Homeಕರ್ನಾಟಕನ್ಯಾಯಾಂಗ ಬಂಧನಕ್ಕೆ ನಟ ಚೇತನ್‌; ಇಂದು ಜಾಮೀನು ಅರ್ಜಿ ವಿಚಾರಣೆ

ನ್ಯಾಯಾಂಗ ಬಂಧನಕ್ಕೆ ನಟ ಚೇತನ್‌; ಇಂದು ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ವಯಲಿಕಾವಲ ಪೋಲಿಸ್ ಠಾಣೆಯಿಂದ ಶೇಷಾದ್ರಿಪುರಂ ಪೊಲೀಸರು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್‌ನಲ್ಲಿ ಇರುವ ನ್ಯಾಯಾಧೀಶರ ಮನೆಗೆ ಮಧ್ಯರಾತ್ರಿ 12.45ರ ವೇಳೆಗೆ ಕರೆದುಕೊಂಡು ಬಂದರು. ನ್ಯಾಯಾಧೀಶರು ವಿಚಾರಣೆ ನಡೆಸಿದರು.

ಹೈಕೋರ್ಟ್ ಹಿರಿಯ ವಕೀಲರಾದ ‌ಎಸ್‌.ಬಾಲನ್ ಅವರು ವಾದ ಮಂಡಿಸಿದರು. ಆದರೆ ನ್ಯಾಯಾಧೀಶರು ಸಮ್ಮತಿ ಸೂಚಿಸಲಿಲ್ಲ. ಚೇತನ್‌ ಅವರನ್ನು ನ್ಯಾಯಾಂಗ ವಿಚಾರಣೆಗೆಂದು 14 ದಿನಗಳ ಮಟ್ಟಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು (ಫೆ.23) ಜಾಮೀನು ಅರ್ಜಿ ವಿಚಾರಣೆಯಾಗಲಿದೆ.

ಕೇಂದ್ರ ಕಾರಾಗೃಹಕ್ಕೆ ಪೊಲೀಸರು ಚೇತನ್‌ ಅವರನ್ನು ತೆಗೆದುಕೊಂಡು ಹೋಗುವ ಮೊದಲು ಚೇತನ್‌ ಅವರ ಪತ್ನಿ ಮೇಘಾ ಅವರು ಕಣ್ಣೀರು ಹಾಕಿದರು. ನಂತರ ಅವರು ಜೈಲಿನಲ್ಲಿ ಇದ್ದು ಓದಲು ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ “annihilation of caste” (ಜಾತಿ ನಿರ್ಮೂಲನೆ) ಕೃತಿಯನ್ನು ಚೇತನ್‌ ಅವರಿಗೆ ನೀಡಿದರು.

ಆ ಸಮಯದಲ್ಲಿ ಚೇತನ್‌‌ ಅವರ ಫೋಟೋವನ್ನು ಅವರ ಪತ್ನಿ ಮೇಘಾ ಅವರು ಕ್ಲಿಕ್ಕಿಸಿದರು. ವಕೀಲರಾದ ಅನಂತ ನಾಯಕ, ಹರಿರಾಮ, ಸುನಿಲ್‌ ಗುನ್ನಾಪುರ ಇತರೆ 8 ಜನ ವಕೀಲರ ತಂಡ ಹಾಜರಿತ್ತು. ಭೀಮ್ ಆರ್ಮಿ ಸಂಘಟನೆಯ ಬ್ರಹ್ಮೇಂದ್ರ, ಶಿವಣ್ಣ, ಆರ್‌ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಹಾಗೂ ಇತರೆ ಇಪ್ಪತ್ತು ಜನರು ಸ್ಥಳದಲ್ಲಿ ಹಾಜರಿದ್ದರು.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿರಿ: ನಟ ಚೇತನ್‌ ಬಂಧನ: ಪೊಲೀಸರು ನೊಟೀಸ್ ಸಹ ನೀಡದೆ ಅಪಹರಿಸಿದ್ದಾರೆಂದು ಚೇತನ್ ಪತ್ನಿ ಮೇಘ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...