Homeಮುಖಪುಟಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಐದು ನೂರು ಕೋಟಿ ರೂ. ಮೌಲ್ಯದ ಗಾಂಜಾವನ್ನು ಆಂಧ್ರ ಪ್ರದೇಶ ಸರ್ಕಾರ ಸುಟ್ಟು ಹಾಕುವ ಮೂಲಕ ಗಮನ ಸೆಳೆದಿದೆ.

- Advertisement -
- Advertisement -

ಆಂಧ್ರಪ್ರದೇಶದ ಕೋಡೂರು ಗ್ರಾಮದ ತೆರೆದ ಮೈದಾನದಲ್ಲಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಟ್ಟು ಹಾಕುವ ಮೂಲಕ ಆಂಧ್ರ ಪ್ರದೇಶ ಸರ್ಕಾರ ಗಮನ ಸೆಳೆದಿದೆ.

ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು ‘ಆಪರೇಷನ್ ಪರಿವರ್ತನಾ’ದ ಭಾಗವಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ. ನಾಶಪಡಿಸಿದ ನಿಷೇಧಿತ ವಸ್ತುವಿನ ಮೌಲ್ಯ ಸುಮಾರು 500 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಡ್ರಗ್ಸ್ ನಾಶಪಡಿಸಿರುವುದು ದೇಶದಲ್ಲೇ ಇದೇ ಮೊದಲು ಎಂದು ಪೊಲೀಸರು ಹೇಳಿದ್ದಾರೆ.

ವಿಶಾಖಪಟ್ಟಣದ ಅನಕಪಲ್ಲಿ ಮಂಡಲದಲ್ಲಿರುವ ಕೋಡೂರಿನ ಮೈದಾನದಲ್ಲಿ ಬೃಹತ್  ಮಟ್ಟದ ರಾಶಿಗಳನ್ನು ನಿರ್ಮಿಸಿ ಬೆಂಕಿ ಹಂಚಲಾಯಿತು. ಈ ಘಟನೆಯನ್ನು ಹಲವರು ಕುತೂಹಲ ಹಾಗೂ ಹಲವು ನಿರೀಕ್ಷೆಯಿಂದ ವೀಕ್ಷಿಸಿದರು.

ಸ್ಥಳದಲ್ಲಿದ್ದ ಪೋಲಿಸರು, ಪತ್ರಕರ್ತರು ಹಾಗೂ ಇತರರಿಗೆ ಏನಾದರೂ ಸಮಸ್ಯೆಯಾಗಬಹುದೇ ಎಂದು ಕುತೂಹಲಭರಿತರಾಗಿದ್ದರು. ಬೃಹತ್ ಹೊಗೆಯು ಅನೇಕರಿಗೆ ತಲೆನೋವನ್ನು ತಂದಿತು. ಆದರೆ ಅಂತಹ ಪರಿಣಾಮಗಳೇನೂ ಆಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಗಾಂಜಾ ಸುಟ್ಟಿದ್ದರ ಪರಿಣಾಮಗಳು ನಮಗೆ ಕಂಡುಬರಲಿಲ್ಲ. ಆದರೆ ಕೆಲವರಿಗೆ ಸ್ವಲ್ಪ ತಲೆ ನೋವು ಕಾಣಿಸಿಕೊಂಡಿದ್ದು, ಇದಕ್ಕೆ ಉರಿಯುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆ ಕಾರಣ ಎನ್ನಬಹುದು ಎಂದು ಘಟನೆಯನ್ನು ವರದಿ ಮಾಡಿದ ವರದಿಗಾರರು ತಿಳಿಸಿದ್ದಾರೆ. ಗಾಂಜಾ ಹೊಗೆಯ ಪರಿಣಾಮವನ್ನು ಕಡಿಮೆ ಮಾಡಲು ಸಕ್ಕರೆ ಮತ್ತು ಕರ್ಪೂರವನ್ನು ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಾಸವಿಲ್ಲದ ಕಾರಣ ಪೊಲೀಸರು ಕೋಡೂರ್ ಅನ್ನು ಆಯ್ಕೆ ಮಾಡಿದರು. ಸುಟ್ಟಾಗ ಬರುವ ಹೊಗೆಯಿಂದಾಗಿ ತಲೆನೋವು ಅಥವಾ ಮಾದಕತೆ ಉಂಟಾಗಬಹುದು ಎಂಬ ಕಾರಣದಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿ ಮನೆಯೊಳಗೆಯೇ ಇರುವಂತೆ ಸೂಚಿಸಲಾಗಿತ್ತು.

