Homeಕರ್ನಾಟಕಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ: ಸುಪ್ರೀಂ ಆದೇಶಕ್ಕೆ ಆತಂಕಪಡಬೇಕಿಲ್ಲ- ಸಿದ್ದರಾಮಯ್ಯ

ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ: ಸುಪ್ರೀಂ ಆದೇಶಕ್ಕೆ ಆತಂಕಪಡಬೇಕಿಲ್ಲ- ಸಿದ್ದರಾಮಯ್ಯ

"ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ಆತಂಕ ಪಡಬೇಕಾಗಿಲ್ಲ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿದೆ"

- Advertisement -
- Advertisement -

ಸುಪ್ರೀಮ್ ಕೋರ್ಟ್‌ನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಮ್ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ಸಲಹೆ ನೀಡಿದ್ದಾರೆ.

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ. ದೇಶದಲ್ಲಿಯೇ ಮೊದಲಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಳ್ಳಬಹುದೆಂಬ ಭರವಸೆ ನನಗಿದೆ ಎಂದಿದ್ದಾರೆ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಮ್ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನ ವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದ್ದೆ. ಇದರಲ್ಲಿ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು ಎಂದಿದ್ದಾರೆ.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು.
ಸುಪ್ರೀಮ್ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ –ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಮ್ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ ಎಂದು ಸ್ಮರಿಸಿದ್ದಾರೆ.

ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಮ್ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ನಾಳೆಯಿಂದ ಪ್ರೌಢಶಾಲೆಗಳು ಆರಂಭ: ಶಾಂತಿ ಮತ್ತು ಸಹಜತೆ ನೆಲೆಸಲಿದೆ ಎಂದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...