ಬಿಹಾರದ ಗಯಾ ಜಿಲ್ಲೆಯಲ್ಲಿ ಮರಳು ಗಣಿಗಳ ಹರಾಜಿನ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಸರ್ಕಾರಿ ಅಧಿಕಾರಿಗಳಿಗೆ ಸಹಾಯ ಮಾಡುವ ಪೊಲೀಸ್ ಅಧಿಕಾರಿಗಳೊಂದಿಗೆ ಘರ್ಷಣೆ ನಡೆದಿದೆ. ಈ ಹಿನ್ನೆಲೆ ಮಹಿಳೆಯರು ಸೇರಿದಂತೆ ಹಲವರು ಗ್ರಾಮಸ್ಥರ ಕೈಗಳನ್ನು ಬಟ್ಟೆಯಿಂದಲೇ ಕಟ್ಟಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಗ್ರಾಮಸ್ಥರು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದಾಗ, ಗುಂಪು ಚದುರಿಸಲು ಪೊಲೀಸರು ಲಾಠಿ ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಘರ್ಷಣೆಯಲ್ಲಿ ಮಹಿಳೆಯರು ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಸ್ಥರು ಮತ್ತು ಮಹಿಳೆಯರು ನೆಲದ ಮೇಲೆ ಕೈಕಟ್ಟಿ ಕುಳಿತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಸಿರೆಯ ಸೆರಗು, ಯುವತಿಯರ ದುಪ್ಪಟ್ಟಗಳಿಂದಲೇ ಅವರ ಕೈಗಳನ್ನು ಕಟ್ಟಲಾಗಿದೆ. ಬಳಿಕ ಅವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್ ಮಾಡಿದ್ದ ಬಿಜೆಪಿ: ಟ್ವೀಟ್ ರದ್ದು ಮಾಡಿದ ಟ್ವಿಟರ್
हालाँकि @NitishKumar महिला सशक्तिकरण की बात करते हैं लेकिन देखिए कैसे महिला आरोपियों के साथ व्यवहार हो रहा हैं @ndtvindia pic.twitter.com/khpbf2Bf7n
— manish (@manishndtv) February 17, 2022
ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದರೂ, ಮಹಿಳಾ ಆರೋಪಿಗಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಿ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಅಕ್ರಮ ಮರಳುಗಾರಿಕೆಯನ್ನು ನಿಭಾಯಿಸಲು, ಬಿಹಾರ ರಾಜ್ಯ ಗಣಿಗಾರಿಕೆ ನಿಗಮವು ಈ ತಿಂಗಳ ಆರಂಭದಲ್ಲಿ ಎಲ್ಲಾ ಮರಳು ಗಣಿಗಾರಿಕೆ ಸ್ಥಳಗಳ ಪರಿಸರ ಲೆಕ್ಕಪರಿಶೋಧನೆಯನ್ನು ನಡೆಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಹಿನ್ನೆಲೆ ಕೆಲಸ ನಿರ್ವಹಿಸುತ್ತಿರುವ ಖಾಸಗಿ ಸಂಸ್ಥೆಗಳು ಮರಳು ದಡಗಳನ್ನು ಪರಿಶೀಲಿಸಲು ತಂತ್ರಜ್ಞಾನ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ (ಕಾನೂನು ಮತ್ತು ಸುವ್ಯವಸ್ಥೆ), “ಬೆಳಗಂಜ್‌ನಲ್ಲಿ ಮರಳು ಗಣಿಗಾರಿಕೆಯ ಹರಾಜು ಸಂದರ್ಭದಲ್ಲಿ, ಕೆಲವು ಗ್ರಾಮಸ್ಥರು ಕಲ್ಲು ತೂರಾಟ ಆರಂಭಿಸಿದರು, ಇದರಲ್ಲಿ ಒಂಬತ್ತು ಪೊಲೀಸರು ಗಾಯಗೊಂಡಿದ್ದಾರೆ” ಎಂದು ಹೇಳಿದ್ದಾರೆ.
ಗುಂಪನ್ನು ಚದುರಿಸಲು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು, ಜಲಫಿರಂಗಿಗಳನ್ನು ಬಳಸಿದರು ಮತ್ತು ಅಶ್ರುವಾಯು ಸಿಡಿಸಿದ್ದಾರೆ. ಘರ್ಷಣೆಯಲ್ಲಿ ಮಹಿಳೆಯರು ಸೇರಿದಂತೆ ಕೆಲವು ಗ್ರಾಮಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಪೊಲೀಸರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಘಾಜಿಯಾಬಾದ್: ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟಿಸುತ್ತಿದ್ದ ಮಹಿಳೆಯರ ಮೇಲೆ ಪೊಲೀಸರ ಹಲ್ಲೆ


