Homeಕರ್ನಾಟಕವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

ವಿಜಯಪುರ: ತಿಲಕ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

- Advertisement -
- Advertisement -

ಹಿಜಾಬ್‌ ಹಾಗೂ ಕೇಸರಿ ಶಾಲು ಧರಿಸುವ ವಿವಾದ ಬೇರೆ ಬೇರೆ ರೂಪುಗಳನ್ನು ಪಡೆದುಕೊಳ್ಳುತ್ತಿದೆ. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಜನರು ತಪ್ಪಾಗಿ ಅರ್ಥ ಮಾಡಿಕೊಂಡಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ.

ಮಧ್ಯಂತರ ಆದೇಶ ಇಡೀ ರಾಜ್ಯದ ಎಲ್ಲ ಶಾಲಾ, ಕಾಲೇಜಿಗೆ ಅನ್ವಯವಾಗುತ್ತದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಹೊರಗಡೆ ನಿಲ್ಲಿಸುತ್ತಿರುವ ವಿದ್ಯಮಾನಗಳು ರಾಜ್ಯದ ಹಲವೆಡೆ ಕಂಡು ಬರುತ್ತಿವೆ. ಜೊತೆಗೆ ವಿಜಯಪುರ ಜಿಲ್ಲೆಯಲ್ಲಿ ತಿಲಕ ಧರಿಸಿ ಬಂದ ವಿದ್ಯಾರ್ಥಿಗೂ ಪ್ರವೇಶ ನಿರಾಕರಿಸಿರುವ ಘಟನೆ ನಡೆದಿದೆ.

ತಿಲಕ ಧರಿಸಿದ್ದಕ್ಕೆ ವಿದ್ಯಾರ್ಥಿಯೊಬ್ಬನಿಗೆ ಪ್ರವೇಶ ನಿರಾಕರಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದಿದೆ.

ಮೂಲಗಳ ಪ್ರಕಾರ, ಕಾಲೇಜು ಅಧಿಕಾರಿಗಳು ಕಾಲೇಜಿಗೆ ಪ್ರವೇಶಿಸುವ ಮೊದಲು ತಿಲಕವನ್ನು ತೆಗೆಯುವಂತೆ ವಿದ್ಯಾರ್ಥಿಗೆ  ಸೂಚಿಸಲಾಯಿತು. ವಿದ್ಯಾರ್ಥಿ ನಿರಾಕರಿಸಿದಾಗ, ಮನೆಗೆ ವಾಪಸ್‌ ಹೋಗುವಂತೆ ತಿಳಿಸಲಾಯಿತು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಉಪನ್ಯಾಸಕರ ಜತೆ ಮಾತಿನ ಚಕಮಕಿ ನಡೆಸಿದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಭಜರಂಗದಳದ ಕಾರ್ಯಕರ್ತರು ಸೇರಿದಂತೆ ವಿವಿಧ ಹಿಂದುತ್ವ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು ಎಂದು ‘ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಹೈಕೋರ್ಟ್ ಮಧ್ಯಂತರ ಆದೇಶವು ಧಾರ್ಮಿಕ ಬಟ್ಟೆಗಳನ್ನು ಧರಿಸುವುದನ್ನು ಮಾತ್ರ ನಿರ್ಬಂಧಿಸಿದೆ. ತಿಲಕವನ್ನು ಧರಿಸುವುದನ್ನು ನಿರ್ಬಂಧಿಸಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಪಾದಿಸಿದರು. ಕೂಡಲೇ ಕಾಲೇಜಿಗೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿ, “ಸಿಂಧೂರವು ಧಾರ್ಮಿಕ ಸಂಕೇತವಲ್ಲ. ಇದು ದೇಶದ ಸಂಸ್ಕೃತಿಯ ಭಾಗವಾಗಿದೆ. ಧಾರ್ಮಿಕ ಚಿಹ್ನೆಗಳ ಕುರಿತು ಶಿಕ್ಷಣ ಇಲಾಖೆಯ ಸುತ್ತೋಲೆಗೆ ಅನುಗುಣವಾಗಿ ಇದನ್ನು ನಿಷೇಧಿಸಲಾಗುವುದಿಲ್ಲ” ಎಂದು ‘ದಿ ಹಿಂದೂ’ಗೆ ತಿಳಿಸಿರುವುದಾಗಿ ಪತ್ರಕರ್ತ ರಿಷಿಕೇಶ್‌ ಬಹದ್ದೂರ್‌ ದೇಸಾಯಿ ಟ್ವೀಟ್ ಮಾಡಿದ್ದಾರೆ.

ಕೋರ್ಟ್ ಆದೇಶ ಹೇಳುವುದೇನು?

ಈಗಾಗಲೇ ಕಾಲೇಜು ಅಭಿವೃದ್ಧಿ ಸಮಿತಿ ವಸ್ತ್ರ ಸಂಹಿತೆಯನ್ನು ಸೂಚಿಸಿರುವಲ್ಲಿ ಮಾತ್ರ (ಅಂದರೆ ವಿವಾದಕ್ಕೆ ಒಳಗಾಗಿರುವ ಕಾಲೇಜುಗಳಲ್ಲಿ ಮಾತ್ರ) ಹೈಕೋರ್ಟ್‌ನ ಮಧ್ಯಂತರ ಆದೇಶ ಅನ್ವಯವಾಗುತ್ತದೆ. ಆ ಪ್ರಕಾರ ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ.

ಆದರೆ ಈ ಕುರಿತು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಜೊತೆಗೆ ಶಿಕ್ಷಣ ಇಲಾಖೆಯೂ ಆದೇಶವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಕೇಸರಿ ಶಾಲು, ಹಿಬಾಬ್‌ ಥರದ ಧಾರ್ಮಿಕವನ್ನು ಧರಿಸದಂತೆ ಕೋರ್ಟ್ ಸೂಚಿಸಿರುವುದು ಕರ್ನಾಟಕದ ಎಲ್ಲ ಶಾಲಾ, ಕಾಲೇಜುಗಳಿಗೂ ಅನ್ವಯವಾಗುವುದಿಲ್ಲ ಎಂಬುದು ಸ್ಪಷ್ಟ.


ಇದನ್ನೂ ಓದಿರಿ: ಸಮಾಜಘಾತುಕ ಶಕ್ತಿಗಳು ಹಿಜಾಬ್‌ ಧರಿಸದಂತೆ ನಿರ್ಬಂಧ ವಿಧಿಸಿದರೆ ಅವರ ವಿರುದ್ಧ FIR ದಾಖಲಿಸಿ: ಮುಖ್ಯ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...