Homeಮುಖಪುಟಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

ಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಮೊದಲ ಎರಡು ಹಂತದ ಮತದಾನದಲ್ಲಿ ಈಗಾಗಲೇ ತಮ್ಮ ಪಕ್ಷವು “ಶತಕ” ಬಾರಿಸಿದೆ. ನಾಲ್ಕನೇ ಹಂತದ ವೇಳೆಗೆ ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನಡೆದ ಮೊದಲ ಎರಡು ಹಂತದ ಚುನಾವಣೆಯಲ್ಲಿ 113 ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ತಲಾ 59 ಕ್ಷೇತ್ರಗಳಿಗೆ ಮೂರನೇ ಹಂತದಲ್ಲಿ ಫೆಬ್ರವರಿ 20 ಮತ್ತು ನಾಲ್ಕನೇ ಹಂತದಲ್ಲಿ ಫೆಬ್ರವರಿ 23 ರಂದು ಮತದಾನ ನಡೆಯಲಿದೆ.

“ಮೊದಲ ಎರಡು ಹಂತಗಳಲ್ಲಿ ಈಗಾಗಲೇ ತಮ್ಮ ಪಕ್ಷವು ಶತಕ ಬಾರಿಸಿದೆ. ನಾಲ್ಕನೇ ಹಂತದ ಮತದಾನದ ವೇಳೆಗೆ ಸಮಾಜವಾದಿ ಪಕ್ಷವು ಸರ್ಕಾರ ರಚಿಸಲು ಬೇಕಾದ ಸಂಖ್ಯೆಯನ್ನು ಹೊಂದಿರುತ್ತದೆ” ಎಂದು ಫಿರೋಜಾಬಾದ್‌ನ ನಾಸಿರ್‌ಪುರ ಪ್ರದೇಶದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಫಿರೋಜಾಬಾದ್ ಕ್ಷೇತ್ರದಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. “ಫಿರೋಜಾಬಾದ್‌ನ ಜನರು ಈ ಬಾರಿ ಬಿಜೆಪಿಯ ಕಣ್ಣು ತೆರೆಸುತ್ತಾರೆ” ಎಂದಿದ್ದಾರೆ. ರಾಜ್ಯದಲ್ಲಿ ಎಸ್‌ಪಿ ಸರ್ಕಾರ ರಚನೆಯಾದ ನಂತರ ಉತ್ತರ ಪ್ರದೇಶದಲ್ಲಿ ಜಾತಿ ಗಣತಿ, ಎಲ್ಲಾ ಜಾತಿಗಳಿಗೆ ಸಮಾನ ಪ್ರಾತಿನಿಧ್ಯ ಮತ್ತು ಘನತೆಯ ಭರವಸೆ ನೀಡಿದ್ದಾರೆ. 

ಇದನ್ನೂ ಓದಿ: ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

“ಪ್ರಜಾಪ್ರಭುತ್ವ ಉಳಿಸುವ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಉಳಿಸುವ, ಅವಮಾನಕ್ಕೊಳಗಾದ ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಗೌರವ ಉಳಿಸುವ ಚುನಾವಣೆ ಇದಾಗಿದೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ, ಕಾನೂನನ್ನು ಉಲ್ಲಂಘಿಸಬೇಕಾದವರು ಅಥವಾ ಕಾನೂನಿನ ಪ್ರಕಾರ ಕೆಲಸ ಮಾಡದಿರುವವರು ಸಮಾಜವಾದಿ ಪಕ್ಷಕ್ಕೆ ಮತ ಹಾಕಬೇಕಾಗಿಲ್ಲ” ಎಂದು ಹೇಳಿದ್ದಾರೆ.

ಬಿಜೆಪಿಯವರು ಜನರಿಗೆ ದ್ರೋಹ ಎಸಗಿದ್ದಾರೆ ಎಂದು ಆರೋಪಿಸಿರುವ ಅವರು, “ಅವರ ಮಾತುಗಳನ್ನು ಕೇಳಿ, ಸಣ್ಣ ನಾಯಕರು ಸಣ್ಣ ಸುಳ್ಳು ಹೇಳುತ್ತಾರೆ, ದೊಡ್ಡವರು ದೊಡ್ಡ ಸುಳ್ಳು ಹೇಳುತ್ತಾರೆ, ಮತ್ತೂ ದೊಡ್ಡವರು ಇನ್ನಷ್ಟು ದೊಡ್ಡ ಸುಳ್ಳು ಹೇಳುತ್ತಾರೆ. ಬಿಜೆಪಿಯು ಯುವಕರಿಗೆ ಉದ್ಯೋಗ, ರೈತರಿಗೆ ಆದಾಯ ದ್ವಿಗುಣಗೊಳಿಸುವ ಭರವಸೆಯನ್ನು ಈಡೇರಿಸಿಲ್ಲ” ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರ ವಿಮಾನ ನಿಲ್ದಾಣ, ರೈಲು, ರೈಲ್ವೇ ಸೇರಿದಂತೆ ಎಲ್ಲವನ್ನು ಮಾರಾಟ ಮಾಡುತ್ತಿದೆ ಇದರಿಂದ ಯಾರಿಗೂ ಉದ್ಯೋಗದಲ್ಲಿ ಮೀಸಲಾತಿ ಸಿಗುವುದಿಲ್ಲ ಎಂದಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ಹೋರಾಡಿದ ಸಮಾಜವಾದಿ ತತ್ವಗಳ ಮೇಲೆ ಕೆಲಸ ಮಾಡುವುದಾಗಿ ಅಖಿಲೇಶ್ ಯಾದವ್ ಜನರಿಗೆ ಭರವಸೆ ನೀಡಿದ್ದಾರೆ.

ಇನ್ನು, ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶ ಬರುವ ಮೊದಲೆ ಬಿಜೆಪಿ ಈ ಬಾರಿ ಮತ್ತೆ ಸರ್ಕಾರ ರಚಿಸುವುದಿಲ್ಲ. ಸೋಲನುಭವಿಸಲಿದೆ ಎಂಬ ಮಾತುಗಳು ಕೇಳಿ ಬಂದಿವೆ. ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಈ ಬಗ್ಗೆ ದಿ ವೈರ್‌ಗೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಚುನಾವಣೆ ನಡೆದಿರುವ ಎರಡು ಹಂತಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತು ಸಂಘದ ಉನ್ನತ ಪದಾಧಿಕಾರಿಗಳೊಂದಿಗೆ ವರ್ಚುವಲ್ ಕಾನ್ಫರೆನ್ಸ್ ನಡೆಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ -2022: ಬಿಜೆಪಿ ಸೋಲಿನ ಭವಿಷ್ಯ ನುಡಿದ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...