Homeಮುಖಪುಟರಾಹುಲ್ ಗಾಂಧಿ V/s ಹಿಮಂತ್ ಬಿಸ್ವಾ: ಉಭಯ ಪಕ್ಷಗಳಿಂದ ನೂರಾರು ಪ್ರಕರಣ ದಾಖಲು

ರಾಹುಲ್ ಗಾಂಧಿ V/s ಹಿಮಂತ್ ಬಿಸ್ವಾ: ಉಭಯ ಪಕ್ಷಗಳಿಂದ ನೂರಾರು ಪ್ರಕರಣ ದಾಖಲು

- Advertisement -
- Advertisement -

ಕಳೆದ ವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ “ಸ್ಪಿರಿಟ್ ಆಫ್ ಇಂಡಿಯಾ” ಟ್ವೀಟ್ ಕುರಿತು ಅಸ್ಸಾಂ ಬಿಜೆಪಿ ಮತ್ತು ಅದರ ವಿವಿಧ ಸಂಘಟನೆಗಳು ಸೋಮವಾರ ಒಂದು ಸಾವಿರ ಪೊಲೀಸ್ ದೂರುಗಳನ್ನು ದಾಖಲಿಸಿವೆ.

ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ..?” ಎಂದು ಅಸಂವಿಧಾನಿಕವಾಗಿ ನಿಂದಿಸಿದ್ದರು. ಇದರ  ವಿರುದ್ಧ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಪ್ರತಿಭಟನೆಯನ್ನು ಆರಂಭಿಸಿತ್ತು.

ಜೊತೆಗೆ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ಮತ್ತು ಯುವ ಘಟಕಗಳು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ವಿವಿಧ ರಾಜ್ಯಗಳಲ್ಲಿ ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಿವೆ.

ರಾಹುಲ್ ಟ್ವೀಟ್‌ನಲ್ಲಿ ಯಾವುದೇ ಈಶಾನ್ಯ ರಾಜ್ಯಗಳನ್ನು ಉಲ್ಲೇಖಿಸದೆ, ದೇಶದ ಇತರ ಭಾಗಗಳಿಂದ ಪ್ರತ್ಯೇಕಿಸಿ ಅಸಾಮರಸ್ಯವನ್ನು ಹರಡುತ್ತಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

 

“ನಮ್ಮ ಒಕ್ಕೂಟದಲ್ಲಿ ಶಕ್ತಿ ಇದೆ. ನಮ್ಮ ಸಂಸ್ಕೃತಿಗಳ ಒಕ್ಕೂಟ. ನಮ್ಮ ವೈವಿಧ್ಯತೆಯ ಒಕ್ಕೂಟ. ನಮ್ಮ ಭಾಷೆಗಳ ಒಕ್ಕೂಟ. ನಮ್ಮ ಜನರ ಒಕ್ಕೂಟ. ನಮ್ಮ ರಾಜ್ಯಗಳ ಒಕ್ಕೂಟ. ಕಾಶ್ಮೀರದಿಂದ ಕೇರಳದವರೆಗೆ. ಗುಜರಾತ್‌ನಿಂದ ಪಶ್ಚಿಮ ಬಂಗಾಳಕ್ಕೆ. ಭಾರತವು ತನ್ನ ಎಲ್ಲಾ ಬಣ್ಣಗಳಲ್ಲಿ ಸುಂದರವಾಗಿದೆ. ಭಾರತದ ಚೈತನ್ಯವನ್ನು ಅವಮಾನಿಸಬೇಡಿ” ಎಂದು ಫೆಬ್ರವರಿ 10 ರಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ರಾಹುಲ್ ಗಾಂಧಿಯವರ ಟ್ವೀಟ್ ರಾಜ್ಯದ ವಿರುದ್ಧ ಸಮರ ಸಾರಿದೆ ಎಂದು ಬಿಜೆಪಿ ದೂರಿದೆ. ಅವರು ದೇಶದ ಪ್ರಾದೇಶಿಕ ಗಡಿಯಲ್ಲಿ ಚೀನಾದ ಅಜೆಂಡಾಕ್ಕೆ ಸೇರಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಭಾರತವನ್ನು ವಿವರಿಸುವಾಗ ಈಶಾನ್ಯ ಪ್ರದೇಶವನ್ನು ಹೊರಗಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

“ಕಾಶ್ಮೀರದಿಂದ ಕೇರಳದವರೆಗೆ ಮತ್ತು ಗುಜರಾತ್‌ನಿಂದ ಪಶ್ಚಿಮ ಬಂಗಾಳದವರೆಗೆ ಭಾರತ ವ್ಯಾಪಿಸಿದೆ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಆ ಮೂಲಕ ಭಾರತದಿಂದ ಈಶಾನ್ಯ ರಾಜ್ಯಗಳನ್ನು ತೆಗೆದಿದ್ದಾರೆ. ಇದು ಭಾರತದ ಭೌಗೋಳಿಕ ಸಮಗ್ರತೆ ಮತ್ತು ಭದ್ರತೆಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಅಸ್ಸಾಂ ಭಾರತೀಯ ಜನತಾ ಯುವ ಮೋರ್ಚಾದ (BJYM) ಮಾಧ್ಯಮ ಸಂಚಾಲಕ ಬಿಸ್ವಜಿತ್ ಖೌಂಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಸ್ಸಾಂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 1,000 ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಭಾರತಕ್ಕೆ ದುರದೃಷ್ಟಕರ ಮತ್ತು ರಾಹುಲ್ ಗಾಂಧಿಯೇ ಭಾರತದ ಸಮಸ್ಯೆ” ಎಂದು ಹೇಳಿದ್ದಾರೆ.

ಆದರೆ, ಈ ದೂರುಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿದೆಯೇ ಎಂಬುದು ತಕ್ಷಣವೇ ತಿಳಿದಿಲ್ಲ.

ಇನ್ನು, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ್ದ ಹಿಮಂತ್ ಬಿಸ್ವಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್ ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಕೇಳಿದ್ದರು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....