Homeಕರ್ನಾಟಕಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

ಆಂಧ್ರಪ್ರದೇಶ ಮತ್ತು ಕರ್ನಾಟಕದ ನಡುವೆ ಮುನ್ನೆಲೆಗೆ ಬಂದ ಹನುಮಾನ್ ಜನ್ಮಭೂಮಿ ವಿವಾದ

- Advertisement -
- Advertisement -

ನವೆಂಬರ್ 2019 ರಲ್ಲಿ ರಾಮ ಜನ್ಮಭೂಮಿ ವಿವಾದವನ್ನು ಸುಪ್ರೀಂ ಕೋರ್ಟ್ ಇತ್ಯರ್ಥಗೊಳಿಸಿದ ನಂತರ, ಹನುಮಾನ್ ಜನ್ಮಭೂಮಿಯ ಬಗ್ಗೆ ಹೊಸ ವಿವಾದವೊಂದು ಭುಗಿಲೆದ್ದಿದೆ. ಎರಡು ರಾಜ್ಯಗಳ ನಡುವಿನ ಈ ವಿವಾದ ಮತ್ತಷ್ಟು ದೊಡ್ಡದಾಗುವ ಸಾಧ್ಯತೆಯಿದೆ.

ಆಂಧ್ರಪ್ರದೇಶ ಮತ್ತು ಕರ್ನಾಟಕದ ಎರಡು ಹಿಂದೂ ಟ್ರಸ್ಟ್‌ಗಳ ನಡುವೆ ಈ ವಿವಾದ ಉಂಟಾಗಿದ್ದು, ತಮ್ಮ ಊರಿನಲ್ಲಿರುವ ಬೇರೆ ಬೇರೆ ಸ್ಥಳಗಳನ್ನು ಹನುಮಾನ್ ಜನ್ಮಸ್ಥಳವೆಂದು ವಾದಿಸುತ್ತಿವೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ತಿರುಮಲ ಬೆಟ್ಟದಲ್ಲಿನ ದೇವಾಲಯ ಮತ್ತು ಯಾತ್ರಾಸ್ಥಳವಾದ ಅಂಜನಾದ್ರಿಯನ್ನು ಭವ್ಯವಾಗಿ ಅಭಿವೃದ್ಧಿಪಡಿಸಲು ಬುಧವಾರದಂದು (ಫೆ.16) ಸಮಾರಂಭ ಒಂದನ್ನು ಆಯೋಜಿಸಿದೆ. ಕಳೆದ ವರ್ಷ ಟಿಟಿಡು ಏಪ್ರಿಲ್‌ನಲ್ಲಿ ರಾಮನವಮಿಯಂದು ತಿರುಮಲ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳ ಎಂದು ಘೋಷಿಸಿದೆ.

ಆದರೆ ರಾಜ್ಯದ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದನ್ನು ಒಪ್ಪುವುದಿಲ್ಲ. ಈ ಹಿನ್ನೆಲೆಯಲ್ಲಿ ಟ್ರಸ್ಟ್‌ನ ಸಂಸ್ಥಾಪಕ ಸ್ವಾಮಿ ಗೋವಿಂದಾನಂದ ಸರಸ್ವತಿ ಇಂದು (ಫೆ.14) ತಿರುಮಲಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ಜೋಡಿಗಳು ಪಾರ್ಕ್‌‌ನಲ್ಲಿ ಸುತ್ತಾಡುವುದು ಕಂಡರೆ ಅವರ ಕಾಲುಗಳನ್ನು ಮುರಿಯುತ್ತೇವೆ: ಶಿವಸೇನೆ ಎಚ್ಚರಿಕೆ

ವಾಲ್ಮೀಕಿ ರಾಮಾಯಣವು ಹನುಮಂತನು ಕಿಷ್ಕಿಂಧೆಯ ಅಂಜನಹಳ್ಳಿಯಲ್ಲಿ ಜನಿಸಿದನೆಂದು ಹೇಳುತ್ತದೆ, ಇದು ಹಂಪಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿದೆ ಎಂದು ನಂಬಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ವಿವಾದ ಬಗೆಹರಿಸಲು ಚರ್ಚೆ ನಡೆದರೂ ಮುಗಿಯುವ ಹಂತಕ್ಕೆ ಬರಲಿಲ್ಲ.

ಟಿಟಿಡಿ ಸಮಿತಿಯು (ಕಳೆದ ತಿಂಗಳು ನಿಧನರಾದ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಉಪಕುಲಪತಿ ವಿ ಮುರಳೀಧರ ಶರ್ಮಾ ಅವರ ನೇತೃತ್ವದ) ಪುರಾತನ ಗ್ರಂಥಗಳು ಮತ್ತು ತಾಮ್ರ-ಲೇಖನದಂತಹ ಪ್ರಾಚೀನ ಗ್ರಂಥಗಳು ಈಗ ತಿರುಮಲ ಎಂದು ಕರೆಯಲ್ಪಡುವ ಅಂಜನಾದ್ರಿಯನ್ನು ಹನುಮಂತನ ಜನ್ಮಸ್ಥಳವೆಂದು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ ಎಂದಿದೆ.

ಏಪ್ರಿಲ್‌ನಲ್ಲಿ ಟಿಟಿಡಿ ಅಂಜನಾದ್ರಿಯೇ ಹನುಮಾನ್ ಜನ್ಮಸ್ಥಳ ಎಂದು ಸಾರುವ ಕಿರುಪುಸ್ತಕವನ್ನು ಪ್ರಕಟಿಸಿತ್ತು. ಈ ಕಿರುಪುಸ್ತಕವು ಡಿಸೆಂಬರ್ 2020 ರಲ್ಲಿ ರಚಿತವಾದ ಎಂಟು ಸದಸ್ಯರ ಸಮಿತಿಯು ಸಲ್ಲಿಸಿದ ವರದಿಯನ್ನು ಆಧರಿಸಿದೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಹನುಮನ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಟಿಟಿಡಿಗೆ ಆರು ಪುಟಗಳ ಪತ್ರದೊಂದಿಗೆ ಪ್ರತಿವಾದ ಹೂಡಿ, ಚರ್ಚೆ ನಡೆಸಿತ್ತು.

ಹಲವಾರು ವೈದಿಕ ಮತ್ತು ಪುರಾಣದ ವಿದ್ವಾಂಸರು ಒಪ್ಪಿಕೊಂಡಿರುವ ಪೌರಾಣಿಕ, ಸಾಹಿತ್ಯಿಕ, ಪುರಾತತ್ವ ಮತ್ತು ಭೌಗೋಳಿಕ ಪುರಾವೆಗಳ ಮೇಲೆ ಟಿಟಿಡಿ ತನ್ನ ಹಕ್ಕನ್ನು ಆಧರಿಸಿದೆ ಮತ್ತು ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳುತ್ತದೆ.

ಟಿಟಿಡಿ ಬುಧವಾರ ನಡೆಸಲಿರುವ ಸಮಾರಂಭದಲ್ಲಿ ಶಾರದಾ ಪೀಠಾಧಿಪತಿ ಸ್ವರೂಪೇಂದ್ರ ಸರಸ್ವತಿ, ಚಿತ್ರಕೂಟದ ತುಳಸಿ ಪೀಠದ ರಾಮಭದ್ರಾಚಾರ್ಯ ಮಹಾರಾಜರು, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ್ ಗಿರಿ ಮತ್ತು ದೇಶದ ಇತರ ಭಾಗಗಳ ಸ್ವಾಮೀಜಿಗಳು, ಟಿಟಿಡಿ ಅಧ್ಯಕ್ಷರು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...