Homeಮುಖಪುಟಸಿಎಎ ಹೋರಾಟಗಾರರಿಂದ ವಸೂಲಿ ಮಾಡಿದ್ದ ನಷ್ಟ ಪರಿಹಾರ ವಾಪಸ್ ನೀಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಸಿಎಎ ಹೋರಾಟಗಾರರಿಂದ ವಸೂಲಿ ಮಾಡಿದ್ದ ನಷ್ಟ ಪರಿಹಾರ ವಾಪಸ್ ನೀಡಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಹಾನಿಯ ಪರಿಹಾರವಾಗಿ ಹೋರಾಟಗಾರರಿಂದ ವಸೂಲಿ ಮಾಡಿದ್ದ ಕೋಟ್ಯಾಂತರ ರೂಪಾಯಿಯನ್ನು ಮರುಪಾವತಿ ಮಾಡಬೇಕು ಎಂದು ಸುಪ್ರೀಂಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿದೆ.

ಇದೇ ವೇಳೆ ಈ ಪ್ರತಿಭಟನೆ ವೇಳೆ ಉಂಟಾದ ಹಾನಿಯ ವಸೂಲಾತಿಗಾಗಿ ನೀಡಲಾಗಿದ್ದ 274 ನೋಟಿಸ್‌ಗಳನ್ನು ಹಿಂಪಡೆದಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧದ ಆಪಾದಿತ ಸಿಎಎ ವಿರೋಧಿ ಪ್ರತಿಭಟನಾಕಾರರ ವಿರುದ್ಧ ಹೊಸ ಕಾನೂನಿನ ಅಡಿಯಲ್ಲಿ ಮುಂದುವರಿಯಲು ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ. ಈ ಕಾನೂನಿನ ಅಡಿಯಲ್ಲಿ ರಚಿಸಲಾದ ನ್ಯಾಯಮಂಡಳಿಗಳು ಅಂತಹ ವಿಷಯಗಳನ್ನು ನೋಡಿಕೊಳ್ಳುತ್ತವೆ ಎಂದು ರಾಜ್ಯ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ತಿಳಿಸಿದ್ದಾರೆ.

ನ್ಯಾಯಮೂರ್ತಿಗಳ ಪೀಠ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಅವರ ಪೀಠ, 2019 ರಲ್ಲಿ ನಡೆದ ಗಲಭೆಯ ಆಪಾದಿತ ಪ್ರತಿಭಟನಾಕಾರರಿಂದ ವಸೂಲಿಯಾದ ಕೋಟ್ಯಂತರ ರೂಪಾಯಿ ಮೌಲ್ಯದ ಸಂಪೂರ್ಣ ಮೊತ್ತವನ್ನು ರಾಜ್ಯ ಸರ್ಕಾರ ಮರುಪಾವತಿ ಮಾಡಬೇಕು ಎಂದು ಆದೇಶಿಸಿದೆ.

ಇದನ್ನೂ ಓದಿ: ಹಳೆಯ ಪ್ರಕರಣ ಕೆದಕಿದ ಯುಪಿ ಪೊಲೀಸರು: ಸಿಎಎ ವಿರೋಧಿ ನಾಲ್ವರು ಪ್ರತಿಭಟನಾಕಾರರ ಬಂಧನ; ಜಾಮೀನು

ಫೆಬ್ರವರಿ 11 ರಂದು, ಆಪಾದಿತ ಪ್ರತಿಭಟನಾಕಾರರಿಂದ ಆಸ್ತಿ ಜಪ್ತಿ ಮಾಡುವುದಕ್ಕೆ ಉತ್ತರ ಪ್ರದೇಶ ಸರ್ಕಾರ ಯತ್ನಿಸಿರುವುದನ್ನು ಸರ್ವೋಚ್ಚ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು.

“ಈ ಸಂಬಂಧ ಪ್ರಕ್ರಿಯೆಯನ್ನು  ಹಿಂಪಡೆಯಲು ರಾಜ್ಯಕ್ಕೆ ಒಂದು ಅಂತಿಮ ಅವಕಾಶವನ್ನು ನೀಡಲಾಗುವುದು. ಅಥವಾ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುವುದು. ನೀವು ಕಾನೂನಿನ ಅಡಿಯಲ್ಲಿ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಬೇಕು. ದಯವಿಟ್ಟು ಇದನ್ನು ಪರಿಶೀಲಿಸಿ, ನಾವು ಫೆಬ್ರವರಿ 18 ರವರೆಗೆ ಒಂದು ಅವಕಾಶವನ್ನು ನೀಡುತ್ತೇವೆ” ಎಂದು ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

’ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಸುತ್ತಾ ಉತ್ತರ ಪ್ರದೇಶ ಸರ್ಕಾರವು “ದೂರುದಾರ, ತೀರ್ಪುಗಾರ ಮತ್ತು ಪ್ರಾಸಿಕ್ಯೂಟರ್” ಎಲ್ಲವೂ ಆಗಿ ವರ್ತಿಸುತ್ತಿದೆ ಎಂದು ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ ಆಕ್ಷೇಪ ವ್ಯಕ್ತಪಡಿಸಿತ್ತು.

ಯುಪಿಯಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿ ಆಂದೋಲನದ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಿಂದ ಉಂಟಾದ ನಷ್ಟವನ್ನು ವಸೂಲಿ ಮಾಡಲು ಜಿಲ್ಲಾಡಳಿತವು ಆಪಾದಿತ ಪ್ರತಿಭಟನಾಕಾರರಿಗೆ ಕಳುಹಿಸಲಾದ ನೋಟಿಸ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಪರ್ವೇಜ್ ಆರೀಫ್ ಟಿಟು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಮನವಿಯಲ್ಲಿ ಆರು ವರ್ಷಗಳ ಹಿಂದೆ 94 ನೇ ವಯಸ್ಸಿನಲ್ಲಿ ಸಾವನ್ನಪ್ಪಿದ ವ್ಯಕ್ತಿಯ ವಿರುದ್ಧ ಮತ್ತು 90 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ಸೇರಿದಂತೆ ಇತರ ಹಲವರಿಗೆ ಇಂತಹ ನೋಟಿಸ್‌ಗಳನ್ನು ಕಳುಹಿಸಲಾಗಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಸಿಎಎ ವಿರೋಧಿ ಹೋರಾಟಗಾರರಿಗೆ ದಂಡ: ಯುಪಿ ಸರ್ಕಾರಕ್ಕೆ ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...