ಹಿರಿಯ ಚಿತ್ರನಟ, ಕಲಾತಪಸ್ವಿ ಎಂದೇ ಖ್ಯಾತರಾದ ರಾಜೇಶ್‌ರವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮೂಲತಃ ಬೆಂಗಳೂರಿನವರಾದ ರಾಜೇಶ್‌ರವರು ರಂಗಭೂಮಿ ಕಲಾವಿದರು. ನಾಟಕ ಮಂಡಳಿಯೊಂದನ್ನು ರಚಿಸಿ ಹಲವಾರು ನಾಟಕಗಳನ್ನು ಪ್ರದರ್ಶಿಸಿದ್ದಾರೆ. ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟು ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಬೃಂದಾವನ, ಕಪ್ಪುಬಿಳುಪು, ಎರಡು ಮುಖ, ದೇವರ ಮನೆ, ತವರು ಮನೆ ಅವರು ನಟಿಸಿದ ಪ್ರಮುಖ ಚಿತ್ರಗಳು.
ರಾಜೇಶ್‌ರವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು, ಸಿನಿಮಾ ಕ್ಷೇತ್ರದ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ.
ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/mRPsERxsRM
— Basavaraj S Bommai (@BSBommai) February 19, 2022
ಕನ್ನಡದ ಹಿರಿಯ ನಟ ರಾಜೇಶ್ ಸಾವು ಅನಿರೀಕ್ಷಿತ ಅಷ್ಟೇ ಆಘಾತಕಾರಿ. ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು. ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಸಿದ್ದರಾಮಯ್ಯನವರು ಟ್ವೀಟ್ ಮಾಡಿದ್ದಾರೆ.
ಕನ್ನಡದ ಹಿರಿಯ ನಟ ರಾಜೇಶ್ ಸಾವು ಅನಿರೀಕ್ಷಿತ ಅಷ್ಟೇ ಆಘಾತಕಾರಿ.
ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ
ಬೆಳೆದು ನಮ್ಮನ್ನೆಲ್ಲ ರಂಜಿಸಿದವರು.ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಅಗಲಿದ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. pic.twitter.com/JcCaQ6BnVr
— Siddaramaiah (@siddaramaiah) February 19, 2022
ಅಗಲಿದ ರಾಜೇಶ್‌ರವರ ಪಾರ್ಥೀವ ಶರೀರರವರನ್ನು ಸಂಜೆ 6.30ರವರೆಗೆ ಅವರ ವಿದ್ಯರಣ್ಯಪುರದ ನಿವಾಸದಲ್ಲಿ ಇಟ್ಟು, ನಂತರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ :ಮಕ್ಕಳ ಹಕ್ಕುಗಳ ಉಲ್ಲಂಘನೆ: ತಪ್ಪೊಪ್ಪಿಗೆ ಬರೆದುಕೊಟ್ಟ ಶಿವಮೊಗ್ಗ ಪತ್ರಕರ್ತರು!


