Homeಮುಖಪುಟಶಿವಮೊಗ್ಗದಲ್ಲಿನ ನಡೆದಿದ್ದು ರಾಜ್ಯ ಸರ್ಕಾರ ಪ್ರಾಯೋಜಿತ ಶವಯಾತ್ರೆ: ಸಿದ್ದರಾಮಯ್ಯ ಆರೋಪ

ಶಿವಮೊಗ್ಗದಲ್ಲಿನ ನಡೆದಿದ್ದು ರಾಜ್ಯ ಸರ್ಕಾರ ಪ್ರಾಯೋಜಿತ ಶವಯಾತ್ರೆ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ನಂತರ ನಡೆದ ಹಿಂಸಾಚಾರಕ್ಕೆ ಬಿಜೆಪಿ ಸರ್ಕಾರವೇ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈಶ್ವರಪ್ಪ ಬೇಕಂತಲೇ ಕುಮ್ಮಕ್ಕು ನೀಡಿದ್ದು, ಈ ಕುರಿತು ನ್ಯಾಯಾಂಗ ತನಿಖೆಯಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಹರ್ಷ ಕೊಲೆಯಾದ ದಿನವೇ 144 ಸೆಕ್ಷನ್ ಜಾರಿಯಾಗಿದ್ದರೂ ಮೃತನ ಶವಯಾತ್ರೆ ನಡೆಸಲು ಪೊಲೀಸ್ ಇಲಾಖೆ ಅವಕಾಶ ನೀಡಿದ್ದು ಹೇಗೆ? ಈ ಶವಯಾತ್ರೆಯಲ್ಲಿ ಸಚಿವ ಈಶ್ವರಪ್ಪ, ಸ್ಥಳೀಯ ಸಂಸದ ರಾಘವೇಂದ್ರ ಕೂಡ ಭಾಗವಹಿಸಿದ್ದರು, ಹೀಗಾಗಿ ಈ ಶವಯಾತ್ರೆಯನ್ನು ರಾಜ್ಯ ಸರ್ಕಾರದ ಪ್ರಾಯೋಜಿತ ಶವಯಾತ್ರೆ ಎನ್ನಬೇಕಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿದ್ದಾರೆ. ಅವರು ಮೊದಲು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿ ದೇಶದ್ರೋಹ ಎಸಗಿದ್ದರು, ಈಗ ತಮ್ಮ ಸರ್ಕಾರವೇ ವಿಧಿಸಿದ್ದ 144 ಸೆಕ್ಷನ್ ಮೀರಿ ಕಾನೂನಿಗೆ ಅಗೌರವ ತೋರಿದ್ದಾರೆ. ದೇಶದ ಸಂವಿಧಾನ, ರಾಷ್ಟ್ರ ಧ್ವಜ, ಸಂಸದೀಯ ವ್ಯವಸ್ಥೆಯ ಬಗ್ಗೆ ಗೌರವವೇ ಇಲ್ಲದಿರುವ ಈಶ್ವರಪ್ಪ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಅನರ್ಹರು. ಅವರು ದೇಶ ಮತ್ತು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರವರು ರಾಷ್ಟ್ರೀಯ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಷ್ಟ್ರ ಧ್ವಜಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿಯುತವಾದುದ್ದು ಎಂದಿದ್ದಾರೆ. ಜೊತೆಗೆ ಅವರಿಗೆ ತಾವು ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ. ಇವತ್ತು ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿ, ಆಸ್ತಿ ಪಾಸ್ತಿ ನಷ್ಟವಾಗಿದ್ದರೆ ಅದಕ್ಕೆ ಈಶ್ವರಪ್ಪ ಅವರೇ ನೇರ ಹೊಣೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೊಲೆ ಪ್ರಕರಣದ ತನಿಖೆಯ ಜೊತೆಗೆ ನಿನ್ನೆಯ ಶವ ಯಾತ್ರೆಯಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟವಾಗಿದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ, ಸಾಕಷ್ಟು ಜನರ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ತನಿಖೆಯಾಗಬೇಕು. ಹರ್ಷ ಕೊಲೆ ಪ್ರಕರಣವನ್ನು ಎನ್.ಐ.ಎ ಇಂದಲೋ ಅಥವಾ ಇತರೆ ಯಾವ ತನಿಖಾ ಸಂಸ್ಥೆಯ ಮೂಲಕವಾದರೂ ತನಿಖೆ ಮಾಡಲಿ, ಅದಕ್ಕೆ ನಮ್ಮ ತಕರಾರಿಲ್ಲ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆ ಆಗುವಂತೆ ಕಟ್ಟುನಿಟ್ಟಾಗಿ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಈಶ್ವರಪ್ಪ ಅವರದೇ ಪಕ್ಷದ ಸರ್ಕಾರ ಇದೆ. ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಗಳು ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಸಾಕ್ಷ್ಯಗಳು ಇದ್ದರೆ ಈ ಕೂಡಲೇ ಅವುಗಳನ್ನು ನಿಷೇಧ ಮಾಡಲಿ. ನಿಷೇಧ ಮಾಡಬೇಡಿ ಎಂದು ಅವರಿಗೆ ಅಡ್ಡ ಬರುತ್ತಿರುವವರಾದರೂ ಯಾರು? ಹಾಗಾಗಿ ಇಂದು ಸಂಜೆ ವಿಧಾನಸಭೆ ಮತ್ತು ವಿಧಾನ ಪರಿಷತ್ ನ ಎಲ್ಲಾ ಕಾಂಗ್ರೆಸ್ ಸದಸ್ಯರು ವಿಧಾನಸೌಧದಿಂದ ರಾಜಭವನದ ವರೆಗೆ ಕಾಲ್ನಡಿಗೆ ಮೂಲಕ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಿ ದೇಶದ್ರೋಹಿ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಶಾಂತವಾದ ಶಿವಮೊಗ್ಗ: ಬುಧವಾರ ಬೆಳಿಗ್ಗೆಯವರೆಗೂ 144 ಸೆಕ್ಷನ್ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...