Homeಕರ್ನಾಟಕನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

ನಟ, ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬ ಸದಸ್ಯರಿಗೆ ಯಾವುದೇ ಸುಳಿವು ನೀಡದೆ ಪೊಲೀಸರು ಚೇತನ್‌ ಅವರನ್ನು ಮಂಗಳವಾರ ಮೂರು ಗಂಟೆಯ ವೇಳೆಯಲ್ಲಿ ಠಾಣೆಗೆ ಕರೆದೊಯ್ದಿದ್ದರು.

ಚೇತನ್ ಅವರ ಪತ್ನಿ ಮೇಘಾ ಅವರು, ಪೊಲೀಸರ ವರ್ತನೆಯನ್ನು ಖಂಡಿಸಿ, ಫೇಸ್‌ಬುಕ್‌ ಲೈವ್ ಮೂಲಕ ಘಟನೆಯ ಕುರಿತು ಆತಂಕ ವ್ಯಕ್ತಪಡಿಸಿದ್ದರು. ಹಲವಾರು ಹೋರಾಟಗಾರರು ಶೇಷಾದ್ರಿಪುರಂ ಠಾಣೆಗೆ ಧಾವಿಸಿ ಚೇತನ್ ಬಿಡುಗಡೆಗೆ ಆಗ್ರಹಿಸಿದ್ದರು.

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ #ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿರಿ: ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...