ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಹಿಜಾಬ್ ನಿಷೇಧದ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಬುರ್ಖಾ ಧರಿಸಿ ಮುಸ್ಲಿಂ ಮಹಿಳೆಯರಿಗೆ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕದಲ್ಲಿ ಆರಂಭವಾದ ಹಿಜಾಬ್ ನಿಷೇಧ ವಿಚಾರವು ಹಿಜಾಬ್-ಕೇಸರಿ ಶಾಲು ಸಂಘರ್ಷವಾಗಿ ಬದಲಾಗಿದೆ. ಈ ವಿಚಾರ ಹೈಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲೇ ದೇಶಾದ್ಯಂತ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ರೀತಿ ಘಾಜಿಯಾಬಾದ್‌ನಲ್ಲೂ ಪ್ರತಿಭಟನೆ ನಡೆಯುತ್ತಿತ್ತು ಎನ್ನಲಾಗಿದೆ.
ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡು, ಪೊಲೀಸರ ಕ್ರಮವನ್ನು ಟೀಕಿಸಿದ ನಂತರ, ವೀಡಿಯೊ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ ಕಳೆದ ಭಾನುವಾರ ನಡೆದ ಘಟನೆಯ ಕುರಿತು ಪ್ರತಿಭಟನಾಕಾರರ ವಿರುದ್ಧವೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ: ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ
Everyone has a right to protest. Just because a group of burkha wearing Muslims women were walking together (in #Ghaziabad) doesn't give @Uppolice the right to beat them":
Cc @hrw @USCIRF @amnesty @KenRoth @UNWomenWatch
( 13 Feb 2022) pic.twitter.com/oDFPkatblp— Facts check (@Facts_chek) February 16, 2022
“ಘಾಜಿಯಾಬಾದ್‌ನ ಸಾನಿ ಬಜಾರ್ ರಸ್ತೆಯಲ್ಲಿ ಅನುಮತಿ ಪಡೆಯದೆ ಸುಮಾರು 15 ಮುಸ್ಲಿಂ ಮಹಿಳೆಯರು ಸರ್ಕಾರಿ ವಿರೋಧಿ ಪೋಸ್ಟರ್‌ಗಳೊಂದಿಗೆ ಜಮಾಯಿಸಿರುವುದು ತಮಗೆ ತಿಳಿದು ಬಂದಿತ್ತು. ಪೊಲೀಸ್ ತಂಡವು ಅಲ್ಲಿಗೆ ತಲುಪಿದಾಗ ಮಹಿಳೆಯರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು” ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ.
’ಮನೆಗೆ ಮರಳಲು ಮನವೊಲಿಸಲು ಪ್ರಯತ್ನಿಸಿದ ಮಹಿಳಾ ಕಾನ್‌ಸ್ಟೆಬಲ್‌ಗಳ ಮೇಲೆ ಪ್ರತಿಭಟನಾಕಾರರು ಹಲ್ಲೆ ಮಾಡಿದ್ದಾರೆ. ಪ್ರತಿಭಟನಾಕಾರರೊಂದಿಗಿದ್ದ ಕೆಲವು ಪುರುಷರು ಸಹ ಕಾನ್‌ಸ್ಟೆಬಲ್‌ಗಳನ್ನು ನಿಂದಿಸಲು ಪ್ರಾರಂಭಿಸಿದರು. ಆರೋಪಿಗಳಲ್ಲಿ ಒಬ್ಬನನ್ನು ರಾಯೀಸ್ ಎಂದು ಗುರುತಿಸಲಾಗಿದೆ’ ಎಂದು ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹೊಡೆಯುತ್ತಿರುವುದನ್ನು ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರನ್ನು ಲಾಠಿಯಿಂದ ಹೊಡೆಯುವುದನ್ನು, ಮಹಿಳೆಯರು ಹಲ್ಲೆಯನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.
ಇದನ್ನೂ ಓದಿ: ಹಿಜಾಬ್: ತರಗತಿಗಳು ಸಮಾಜದ ವೈವಿಧ್ಯತೆಯ ಪ್ರತಿಬಿಂಬವಾಗಬೇಕು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್