ಆಪರೇಷನ್ ಪರಿವರ್ತನಾ ಕಾರ್ಯಾಚರಣೆಯನ್ನು ನವೆಂಬರ್ 1, 2021ರಂದು ಪ್ರಾರಂಭಿಸಲಾಯಿತು. ಈ ಕಾರ್ಯಾಚರಣೆಯ ಭಾಗವಾಗಿ ಇದುವರೆಗೆ, 47,986.934 ಕೆಜಿ ಗಾಂಜಾ ಮತ್ತು 46.41 ಲೀಟರ್ ಹಶಿಶ್ ಎಣ್ಣೆಯನ್ನು 314 ವಾಹನಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. 577 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1500 ಜನರನ್ನು ಬಂಧಿಸಲಾಗಿದೆ. 1985ರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಗಾಂಜಾವನ್ನು ನಿಷೇಧಿಸಲಾಗಿದೆ. ಈ ಕಾಯಿದೆಯು ಗಾಂಜಾ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸುತ್ತದೆ. 406 ತಂಡಗಳು ಆಪರೇಷನ್ ಪರಿವರ್ತನಾ ಭಾಗವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

PC: News Minute

ಪೊಲೀಸರ ಪ್ರಕಾರ, ಒಡಿಶಾದ ಗಡಿಭಾಗದ ಜಿಲ್ಲೆಗಳಾದ ಶ್ರೀಕಾಕುಳಂ, ವಿಜಯನಗರ, ವಿಶಾಖಪಟ್ಟಣ ಮತ್ತು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂನ 11 ಮಂಡಲಗಳಲ್ಲಿ ನಿಷೇಧಿತ ಬೆಳೆ ಬೆಳೆಯುತ್ತಿರುವುದನ್ನು ಉಪಗ್ರಹ ಚಿತ್ರಗಳನ್ನು ಬಳಸಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಪರೇಷನ್‌ ಪರಿವರ್ತನೆಯ ಭಾಗವಾಗಿ ಅಧಿಕಾರಿಗಳು 7,552 ಎಕರೆ ಗಾಂಜಾವನ್ನು ನಾಶಪಡಿಸಿದ್ದಾರೆ. ಇದರಲ್ಲಿ 400 ಎಕರೆ ಬೆಳೆಯನ್ನು ರೈತರೇ ನಾಶಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಾಗಿ ಬುಡಕಟ್ಟು ಸಮುದಾಯಗಳು ಗಾಂಜಾವನ್ನು ಬೆಳೆಸುತ್ತಿರುವುದರಿಂದ, ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕಾರ್ಯಕ್ರಮದ ಆರಂಭದಿಂದಲೂ, 1,963 ಜಾಗೃತಿ ಅಭಿಯಾನಗಳನ್ನು ನಡೆಸಲಾಗಿದ್ದು, ಇದರಲ್ಲಿ 70,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಗಾಂಜಾ ಹಾವಳಿ ತಡೆಯಲು ಪೊಲೀಸರು 120 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಂತಹ ನೆರೆಯ ರಾಜ್ಯಗಳು ಗಾಂಜಾವನ್ನು ನಿಯಂತ್ರಿಸದಿದ್ದಕ್ಕಾಗಿ ಅವರತ್ತ ಬೆರಳು ತೋರಿಸಿದ ನಂತರ ಆಂಧ್ರಪ್ರದೇಶವು ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ತೆಲಂಗಾಣ ಪೊಲೀಸರು ಡ್ರಗ್ಸ್ ವಿರುದ್ಧದ ಅಭಿಯಾನದ ಭಾಗವಾಗಿ ತಮ್ಮ ವ್ಯಾಪ್ತಿಯಲ್ಲಿ ಕೆಲವರನ್ನು ಬಂಧಿಸಿ ಆಂಧ್ರಪ್ರದೇಶ ಪೊಲೀಸರಿಗೆ ಮುಜುಗರ ಉಂಟು ಮಾಡಿದ್ದರು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ರಾಜ್ಯವು ಡ್ರಗ್ ಹಬ್ ಆಗಿ ಬದಲಾಗುತ್ತಿದೆ ಎಂದು ರಾಜ್ಯದ ವಿರೋಧ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದರ ಭಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ.


ಇದನ್ನೂ ಓದಿರಿ: ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...