Homeಮುಖಪುಟವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

ವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವಾಟ್ಸಾಪ್ ಗ್ರೂಪ್‌ಗಳಲ್ಲಿ ಅದರ ಯಾವುದೇ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಗಳಿಗೆ ಗ್ರೂಪ್ ರಚನೆಕಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಗುಂಪಿನ ಅಡ್ಮಿನ್ ಒಬ್ಬರು ಪೋಸ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ವಾಟ್ಸಾಪ್ ಗ್ರೂಪ್‌ನ ರಚನೆಕಾರರ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಬಾಂಬೆ ಮತ್ತು ದೆಹಲಿ ಹೈಕೋರ್ಟ್‌ಗಳು ಈಗಾಗಳೇ ಈ ಬಗ್ಗೆ “ಇತರ ಸದಸ್ಯರಿಗಿಂತ ವಾಟ್ಸಾಪ್ ಗುಂಪಿನ ಅಡ್ಮಿನ್‌ಗೆ ಇರುವ ಏಕೈಕ ಸವಲತ್ತು ಎಂದರೆ ಅವರು ಗುಂಪಿಗೆ ಯಾವುದೇ ಸದಸ್ಯರನ್ನು ಸೇರಿಸಬಹುದು ಅಥವಾ ಗುಂಪಿನಿಂದ ತೆಗೆಯಬಹುದು” ಎಂದು ಉಲ್ಲೇಖಿಸಿರುವುದನ್ನು ನ್ಯಾಯಾಲಯ ಒತ್ತಿ ಹೇಳಿದೆ.

“ಗುಂಪಿನ ಸದಸ್ಯರು ಅದರಲ್ಲಿ ಏನು ಪೋಸ್ಟ್ ಮಾಡುತ್ತಿದ್ದಾರೆ ಎಂಬುದರ ಮೇಲೆ ಅವರು ಭೌತಿಕವಾಗಿ ಅಥವಾ ಯಾವುದೇ ನಿಯಂತ್ರಣವನ್ನು ಹೊಂದಿಲ್ಲ. ಅವರು ಗುಂಪಿನಲ್ಲಿ ಬರುವ ಸಂದೇಶಗಳನ್ನು ಮಾಡರೇಟ್ ಮಾಡಲು ಅಥವಾ ಸೆನ್ಸಾರ್ ಮಾಡಲು ಸಾಧ್ಯವಿಲ್ಲ. ಹೀಗಾಗಿ, ವಾಟ್ಸಾಪ್ ಗುಂಪಿನ ರಚನೆಕಾರರು ಗುಂಪಿನ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ವಿಚಾರಣೆ ನಡೆದ ಪ್ರಕರಣದಲ್ಲಿ, ಅರ್ಜಿದಾರರು ಫ್ರೆಂಡ್ಸ್ ಎಂಬ ವಾಟ್ಸಾಪ್ ಗ್ರೂಪ್ ರಚಿಸಿದ್ದರು. ಅವರು ತಮ್ಮೊಂದಿಗೆ ಇತರ ಇಬ್ಬರು ವ್ಯಕ್ತಿಗಳನ್ನು ಸಹ ಅಡ್ಮಿನ್‌ಗಳಾಗಿ ಮಾಡಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಮಕ್ಕಳು ಅಶ್ಲೀಲ ಕೃತ್ಯದಲ್ಲಿ ತೊಡಗಿರುವ ಪೋರ್ನ್ ವೀಡಿಯೊವನ್ನು ಗುಂಪಿನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಿಂದ ಪೊಲೀಸರು ಆ ವ್ಯಕ್ತಿಯ ವಿರುದ್ಧ POCSO ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ ದೂರು ದಾಖಲಿಸಿ, ಆರೋಪಿ ನಂ.1 ಎಂದಿದ್ದರು.

ವಾಟ್ಸಾಪ್ ಗ್ರೂಪ್ ರಚನೆ ಮಾಡಿದ್ದ ಅರ್ಜಿದಾರರನ್ನು ಆರೋಪಿ ನಂ. 2 ಎಂದು ಹೆಸರಿಸಲಾಗಿತ್ತು. ಅರ್ಜಿದಾರರು, ತಮ್ಮ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದರು. ತಾವು ಯಾವುದೇ ಅಪರಾಧ ಮಾಡಿಲ್ಲ ಎಂದು ಪ್ರತಿಪಾದಿಸಿದ್ದರು.

ಹೈಕೋರ್ಟ್ ಅರ್ಜಿದಾರರ ವಾದವನ್ನು ಒಪ್ಪಿಕೊಂಡಿತ್ತು. “ಅರ್ಜಿದಾರರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಆಪಾದಿತ ಅಶ್ಲೀಲ ವಸ್ತುಗಳನ್ನು ಪ್ರಕಟಿಸಿದ್ದಾರೆ, ಪ್ರಸಾರ ಮಾಡಿದ್ದಾರೆ ಎಂದು ಸೂಚಿಸಲು ಯಾವುದೇ ದಾಖಲೆಗಳಿಲ್ಲ. ಇದರಿಂದ ಆನ್‌ಲೈನ್‌ನಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂಬುದಕ್ಕೆ ಸಾಕ್ಷಿಯಿಲ್ಲ. ಜೊತೆಗೆ ಅರ್ಜಿದಾರರು ತನ್ನ ಲೈಂಗಿಕ ತೃಪ್ತಿಗಾಗಿ ಯಾವುದೇ ರೀತಿಯ ಮಾಧ್ಯಮಗಳಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾನೆ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಮಕ್ಕಳ ಅಶ್ಲೀಲ ವಸ್ತುಗಳನ್ನು ಸಂಗ್ರಹಿಸಿದ ಯಾವುದೇ ಪ್ರಕರಣವನ್ನು ಪ್ರಾಸಿಕ್ಯೂಷನ್ ಹೊಂದಿಲ್ಲ. ಹೀಗಾಗಿ ಗ್ರೂಪ್‌ನ ಸದಸ್ಯರು ಮಾಡಿದ ಪೋಸ್ಟ್‌ಗೆ ಗ್ರೂಪ್‌ನ ರಚನಾಕಾರರನ್ನು ಹೊಣೆಗಾರರನ್ನಾಗಿ ಮಾಡುವ ಯಾವುದೇ ಕಾನೂನು ಇಲ್ಲ” ಎಂದು ನ್ಯಾಯಾಲಯ ಹೇಳಿದೆ.


ಇದನ್ನೂ ಓದಿ: ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...