Homeಚಳವಳಿಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

ಜಾರ್ಖಂಡ್‌: ಅರಣ್ಯ ಉಳಿಸಲು ’ಜಂಗಲ್ ಬಚಾವೋ’ ತಂಡ ರಚಿಸಿ ಬಿದಿರು ಕೋಲು ಹಿಡಿದ ದಿಟ್ಟ ಮಹಿಳೆಯರು

- Advertisement -
- Advertisement -

ಜಂಗಲ್ ಬಚಾವೋ (ಕಾಡನ್ನು ಉಳಿಸಿ) ಎಂಬುದು ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ 100 ಮಹಿಳೆಯರ ಧ್ಯೇಯವಾಕ್ಯ. ಆಧುನೀಕರಣದ ಹೆಸರಿನಲ್ಲಿ ನಡೆಯುತ್ತಿರುವ ಕ್ಷಿಪ್ರ ಅರಣ್ಯನಾಶದಿಂದ ಆತಂಕಕ್ಕೊಳಗಾಗಿರುವ ಈ ಮಹಿಳೆಯರು ತಮ್ಮ ಪ್ರದೇಶದಲ್ಲಿ ಸುಮಾರು ಒಂಬತ್ತು ಎಕರೆ ಅರಣ್ಯ ಭೂಮಿಯನ್ನು ರಕ್ಷಿಸಲು ಹೋರಾಟಕ್ಕಿಳಿದಿದ್ದಾರೆ.

ಈ ಮಹಿಳೆಯರು ತಮ್ಮ ಸುತ್ತಲಿನ ಪ್ರದೇಶಗಳಲ್ಲಿ ಮರಗಳನ್ನು ಕಡಿಯದಂತೆ, ಕಾಡನ್ನು ಉಳಿಸುವಂತೆ ಜಾಗೃತಿ ಅಭಿಯಾನವನ್ನು ಸಹ ನಡೆಸುತ್ತಿದ್ದಾರೆ. ಇದರಿಂದ, ಹೆಚ್ಚಿನ ಜನರು ಅವರೊಂದಿಗೆ ಸೇರಿಕೊಳ್ಳುತ್ತಿದ್ದಾರೆ. ಇದನ್ನು ಜಂಗಲ್ ಬಚಾವೋ ಅಭಿಯಾನ ಎಂದು ಕರೆಯಲಾಗುತ್ತದೆ.

ಏಳು ಸ್ವಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಸೇರಿದ ಒಟ್ಟು 104 ಮಹಿಳೆಯರು ಈ ಅಭಿಯಾನದ ಭಾಗವಾಗಿದ್ದಾರೆ. ಇವರೆಲ್ಲರೂ ಆನಂದಪುರ ಬ್ಲಾಕ್‌ನ ಮಹಿಷಗೆಡ ಗ್ರಾಮದವರು. ಇವರು ತಮ್ಮ ಆಂದೋಲನವನ್ನು ಜಾರ್ಖಂಡ್ ಸ್ಟೇಟ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯ ಜೊತೆಗೆ ನಡೆಸುತ್ತಿದ್ದಾರೆ.

ಕಾಡು ಮತ್ತು ಪರಿಸರವನ್ನು ರಕ್ಷಿಸುವುದು ಜಂಗಲ್ ಬಚಾವೋ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಾಲ್ಕು ತಂಡಗಳಾಗಿ ಕಾರ್ಯನಿರ್ವಹಿಸುತ್ತಿರುವ ಈ ಮಹಿಳೆಯರು ಬೆಳಿಗ್ಗೆ 6 ರಿಂದ 9 ರವರೆಗೆ ಮತ್ತು ಸಂಜೆ 4 ರಿಂದ 6 ರವರೆಗೆ ಕಾಡಿನಲ್ಲಿ ಕಾವಲು ಕಾಯುತ್ತಾರೆ. ಬಿದಿರಿನ ಕೋಲುಗಳಿಂದ ಶಸ್ತ್ರಸಜ್ಜಿತವಾದ ಅವರು ಮರಗಳ ಎಣಿಕೆಯನ್ನು ಇಟ್ಟುಕೊಂಡು ಮರಗಳನ್ನು ಕಡಿಯುವುದರ ಮೇಲೆ ನಿಗಾ ಇಡುತ್ತಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ಮತ್ತೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಕಾಡಿನಲ್ಲಿ ಯಾರಾದರೂ ಮರಗಳನ್ನು ಕಡಿಯುವುದು ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವಾಗ ಸಿಕ್ಕಿಬಿದ್ದರೆ, ಮಹಿಳೆಯರು ಅವರಿಗೆ ದಂಡ ವಿಧಿಸುತ್ತಾರೆ. ಹೀಗಾಗಿ, ಅನಗತ್ಯವಾಗಿ ಮರಗಳನ್ನು ಕಡಿಯುವುದು ಕಡಿಮೆಯಾಗುತ್ತಿದ್ದು, ಅವರ ಕೆಲಸ ಫಲಿತಾಂಶವನ್ನು ನೀಡುತ್ತಿದೆ.

