Homeಕರ್ನಾಟಕಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖಂಡಿಸಿದೆ.

- Advertisement -
- Advertisement -

ಕೇಸರಿ ಶಾಲು- ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಂ.ಎಲ್‌.ಪರಶುರಾಮ್ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು, ಇತ್ತೀಚಿನ ವಿದ್ಯಮಾನಗಳನ್ನು ಗಮನಿಸುತ್ತಿದೆ. ಮಕ್ಕಳ ನಡುವೆ ನಡೆಯುತ್ತಿರುವ ಸಂಘರ್ಷಗಳನ್ನು ಆಯೋಗವು ಗಮನಿಸುತ್ತಿದ್ದು, ಮಕ್ಕಳ ವಿಚಾರದಲ್ಲಿ ಇದು ಸರಿಯಲ್ಲ ಎಂದು ಆಯೋಗವು ತಿಳಿ-ಹೇಳಲು ಇಚ್ಛಿಸುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವು ಇದ್ದಾಗಿಯೂ ಕೂಡ, ಕೆಲವರು ಮಕ್ಕಳ ಹಿತಾಸಕ್ತಿಯನ್ನೇ ಮರೆತಿರುವುದು ವಿಷಾದನೀಯ. ಮಕ್ಕಳ ಇಚ್ಚೆಗೆ ವಿರುದ್ಧವಾಗಿ ಅವರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು, ಪ್ರಚೋದನಕಾರಿಯಾದ ಅಂತಹ ಮಾತುಗಳನ್ನು ಮಕ್ಕಳ ಮೆದುಳಿಗೆ ರವಾನಿಸಿ ಮಕ್ಕಳ ಬಾಯಿಂದ ಹೇಳಿಸುವುದು ಅಕ್ಷಮ್ಯ ಎಂದಿದ್ದಾರೆ.

ಈ ಮೇಲ್ಕಂಡ ವಿಚಾರಕ್ಕೆ ಪೂರಕವಾಗಿ ಬಾಲನ್ಯಾಯ ಕಾಯ್ದೆ ಸ್ಪಷ್ಟ ಉಲ್ಲಂಘನೆಯಾಗಿದೆ. ಬಾಲನ್ಯಾಯ ಕಾಯ್ದೆ 2015ರ ಅನ್ವಯ, ಮಕ್ಕಳ ಪಾಲನೆ ಮತ್ತು ಸಂರಕ್ಷಣೆಯನ್ನು ಶಾಲೆಗಳಲ್ಲಿ, ಸಂಸ್ಥೆಗಳಲ್ಲಿ ಮಾಡುವುದು ಆದ್ಯ ಕರ್ತವ್ಯವಾಗಿದೆ. ಬಾಲನ್ಯಾಯ ಕಾಯ್ದೆ ಕಾಲಂ 9ರಲ್ಲಿ ಹೇಳಿರುವಂತೆ ಮಗುವಿನ ಅತ್ಯುತ್ತಮ ಹಿತಾಶಕ್ತಿಯನ್ನು ಕಾಪಾಡುವುದರ ಜೊತೆಗೆ ಮಗುವಿನ ಮೂಲಭೂತ ಹಕ್ಕುಗಳು ಉಲ್ಲಂಘನೆ ಆಗಕೂಡದು. ಹಾಗೆಯೇ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 14(x)ರ ಪ್ರಕಾರ ಮಗುವಿನ ಸಂರಕ್ಷಣೆಯನ್ನು ಅನೀತಿಯ ಲಾಭಕ್ಕಾಗಿ ಮಗುವನ್ನು ಹಿಂಸೆಗೆ ಒಳಪಡಿಸಬಾರದು ಎಂದು ಎಚ್ಚರಿಸಿದ್ದಾರೆ.

ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 15ರ ಅನ್ವಯ ಶಿಶು – ಸ್ನೇಹ ( child friendly ) ರೀತಿಯಲ್ಲಿ ಶಾಲೆಗಳು ಇರಬೇಕಾಗಿದೆ. ಅಭ್ಯಾಸ, ನಡತೆ, ನಡವಳಿಕೆ, ಮನಪ್ರವೃತ್ತಿ, ಹೊಂದಿಕೊಳ್ಳುವ ಪರಿಸರ ವ್ಯವಸ್ಥೆಯನ್ನು ಮಗುವಿಗೆ ನೀಡುವ ರೀತಿಯಲ್ಲಿ ವ್ಯವಸ್ಥೆಗಳು ಕಾರ್ಯನಿರ್ವಹಿಸಬೇಕಾಗಿದೆ. ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 76 (1) ಮಗುವಿಗೆ ಕಿರುಕುಳ ಅಥವಾ ಶೋಷಣೆ ಉಂಟು ಮಾಡಬಾರದೆಂದು ತಿಳಿಸುತ್ತದೆ. ಮಕ್ಕಳು ಶಾಲೆಗೆ ಹೋಗುವುದಕ್ಕೆ ಭಯದ ವಾತಾವರಣ ನಿರ್ಮಾಣವಾಗಿರುವುದು ಭಾರತದ ಸಂಸ್ಕೃತಿಗೆ ಶೋಭೆ ತರುವಂತದ್ದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತೊಡುವ ಬಟ್ಟೆಗಳಿಗಿಂತ, ಉಣ್ಣುವ ತಟ್ಟೆಗಳು ಬರಿದಾಗಿ, ಹಸಿದ ಹೊಟ್ಟೆಯಿಂದ ಬರುವ ಮಕ್ಕಳ ಯೋಗ-ಕ್ಷೇಮವನ್ನು ನಾಗರಿಕ ಪ್ರಜ್ಞೆಯೊಡನೆ ಸರ್ವರು ತತಕ್ಷಣ ನೋಡಬೇಕಾಗಿದೆ. ಪಳಪಳ ಒಳೆಯುವ ಬೂಟುಗಳು, ಇಸ್ತ್ರಿ ತೀಡಿದ ಬಟ್ಟೆಗಳು, ವಾಹನದಲ್ಲಿ ಶಾಲೆಗೆ ಬಂದು ಹಿಂತಿರುಗುವ ವಿದ್ಯಾರ್ಥಿಗಳು, ಪ್ರತಿಯೊಂದು ಶಾಲೆಯಲ್ಲೂ ಭಿನ್ನ- ಭಿನ್ನ ವಸ್ತ್ರಸಂಹಿತೆ ಇರುವಾಗ, ಮಕ್ಕಳು ತಮಗಿಷ್ಟವಾದ್ದದನ್ನು ತೋಡುತ್ತಿರುವಾಗ ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಿಯೂ ವಿನಾಕಾರಣ, ಇದುವರೆಗೂ ಇಲ್ಲದ ಭಿನ್ನ ಕಾರಣಗಳನ್ನು ಮಕ್ಕಳ ವಿಷಯದಲ್ಲಿ ನೋಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೊಹಮ್ಮದ್ ಪೈಗಂಬರ್, ಕ್ರೈಸ್ತ, ಕೃಷ್ಣ, ರಾಮನ ವಿಚಾರಗಳು ಪಠ್ಯದಲ್ಲಿ ತತ್ವಗಳು ಆಗಿರುವಾಗ, ವಿವಿಧತೆಯಲ್ಲಿ ಏಕತೆಯಿಂದ ನಾವು ಸಮಬಾಳ್ವೆಯ ಸಮಾನತೆಯಿಂದ ಬಾಳಬೇಕಾಗಿದೆ. ಮಕ್ಕಳ ಮೇಲೆ ನಡೆಯುವ ಶೋಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ , ಮಕ್ಕಳ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಾಗಲಿ, ಮಕ್ಕಳಿಗೆ ಸಂಬಂಧಿಸಿದ ವಿಚಾರಕ್ಕೆ ಪೂರಕವಾದ ವಿಷಯಗಳು ಇದ್ದರೆ ಮಕ್ಕಳ ಸಹಾಯವಾಣಿ-1098 ಕರೆಮಾಡಿ ತಿಳಿಸುವುದು, ಆಯಾ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ತಿಳಿಸುವುದು, ಜಿಲ್ಲೆಯ ವಿಶೇಷ ಪೊಲೀಸ್ ಘಟಕಕ್ಕೆ ಮಾಹಿತಿ ರವಾನಿಸಬೇಕು ಎಂದು ಈ ಮೂಲಕ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯನಾಗಿ ತಿಳಿಸುತ್ತೇನೆ ಎಂದು ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಈ ಪ್ರತಿಯನ್ನು ಆಯೋಗದ ಅಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಲಗತ್ತಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...