. ಸರಕಾರದ ತಾರೀಕು 5 ಫಬ್ರವರಿ 2022 ರ ಸುತ್ತೋಲೆ ಕ್ರಮಾಂಕ No. 14 SHH 2022 Bengaluru ಅನ್ನು ಹಿಂಪಡೆಯಬೇಕು ಹಾಗೂ ಮುಸಲ್ಮಾನ ವಿದ್ಯಾರ್ಥಿನಿಯರ ಶೈಕ್ಷಣಿಕ ಹಕ್ಕನ್ನು ಕಾಪಾಡಬೇಕು.
  3. ದಲಿತ, ಬಹುಜನ, ಆದಿವಾಸಿ ಯುವಕರ ಮನಸ್ಸಿನಲ್ಲಿ ದ್ವೇಷ ತುಂಬಿ ಅವರ ಭವಿಷ್ಯ ಹಾಳು ಮಾಡುತ್ತಿರುವವರ ವಿರು‌ದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ತನಿಖೆ ನಡಸಬೇಕು.
  4. ತಕ್ಷಣ ಶಾಲಾ ಕಾಲೇಜುಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋಮುವಾದಿ ದ್ವೇಷ ಹರಡುವುದನ್ನು ನಿಲ್ಲಿಸಿ, ಭಾರತ ಸರಕಾರದ 2008ರ ಕೋಮು ಸೌಹಾರ್ದತೆಗೆ ಮಾರ್ಗಸೂಚಿಗಳನ್ನು ಕ್ರಿಯಾಶೀಲವಾಗಿ ಅನುಸರಿಸಬೇಕು.
  5. ಕಾನೂನನ್ನು ಉಲ್ಲಂಘಿಸಿ ದ್ವೇಷ ಹರಡಿದ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳ ವಿರುದ್ಧ ತಕ್ಷಣ IPC 1980ರ ಕಲಂ 153A, 153B, 295A, 298 ಮತ್ತು 505(2)ಗಳ ಅಡಿಯಲ್ಲಿ FIRಗಳನ್ನು ದಾಖಲಿಸಿ, ಪೋಲಿಸ್‌ ಆಧಿಕಾರಿಗಳಿಗೆ ಕಾನೂನು ಪ್ರಕಾರ ಬಂಧಿಸಬೇಕೆಂಬ ಆದೇಶಗಳನ್ನು ಹೊರಡಿಸಬೇಕು.
  6. ರಾಜ್ಯದಲ್ಲಿ ಕೋಮುವಾದಿ ಕಲಹಗಳನ್ನು ಸೃಷ್ಟಿಸಿ ಪೋಷಿಸುತ್ತಿರುವ ಕೋಮುವಾದಿ ವ್ಯಕ್ತಿಗಳನ್ನು ಗುರುತಿಸಿ ತಕ್ಷಣ IPC 1980ರ ಕಲಂ 153A, 153B, 295A, 298 ಮತ್ತು 505(2)ಗಳ ಅಡಿಯಲ್ಲಿ FIRಗಳನ್ನು ದಾಖಲಿಸಿ, ಕಾನೂನು ಪ್ರಕಾರ ಬಂಧಿಸಬೇಕು.
  7. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಇತರ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...