’ನಾವು ಕಾಡಿನ ರಕ್ಷಣೆಗಾಗಿ ನಮ್ಮನ್ನು ತೊಡಗಿಸಿಕೊಂಡಿದ್ದೇವೆ. ಗ್ರಾಮದ ಬಳಿ ಮರಗಳನ್ನು ಮನಬಂದಂತೆ ಕಡಿಯುತ್ತಿರುವುದನ್ನು ನಾವು ಗಮನಿಸಿದೆವು. ನಂತರ, ಮರಗಳನ್ನು ಉಳಿಸುವುದಕ್ಕಾಗಿ ಈ ನಿರ್ಧಾರ ತೆಗೆದುಕೊಂಡೆವು” ಎಂದು ಅಭಿಯಾನದ ನೇತೃತ್ವ ವಹಿಸಿರುವ ಸರೋಜ್ ಸೂರಿನ್ ಹೇಳುತ್ತಾರೆ.

“ಆಶ್ಚರ್ಯಕರವಾಗಿ, ಅಭಿಯಾನ ಆರಂಭವಾದ ಒಂದು ವರ್ಷದಲ್ಲಿ, ಮರಗಳನ್ನು ಕಡಿಯುವುದನ್ನು ಬಹುತೇಕ ನಿಲ್ಲಿಸಲಾಗಿದೆ. ಏಕೆಂದರೆ, ಮರಗಳನ್ನು ಕಡಿಯುವದನ್ನು ತಡೆಯಲು ನಾವು ಇರುತ್ತೇವೆ ಎಂದು ಎಲ್ಲರೂ ಅರಿತುಕೊಂಡಿದ್ದಾರೆ. ಸಾಮಾನ್ಯವಾಗಿ, ನಾವು ವಿವಿಧ ಪಾಳಿಗಳಲ್ಲಿ 25 ಗುಂಪುಗಳಲ್ಲಿ ಕಾರ್ಯ ನಿರ್ವಹಿಸುತ್ತೇವೆ” ಎಂದು ಹೇಳಿದ್ದಾರೆ.

“ಮರ ಕಡಿಯುವವರಿಗೆ 5 ಸಾವಿರ ದಂಡ ವಿಧಿಸುತ್ತೇವೆ. ಆಂತರಿಕ ಶಿಸ್ತು ಕಾಪಾಡುವುದಕ್ಕಾಗಿ, ಅರಣ್ಯವನ್ನು ಕಾಯಲು ತಮ್ಮ ಸರದಿಯನ್ನು ಬಿಟ್ಟು ಬಿಡುವ ಮಹಿಳೆಯರಿಗೆ 200 ರೂಪಾಯಿ ದಂಡವನ್ನೂ ಸಹ ವಿಧಿಸಲು ನಾವು ಒಮ್ಮತದಿಂದ ನಿರ್ಧರಿಸಿದ್ದೇವೆ. ದಂಡದ ಮೂಲಕ ಸಂಗ್ರಹಿಸಿದ ಹಣವನ್ನು ಮರಗಳನ್ನು ನೆಡಲು ಬಳಸಲಾಗುತ್ತದೆ” ಎಂದು ಅಭಿಯಾನದ ಸದಸ್ಯೆ ಸಬೀನಾ ಕಂದುಲ್ನಾ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...